ಜಗದೀಶ್ ಶೆಟ್ಟರ್‌ಗೆ ಯಾಕೆ ಟಿಕೆಟ್ ನೀಡಿಲ್ಲವೆಂದು ಗೊತ್ತು, ಅದನ್ನು ಬಹಿರಂಗಪಡಿಸಲ್ಲ: ಅಮಿತ್ ಶಾ

Published : Apr 24, 2023, 07:53 PM ISTUpdated : Apr 24, 2023, 08:25 PM IST
ಜಗದೀಶ್ ಶೆಟ್ಟರ್‌ಗೆ ಯಾಕೆ ಟಿಕೆಟ್ ನೀಡಿಲ್ಲವೆಂದು ಗೊತ್ತು, ಅದನ್ನು ಬಹಿರಂಗಪಡಿಸಲ್ಲ: ಅಮಿತ್ ಶಾ

ಸಾರಾಂಶ

ಹುಬ್ಬಳ್ಳಿಯಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಅಮಿತ್ ಶಾ, ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಅವರು ಈ ಬಾರಿ ಚುನಾವಣೆಯಲ್ಲಿ ಗೆಲ್ಲುವುದಿಲ್ಲ ಎಂದು ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.

ಹುಬ್ಬಳ್ಳಿ (ಏ.24): ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಅವರು ಈ ಬಾರಿ ಚುನಾವಣೆಯಲ್ಲಿ ಗೆಲ್ಲುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಅವರು ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಎಲ್ಲಾ ವಿಚಾರ ಗೊತ್ತಿದೆ. ಅವರಿಗೆ ಟಿಕೆಟ್ ಯಾಕೆ ನೀಡಿಲ್ಲ ಎಂಬ ಬಗ್ಗೆ ಕೂಡ ತಿಳಿಸಿದ್ದೇವೆ. ಅದನ್ನು ನಾವು ಬಹಿರಂಗ ಪಡಿಸುವುದಿಲ್ಲ. ಈ ಬಗ್ಗೆ ಜನರು  ಕೇಳಿದರೆ ಅವರಿಗೆ ಉತ್ತರ ನೀಡ್ತೇವೆ ಎಂದು ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಸ್ವಯಂ ಚುನಾವಣೆಯಲ್ಲಿ‌ ಸೋಲ್ತಾರೆ. ಬಿಜೆಪಿ ತನ್ನದೇ ಆದ ಮತ ಬ್ಯಾಂಕ್ ಹೊಂದಿದೆ. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಶೆಟ್ಟರ್ ಒಬ್ಬರಿಗೇ ಟಿಕೆಟ್ ತಪ್ಪಿಸಿಲ್ಲ. ಹಲವಾರು ಹಿರಿಯರಿಗೆ ಟಿಕೆಟ್ ಕೊಟ್ಟಿಲ್ಲ. ಕಾರಣವನ್ನು ಅವರಿಗೇ ಹೇಳಿದ್ದೇವೆ. ಅವರು ಸಿಎಂ, ಉಪ ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ಯಾರ ಮುಷ್ಟಿಯಲ್ಲಿತ್ತು, ಯಾರ ಮುಷ್ಟಿಯಲ್ಲಿಯೂ ಇಲ್ಲ. ಹಿಂದಿನಿಂದ ಹೇಗಿದೆಯೋ ಹಾಗೆಯೇ ಇದೆ.  14 ದಿನದ ಮೊದಲೇ ಹೇಳುತ್ತಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಡಬಲ್‌ ಎಂಜೀನ್ ಸರ್ಕಾರ ದಿಂದ ರಾಜ್ಯದಲ್ಲಿ ಅಭಿವೃದ್ಧಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೀಸಲಾತಿ ನೀಡುವ ವಿಚಾರ ಸಂಬಂಧ ಮಾತನಾಡಿದ ಶಾ, ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಮುಂದುವರಿದಿದೆ. ಯಾವುದೇ ವ್ಯತಿರಿಕ್ತ ಅಭಿಪ್ರಾಯ ಸುಪ್ರೀಂ ಕೋರ್ಟ್ ನೀಡಿಲ್ಲ. ನಾವು ಜನರಿಗೆ ಮೀಸಲಾತಿ ನೀಡುವ ಬದ್ಧತೆ ಹೊಂದಿದ್ದೇವೆ. ನಾನು‌ ಕಾಂಗ್ರೆಸ್ ಪಕ್ಷವನ್ನು ಕೇಳುತ್ತಿದ್ದೇನೆ. ಯಾವುದನ್ನು ಕಡಿಮೆ ಮಾಡ್ತಿರಿ ಹೇಳಿ, ಯಾರಿಂದ ಮೀಸಲಾತಿ ವಾಪಸ್ ಪಡೆಯುತ್ತೀರಿ. ಕಾಂಗ್ರೆಸ್ ಲಿಂಗಾಯತರಿಗೆ ಎನು ಮಾಡಿದೆ. ಕಾಂಗ್ರೆಸ್ ಲಿಂಗಾಯತ ನಾಯಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ. ನಿಜಲಿಂಗಪ್ಪ ಅವರನ್ನು ಬಳಕೆ ಮಾಡಿ ಕೈಬಿಡಲಾಯಿತು ಎಂದು ಆರೋಪಿಸಿದ್ದಾರೆ.

