Devegowdaರ ತೃತೀಯ ರಂಗಕ್ಕೆ ಜಗದೀಶ್ ಶೆಟ್ಟರ್ ಲೇವಡಿ

By Suvarna News  |  First Published May 27, 2022, 3:24 PM IST

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ತೆಲಂಗಾಣ ಸಿಎಂ  ಭೇಟಿ ಮಾಡಿ ತೃತೀಯ ರಂಗದ ಬಗ್ಗೆ  ಮಾತುಕತೆ ನಡೆಸಿದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕರು ಅಲರ್ಟ್ ಆಗಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈ ಬಗ್ಗೆ ಲೇವಡಿ ಮಾಡಿದ್ದಾರೆ.


ಹುಬ್ಬಳ್ಳಿ (ಮೇ.27): ಭಾರತೀಯ ಜನತಾ ಪಕ್ಷಕ್ಕೆ (BJP) ಮೂರಲ್ಲ, ನಾಲ್ಕನೇ ರಂಗ ಬಂದರು ಸರಿಸಾಟಿಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (jagadish shettar) ಲೇವಡಿ ಮಾಡಿದರು.

ಹುಬ್ಬಳ್ಳಿಯಲ್ಲಿಂದು (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, BJP ನರೇಂದ್ರ ಮೋದಿ (Narendra modi) ಅವರ ನಾಯಕತ್ವದಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ಅವರ ರಾಷ್ಟ್ರೀಯ ನಾಯಕತ್ವ, ಜಗತ್ತಿನ ನಾಯಕತ್ವದಲ್ಲಿ ಕೆಲಸ ಮಾಡುತ್ತಿದ್ದೇವೆ. ಹಾಗಾಗಿ ಮೂರನೇ ರಂಗ ಆದರೂ ಮಾಡಿಕೊಳ್ಳಲಿ, ನಾಲ್ಕನೇ ರಂಗ ಆದರೂ ಮಾಡಿಕೊಳ್ಳಲಿ, ಐದನೇ ರಂಗ ಆದರೂ ಮಾಡಿಕೊಳ್ಳಲಿ ಅದು ಅವರಿಗೆ ಬಿಟ್ಟದ್ದು ಎಂದು ಪರೋಕ್ಷವಾಗಿ ಜೆಡಿಎಸ್ (JDS) ವರಿಷ್ಠ HD ದೇವೆಗೌಡರಿಗೆ (Devegowda) ಟಾಂಗ್ ಕೊಟ್ಟಿದ್ದಾರೆ.

Tap to resize

Latest Videos

ಬೇರೆ ಬೇರೆ ಪಕ್ಷದವರು ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತಾರೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡಾ ಎಂದು ನಿನ್ನೇ ಜೆಡಿಎಸ್ ವರಿಷ್ಠರ ದೇವೆಗೌಡರ ನೇತೃತ್ವದಲ್ಲಿ ನಡೆದ ತೃತೀಯ ರಂಗ ( third front) ರಚನೆ ಕುರಿತಂತೆ ನಡೆದ ಚರ್ಚೆ ಕುರಿತು ಮಾತನಾಡಿದರು.

Chitradurgaದ ಐತಿಹಾಸಿಕ ಮುರುಘಾ ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಅವರು ಬಿಜೆಪಿ ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಒಂದು ಕಡೆಗೆ ಅವರೇ ರಾಜಕೀಯವಾಗಿ ಆರೋಪ ಮಾಡತ್ತಾರೆ. ಮತ್ತೊಂದು ಕಡೆಗೆ ಕಾನೂನಿನ ಮೇಲೆ ಗೌರವವಿದೆ. ಕಾನೂನು ರೀತಿ ಹೋರಾಟ ಮಾಡತ್ತೇನೆ ಎನ್ನುತ್ತಾರೆ. ಡಿ‌.ಕೆ‌‌‌‌.ಶಿವಕುಮಾರ್ ಅವರಿಗೆ ಕಾನೂನಿನ ಮೇಲೆ ಗೌರವ ಇದ್ದರೆ, ಅವರದ್ದು ತಪ್ಪು ಇರಲಿಲ್ಲ ಎಂದರೆ ಕಾನೂನು ಪ್ರಕಾರ ಹೋರಾಟ ಮಾಡಲಿ ಅದು ಬಿಟ್ಟು ಎಲ್ಲದಕ್ಕೂ ರಾಜಕೀಯಕರಣ ಮಾಡೋದಕ್ಕೆ ಹೋಗಬೇಡಿ ಎಂದು ಹರಿಹಾಯ್ದರು.

ಹುಬ್ಬಳ್ಳಿ ಧಾರಾವಾಡ ಮೇಯರ್ ಉಪಮೇಯರ್ ಚುನಾವಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಇಂದು ಸಂಜೆ ಸಭೆ ಕರೆಯಲಾಗಿದೆ. ಅಲ್ಲಿ ಎಲ್ಲರ ಅಭಿಪ್ರಾಯ ಪಡೆದು ಮೇಯರ್ ಉಪಮೇಯರ್ ಆಯ್ಕೆ ಮಾಡಲಾಗುವುದು ಎಂದರು.

Mandya; ಖಾಯಿಲೆ ಎಂದು ಮಗುವನ್ನು ಚರ್ಚ್‌ನಲ್ಲಿ ಬಿಟ್ಟು ಪೋಷಕರು ಪರಾರಿ! 

ದೇವೇಗೌಡರ ಜತೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್‌ ಮಹತ್ವದ ಮಾತುಕತೆ!: ದೇಶದ ಹಲವಾರು ನಾಯಕರನ್ನು ಭೇಟಿ ಮಾಡುತ್ತಿರುವ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್  ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿ ಮಾಡಿದರು. ಇದರೊಂದಿಗೆ ಮತ್ತೆ ಬಿಜೆಪಿಗೆ ಪರ್ಯಾಯವಾಗಿ ತೃತೀಯ ರಂಗ ರಚನೆ ವಿಚಾರ ಮುನ್ನಲೆಗೆ ಬಂದಿದೆ. ಮುಂದಿನ ದಸರಾ-ವಿಜಯದಶಮಿ ಹೊತ್ತಿಗೆ ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ರಾಜಕೀಯ ಶಕ್ತಿಯನ್ನು ರೂಪಿಸುವ ಬಗ್ಗೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರು  ಬೆಂಗಳೂರಿನಲ್ಲಿ  ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ   ಭೇಟಿ ನೀಡಿದ ಕೆಸಿಆರ್ ಅವರು, ಸುಮಾರು ಮೂರೂವರೆ ಗಂಟೆಗೂ ಹೆಚ್ಚುಕಾಲ ಗೌಡರ ಜತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ಸಭೆಯಲ್ಲಿ ದೇವೇಗೌಡರು, ಕೆಸಿಎಆರ್‌ ಅರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯ ಯುವಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು. ಕರ್ನಾಟಕದ ರಾಜಕೀಯವೂ ರಾಷ್ಟ್ರ ರಾಜಕಾರಣದ ಬಗ್ಗೆ ಸಮಗ್ರವಾಗಿ ಕೆಸಿಆರ್‌ ಅವರು ದಳಪತಿಗಳ ಜತೆ ಮಾತುಕತೆ ನಡೆಸಿದರು. ಸುದೀರ್ಘ ಸಭೆಯ ನಂತರ ಕೆ.ಚಂದ್ರಶೇಖರ ರಾವ್‌ ಮತ್ತು ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

click me!