* ಸಿದ್ದರಾಮಯ್ಯ ಅತ್ಯಂತ ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ
* ಐದು ವರ್ಷ ಮುಖ್ಯಮಂತ್ರಿ ಆಗಿದ್ದವರ ಸಂಸ್ಕೃತಿ ಇದಲ್ಲ
* ಚಡ್ಡಿ ಹಾಕಿರುವ ಆರ್‌ಎಸ್‌ಎಸ್ ಕಾರ್ಯಕರ್ತರಿಂದಲೇ ದೇಶ ಒಗ್ಗಟ್ಟಾಗಿದೆ, ದೇಶ ಉಳಿದಿದೆ
ಹುಬ್ಬಳ್ಳಿ(ಜೂ.08): ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಗಳು. ಅವರ ಘನತೆಗೆ ತಕ್ಕಂತೆ ವರ್ತಿಸಬೇಕು. ಅದು ಬಿಟ್ಟು ಪುಂಡ, ಪೋಕರಿಗಳ ಸಾಮಾನ್ಯ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಟೀಕಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅತ್ಯಂತ ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಐದು ವರ್ಷ ಮುಖ್ಯಮಂತ್ರಿ ಆಗಿದ್ದವರ ಸಂಸ್ಕೃತಿ ಇದಲ್ಲ. ಚಡ್ಡಿ ಹಾಕಿರುವ ಆರ್‌ಎಸ್‌ಎಸ್ ಕಾರ್ಯಕರ್ತರಿಂದಲೇ ದೇಶ ಒಗ್ಗಟ್ಟಾಗಿದೆ, ದೇಶ ಉಳಿದಿದೆ. ಅವರು ಆರ್‌ಎಸ್‌ಎಸ್ ಬಗ್ಗೆ ಮಾತನಾಡಿ ಅಲ್ಪಸಂಖ್ಯಾತರ ಮತ ಪಡೆಯಬಹುದು ಎಂದುಕೊಂಡಿದ್ದಾರೆ. ಇದು ಸಿದ್ದರಾಮಯ್ಯಗೆ ತಿರುಗು ಬಾಣವಾಗುತ್ತೆ ಎಂದರು.
ನಮ್ಮಲ್ಲಿ ಅಭ್ಯರ್ಥಿ ಇಲ್ಲ ಅಂತೇನೂ ಹೊರಟ್ಟಿ ಕರೆತಂದಿಲ್ಲ: ಕಟೀಲ್
ಪದೇ ಪದೇ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದರೆ ಸಿದ್ದರಾಮಯ್ಯಗೆ ಉಳಿಗಾಲವಿಲ್ಲ. ಈಗಾಗಲೇ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗಿದೆ. ಸಿದ್ದರಾಮಯ್ಯನವರು ಇದನ್ನು ಅರಿತು ಮಾತನಾಡಲಿ ಎಂದು ತಿರುಗೇಟು ನೀಡಿದರು.
ಪಶ್ಚಿಮ ಶಿಕ್ಷಕರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಪರ ಮತದಾರರ ಒಲವಿದೆ. ಅವರ ಗೆಲವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.