ಮುಸ್ಲಿಂ ಮೀಸಲಾತಿ ತರ್ತೇವಿ ಅಂತ ಕಾಂಗ್ರೆಸ್ ಹೇಳ್ತಿದೆ. ಹಾಗಾದರೆ ಯಾರ ಮೀಸಲಾತಿ ಕಡಿತ ಮಾಡುತ್ತೆ ಅಂತ ಕಾಂಗ್ರೆಸ್ ಹೇಳಲಿ. ಧರ್ಮಾಧಾರಿತ ಮೀಸಲಾತಿಯನ್ನು ಎಂದೂ ಒಪ್ಪಲ್ಲ.  ಕಾಂಗ್ರೆಸ್ ನವರು ಲಿಂಗಾಯಿತರಿಗೆ ಪದೇ ಪದೇ ಅಪವಮಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪುತ್ತೂರು ಬಿಜೆಪಿಗೆ ಪುತ್ತಿಲ ಕಂಟಕ, ಹಿಂದೂ ಮುಖಂಡ-ಬಿಜೆಪಿ ಜಗಳದಲ್ಲಿ ಗೆಲ್ಲುತ್ತಾ

ಕಾಂಗ್ರೆಸ್ ನದ್ದು ರಿವರ್ಸ್ ಗೇರ್ . ಅವರಿಗೆ ಜನತೆ ತಕ್ಕ ಪಾಠ ಕಲಿಸ್ತಾರೆ. ಡಬಲ್ ಎಂಜಿನ್ ಸರ್ಕಾರ ಏನಂತ ಈಗಾಗಲೇ ಗೊತ್ತಾಗಿದೆ. ಕಾಂಗ್ರೆಸ್ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಿತ್ತು. ಅದನ್ನು ನಮ್ಮ ಸರ್ಕಾರ ರದ್ದು ಮಾಡಿದೆ ಸಾಮಾಜಿಕ ನ್ಯಾಯ ಕೊಡುವ ಕೆಲಸ ಮಾಡಿದೆ. ಧರ್ಮಾಧಾರಿತ ಮೀಸಲಾತಿ ಸಾಂವಿಧಾನಿಕವಲ್ಲ. ಮತ ಬ್ಯಾಂಕ್ ರಾಜಕಾರಣಕ್ಕಾಗಿ ಧರ್ಮಾಧಾರಿತ ಮೀಸಲಾತಿ ನೀಡಿತು.ಕಾಂಗ್ರೆಸ್ ಎಟಿಎಂ ಗಾಗಿ ಹುಡುಕಾಟ ನಡೆಸಿದೆ. ಪೂರ್ಣ ಬಹಯಮತದೊಂದಿಗೆ ಸ್ಥಿರ ಸರ್ಕಾರ ಕೊಡುವಂತೆ ಮನವಿ ಮಾಡಿದ್ದಾರೆ.

ಮೇ.3ರಂದು ಮುಲ್ಕಿಗೆ ಪ್ರಧಾನಿ ಮೋದಿ, ಮೇ.6ರಂದು ದಕ್ಷಿಣ ಕನ್ನಡಕ್ಕೆ ಯೋಗಿ: ಬಿಜೆಪಿ ಮೆಗಾ

ಕಾಂಗ್ರೆಸ್ ಪಿಎಫ್ಐಗೆ ವಿಶೇಷ ಟ್ರೀಟ್ ಮೆಂಟ್ ಕೊಟ್ಟಿತು. ಆದ್ರೆ ನಾವು ಇದಕ್ಕೆ ಲಗಾಮು ಹಾಕಿದ್ದೇವೆ. ಕಾಂಗ್ರೆಸ್ ಕಿತ್ತೂರು ಕರ್ನಾಟಕಕ್ಕೆ ಅಪಮಾನ ಮಾಡೋ ಕೆಲಸ ಮಾಡಿತು. ಮಹಾದಾಯಿ ಹೋರಾಟಕ್ಕೆ ಕಾಂಗ್ರೆಸ್ ನ್ಯಾಯ ನೀಡಲಿಲ್ಲ. ಆದ್ರೆ ನಮ್ಮ ಬಿಜೆಪಿ ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ಮಾಡಿದೆವು. ಕೃಷ್ಣಾ ಮೇಲ್ದಂಡೆ, ತುಂಗಾ ಮೇಲ್ದಂಡೆ ಯೋಜನೆಗಳಿಗೂ ಆದ್ಯತೆ ನೀಡಿದ್ದೇವೆ. ಕೆರೂರು ಲಿಫ್ಟ್ ಯೋಜನೆಗೂ ಆದ್ಯತೆ ನೀಡಿದ್ದೇವೆ. ಧಾರವಾಡ - ಬೆಳಗಾವಿ ರೈಲ್ವೆ ಯೋಜನೆಗೂ ಚಾಲನೆ ಸಿಗಲಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