ತೇಜಸ್ವಿನಿ ಅನಂತಕುಮಾರ್‌ಗೆ ಟಿಕೆಟ್ ಕೈ ತಪ್ಪಿಸಿದ್ದೇ ಬಿ.ಎಲ್‌ ಸಂತೋಷ್, ಶೆಟ್ಟರ್ ಗಂಭೀರ ಆರೋಪ!

By Gowthami K  |  First Published Apr 28, 2023, 5:40 PM IST

ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಮತ್ತೊಮ್ಮೆ ಬಿ.ಎಲ್ ಸಂತೋಷ ವಿರುದ್ಧ ವಾಗ್ದಾಳಿ ನಡೆಸಿದ್ದು, ತೇಜಸ್ವಿನಿ ಅನಂತಕುಮಾರ್‌ಗೆ ಟಿಕೆಟ್ ಕೈತಪ್ಪಿಸಿದ್ದು ಸಂತೋಷ್ ಅವರೇ ಎಂದು ಗಂಭೀರ ಆರೋಪ ಮಾಡಿದ್ದಾರೆ.


ಹುಬ್ಬಳ್ಳಿ (ಏ.28): ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೊಮ್ಮೆ ಬಿ.ಎಲ್ ಸಂತೋಷ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲಿಂಗಾಯತ ಲೀಡರ್‌ಶಿಪ್ ಇಲ್ಲದೆ ಸರ್ಕಾರ ಮಾಡ್ತೇವೆ ಅಂತಾ ಹೊರಟಿದ್ದಾರೆ. ಬಿ.ಎಲ್. ಸಂತೋಷ್ ಅವರೇ ತೇಜಸ್ವಿನಿ ಅನಂತಕುಮಾರ್‌ಗೆ ಟಿಕೆಟ್ ಕೈತಪ್ಪಿಸಿದ್ದು, ಇನ್ನೊಬ್ಬರ ಹೆಗಲ ಮೇಲೆ ಬಂದೂಕು ಇಟ್ಟು ಹೊಡೆಯುವುದು ಬಿಡಲಿ. ನೇರವಾಗಿ ನನ್ನ ಜೊತೆ ಯುದ್ಧಕ್ಕೆ ಬರಲಿ. ಬಿ.ಎಲ್. ಸಂತೋಷ್‌ಗೆ ಡೈರೆಕ್ಟ್ ಫೈಟ್ ಮಾಡುವ ಸ್ವಭಾವವಿಲ್ಲ. ಹಿಂಬಾಗಿಲ ರಾಜಕೀಯ ಮಾಡುವುದೇ ಇವರ ಸ್ವಭಾವ. ಬಿ.ಎಲ್. ಸಂತೋಷ್ ಬಗ್ಗೆ ರಾಷ್ಟ್ರದಲ್ಲಿ ಮೊದಲು ಧ್ವನಿ ಎತ್ತಿದವನೇ ನಾನು, ಬಹಳಷ್ಟು ಜನ ಫೋನ್ ಮಾಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಯಾವುದೇ ಲಾಬಿ ಮಾಡಿ, ಕೈಕಾಲು ಹಿಡಿದು ರಾಜಕೀಯ ಮಾಡಿದವನು ನಾನಲ್ಲ. ಹೀಗಾಗಿ ಅವರಿಗೆ ತಳಮಳ ಶುರುವಾಗಿದೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಮಾಡಿದ್ರು. ಪ್ರತಿದಿನ ಒಬ್ಬರು ಬಂದು ಪ್ರಚಾರ ಮಾಡಿ, ಸುತ್ತಾಡಿ ಹೋಗ್ತಿದ್ದಾರೆ. ಬೇರೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಚಿಂತೆಯಿಲ್ಲ, ಕೇವಲ ಶೆಟ್ಟರ್ ಒಬ್ಬರನ್ನು ಸೋಲಿಸಲು ಪ್ರಯತ್ನ ನಡೆಸುತ್ತಿದ್ದಾರೆ.

