
ಹುಬ್ಬಳ್ಳಿ (ಫೆ.08): ರಾಹುಲ್ ಗಾಂಧಿ ಇರೋವರೆಗೂ ಕಾಂಗ್ರೆಸ್ ಉದ್ದಾರ ಆಗಲ್ಲ. ನಮ್ಮ ದೇಶದಲ್ಲಿ ಕರ್ನಾಟಕ ಮತ್ತು ತೆಲಂಗಾಣ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ. ಅದು ನಮ್ಮ ತಪ್ಪಿನಿಂದಾಗಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಡೇ ಬೈಡೇ ಕೊಲ್ಯಾಪ್ಸ್ ಆಗತಿದೆ. ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಕುಸಿಯುತ್ತಿದೆ. ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಅಧಿಕಾರದಲ್ಲಿದೆ. ಅದು ನಮ್ಮ ತಪ್ಪಿನಿಂದ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ ಇರೋವರೆಗೂ ಕಾಂಗ್ರೆಸ್ ಉದ್ದಾರ ಆಗಲ್ಲ. ತೆಲಂಗಾಣ ,ಕರ್ನಾಟಕ ಸರ್ಕಾರ ಯಾವಾಗ ಬೇಕಾದರೂ ಪತನ ಆಗಬಹುದು. ಈ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಒಂದು ಕುಟುಂಬದ ಪಕ್ಷವಾಗಿದೆ ಎಂದು ತಿಳಿಸಿದರು.
ನಮ್ಮ ದೇಶದಲ್ಲಿ ಎಲ್ಲೆಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆಯೋ ಅಲ್ಲಿ ಮಾತ್ರ ಒಳ್ಳೆ ಕೆಲಸಗಳು ಆಗಿದೆ. ಹೀಗಾಗಿ ಡಬಲ್ ಇಂಜಿನ್ ಸರ್ಕಾರ ತಂದಿದ್ದಾರೆ. ದೆಹಲಿ ಜನ ಮೋದಿ ನಾಯಕತ್ವ ಒಪ್ಪಿದ್ದಾರೆ. ದೆಹಲಿಯನ್ನು ಅಭಿವೃದ್ದಿ ಮಾಡೋದಾಗಿ ಮೋದಿ ಹೇಳಿದ್ದಾರೆ. ನಾವು ಸ್ಪಷ್ಟ ಬಹುಮತದಲ್ಲಿ ಅಧಿಕಾರಕ್ಕೆ ಬರುತ್ತೇವೆ. ರಾಹುಲ್ ಗಾಂಧಿ ಇರೋವರೆಗೂ ಕಾಂಗ್ರೆಸ್ ಉದ್ದಾರ ಆಗಲ್ಲ. ಬಿಜೆಪಿಯಲ್ಲವೂ ಎಲ್ಲವೂ ಸರಿ ಇಲ್ಲ. ಭಿನ್ನಮತಕ್ಕೆ ಹೈಕಮಾಂಡ್ ನಾಯಕರು ಇತಿಶ್ರೀ ಹಾಕುತ್ತಾರೆ. ಅಧ್ಯಕ್ಷರ ಚುನಾವಣೆ ಬಂದಿದೆ. ಸರ್ವಾನುಮತದಿಂದ ಅಧ್ಯಕ್ಷರ ಆಯ್ಕೆ ಆಗಬೇಕು. ಚುನಾವಣೆ ಅನ್ನೋದು ಒಂದು ಪ್ರೊಸೆಸ್ ಎಂದು ತಿಳಿಸಿದರು.
ಇದನ್ನೂ ಓದಿ: Delhi Election 2025 Results Live ಆರಂಭಿಕ ಟ್ರೆಂಡ್‌ನಲ್ಲಿ ದೆಹಲಿಯಲ್ಲಿ ಬಿಜೆಪಿಗೆ ಪ್ರಚಂಡ ಮುನ್ನಡೆ
ದೆಹಲಿಯಲ್ಲಿ ನೀರಿಕ್ಷೆ ಮಾಡಿದ ಫಲಿತಾಂಶ ಬಂದಿದೆ. ದೆಹಲಿ ಜನರ ಆಶೀರ್ವಾದ ಬಿಜೆಪಿಗೆ ಸಿಕ್ಕಿದೆ. ಅಣ್ಣಾ ಹಜಾರೆ ಹೋರಾಟದಲ್ಲಿ ಕೇಜ್ರೀವಾಲ್ ಮುಂಚೂಣಿಯಲ್ಲಿ ಇದ್ದರು. ಅದನ್ನೆ ಇಟ್ಟುಕೊಂಡು ದೆಹಲಿಯ ವಿಧಾನಸಭಾ ಚುನಾವಣೆಯನ್ನು ಗೆದ್ದಿದ್ದರು. ಕಳೆದ 10 ವರ್ಷದ ಅವಧಿಯಲ್ಲಿ ಕೇಜ್ರೀವಾಲ್ ಅದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡರು. ಭ್ರಷ್ಟಾಚಾರದಲ್ಲಿ ತೊಡಗಿಕೊಂಡರು. ಲಿಕ್ಕರ್ ಹಗರಣದಲ್ಲಿ ಸಿಎಂ ಕೇಜ್ರೀವಾಲ್, ಸಚಿವ ಸಿಸೋಡಿಯಾ ಸೇರಿ ನಾಲ್ಕೈದು ಜನ ಮಿನಿಸ್ಟರ್ ಜೈಲಿಗೆ ಹೋಗಿ ಬಂದರು. ಕೇಂದ್ರದಲ್ಲಿ ಅಧಿಕಾರದಲ್ಲಿರೋ ಬಿಜೆಪಿ ಉತ್ತಮ ಆಡಳಿತ ಮಾಡುತ್ತಿದೆ. ಮೋದಿಯವರ ಆಡಳಿತ ನೋಡಿ ಜನ ಬಿಜೆಪಿಗೆ ಬೆಂಬಲಿಸಿದ್ದಾರೆ. ಡಬಲ್ ಎಂಜಿನ್ ಸರ್ಕಾರ ಬಂದರೆ ಅಭಿವೃದ್ಧಿ ಆಗುತ್ತೆ ಅಂತ ಆಶೀರ್ವಾದ ಮಾಡಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.