Tap to resize

Latest Videos

ಕೇಂದ್ರ ಮಂತ್ರಿಗಳು ಎಲ್ಲಾ ಕಾರ್ಪೋರೇಟರ್‌ಗಳ ಮೇಲೆ ನಿಗಾ ಇಟ್ಟಿದ್ದಾರೆ. ಪ್ರತಿ ಚಲನವಲನದ ಮೇಲೆ ನಿಗಾ ಇಟ್ಟು ಕಾಯುತ್ತಿದ್ದಾರೆ. ನಮ್ಮ ಬೆಂಬಲಿಗರಿಗೆ ಬೆದರಿಕೆ ಹಾಕುತ್ತಿದ್ದಾರೆ. ಬಿಜೆಪಿ ಮಾತ್ರವಲ್ಲಾ, ಕಾಂಗ್ರೆಸ್ ಕಾರ್ಪೊರೇಟರ್‌ಗಳಿಗೆ ಧಮ್ಕಿ ಹಾಕುತ್ತಿದ್ದಾರೆ. ನಾನು ಹೊರಗೆ ಹೋದ್ರೆ ಐಡಿಯಾಲಜಿ ನೆನಪಾಗಿದೆ. ಕಾಂಗ್ರೆಸ್‌ನವರನ್ನು ಕರೆತಂದು ಸರ್ಕಾರ ಮಾಡಿದಾಗ ಇವರ ಐಡಿಯಾಲಜಿ ಎಲ್ಲಿ ಹೋಗಿತ್ತು? ಕಾಂಗ್ರೆಸ್ ಐಡಿಯಾಲಜಿ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ. ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಡುತ್ತಿರುವ ಬಿಜೆಪಿಯಲ್ಲಿ ಯಾವುದೇ ಐಡಿಯಾಲಜಿ ಉಳಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೋಟೋಗಳಲ್ಲಿ: ಪ್ರಿಯಾಂಕ ಗಾಂಧಿ ಕರ್ನಾಟಕ ಭೇಟಿಯ ಕ್ಷಣಗಳು

ಬಿಜೆಪಿ ನನಗೆ ಟೀಕಿಸಿದಷ್ಟು ನಾನು ಜಯದ ಹತ್ತಿರ ಹೋಗುತ್ತೇನೆ. ನಾನು ಎಲ್ಲವನ್ನೂ ಫೇಸ್ ಮಾಡುತ್ತಿದ್ದೇನೆ, ಐತಿಹಾಸಿಕ ಗೆಲುವು ಸಾಧಿಸುತ್ತೇನೆ. ಶೆಟ್ಟರ್ ಮುಖ ನೋಡಿ ಓಟ್ ಹಾಕ್ತೀವಿ ಅನ್ನೋ ಭಾವನೆ ಜನರಲ್ಲಿ ಬರುತ್ತಿದೆ. ಬಿಜೆಪಿ ರಾಷ್ಟ್ರೀಯ ನಾಯಕರ ಚಾಲೆಂಜ್‌ನನ್ನು ಜನರೇ ಸ್ವೀಕರಿಸುತ್ತಿದ್ದಾರೆ. ಎಲ್ಲರೂ ನಮ್ಮನ್ನು ಗೆಲ್ಲಿಸಿ ಅಂತಾ ಕ್ಯಾಂಪೇನ್ ಮಾಡಿದರೆ. ಬಿಜೆಪಿಯವರು ಶೆಟ್ಟರ್ ಸೋಲಿಸಿ ಅಂತಾ ಕ್ಯಾಂಪೇನ್ ಮಾಡ್ತಿದ್ದಾರೆ. ಹೀಗಾಗಿ ಜನರಲ್ಲಿ ಸಿಂಪಥಿ ಕ್ರಿಯೇಟ್ ಆಗಿದೆ. ಜಗದೀಶ್ ಶೆಟ್ಟರ್ ಮಾತ್ರವಲ್ಲ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಅಂತಾ ಅಂದ್ಕೋತಿದಾರೆ. ಪಕ್ಷ ಬಿಟ್ಟು ಹೊರಗೆ ಹೋದಮೇಲೆ ಶೆಟ್ಟರ್ ಶಕ್ತಿ ಏನಂತಾ ಗೊತ್ತಾಗಿದೆ ಎಂದಿದ್ದಾರೆ.

ಈ ಹಿಂದೆ ಕೂಡ ನನಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಸಂತೋಷ ನೇರ ಕಾರಣ ಎಂದು ಜಗದೀಶ್ ಶೆಟ್ಟರ್ ಆರೋಪ ಮಾಡಿದ್ದರು. ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರಗೊಂಡು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸದ್ಯ ಕಾಂಗ್ರೆಸ್ ನಲ್ಲಿರುವ ಶೆಟ್ಟರ್ ಹುಬ್ಬಳ್ಳಿ ಧಾರವಾಡ ಕೇಂದ್ರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಬಿಜೆಪಿಯಿಂ ಮಹೇಶ್ ಟೆಂಗಿನಕಾಯಿ ಕಣದಲ್ಲಿದ್ದಾರೆ. ಸದ್ಯ ಶೆಟ್ಟರ್ ರನ್ನು ಸೋಲಿಸಲು ಬಿಜೆಪಿ ರಣತಂತ್ರ ಹೆಣೆದಿರುವುದಂತು ಸುಳ್ಳಲ್ಲ. ಬಿಜೆಪಿ ಹೈಕಮಾಂಡ್‌ ನಿಂದಲೇ ಶೆಟ್ಟರ್ ರನ್ನು ಸೋಲಿಸಲು ಬೇಕಾದ ಎಲ್ಲಾ ತಯಾರಿ ನಡೆಸಬೇಕೆಂಬ ಆದೇಶವೂ ಇದೆ.

ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿ ಗಲಾಟೆ ಯಾರೇ ಮಾಡಲಿ ನಾನು ಖಂಡಿಸುತ್ತೇನೆ:

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

click me!