ಲೋಕಸಭಾ ಚುನಾವಣೆ 2024: ಜಗದೀಶ ಶೆಟ್ಟರ್ ಬೆಳಗಾವಿಯಿಂದ ಅಖಾಡಕ್ಕೆ?, ಟಿಕೆಟ್ ಆಕಾಂಕ್ಷಿಗಳಲ್ಲಿ ತೀವ್ರ ನಿರಾಸೆ

By Kannadaprabha News  |  First Published Jan 26, 2024, 1:44 PM IST

ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ತನ್ನಕೋಟೆಯನ್ನು ಮತ್ತಷ್ಟು ಭದ್ರಗೊಳಿಸಲು ಸಿದ್ಧತೆ ನಡೆಸಿತ್ತು. ಪ್ರಬಲ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಿತ್ತು. ಇದೀಗ ಮಾಜಿ ಸಿಎಂ ಜಗದೀಶ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾಗಿರುವುದು ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಶಕ್ತಿ ತುಂಬಿದಂತಾಗಿದೆ. ಮಾತ್ರವಲ್ಲ, ಬೆಳಗಾವಿಗೂ ಅದು ವರದಾನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


ಶ್ರೀಶೈಲ ಮಠದ 

ಬೆಳಗಾವಿ(ಜ.26):  ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ರಾಜಕೀಯ ನಡೆ ಬೆಳಗಾವಿ ಕಮಲ ಪಾಳಯ ಟಿಕೆಟ್‌ ಆಕಾಂಕ್ಷಿಗಳಿಗೆ ಶಾಕ್‌ ಕೊಟ್ಟಿದೆ. 

Latest Videos

undefined

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದದಲೇ ಜಗದೀಶ್‌ ಶೆಟ್ಟರ್‌ ಸರ್ಧಿಸುವ ಸಾಧ್ಯತೆಗಳಿವೆ ಎನ್ನುವ ಮಾತುಗಳು ಮೊದಲಿನಿಂದಲೂ ಕೇಳಿಬರುತ್ತಿದ್ದವು. ಇದಕ್ಕೆ ಪುಷ್ಟಿ ನೀಡುವಂತೆ ಇದೀಗ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರಿದ್ದಾರೆ. ಹಾಗೆ ನೋಡಿದರೆ ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ತನ್ನಕೋಟೆಯನ್ನು ಮತ್ತಷ್ಟು ಭದ್ರಗೊಳಿಸಲು ಸಿದ್ಧತೆ ನಡೆಸಿತ್ತು. ಪ್ರಬಲ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಿತ್ತು. ಇದೀಗ ಮಾಜಿ ಸಿಎಂ ಜಗದೀಶ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾಗಿರುವುದು ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಶಕ್ತಿ ತುಂಬಿದಂತಾಗಿದೆ. ಮಾತ್ರವಲ್ಲ, ಬೆಳಗಾವಿಗೂ ಅದು ವರದಾನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ದಾವಣಗೆರೆ ಲೋಕಸಭಾ ಟಿಕೆಟ್ ಯಾರಿಗೆ? ಸತತ 4 ಸಲ ಗೆದ್ದಿರುವ ಸಿದ್ದೇಶ್ವರ ಮತ್ತೆ ಸ್ಪರ್ಧೆ?

ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ ನಿರೀಕ್ಷೆ ಹುಸಿಯಾಗಿರುವ ಹಿನ್ನೆಲೆಯಲ್ಲಿ ಜಗದೀಶ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು, ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಪರಾಭವಗೊಂಡಿದ್ದರು. ಆದರೂ ಕಾಂಗ್ರೆಸ್ ಪಕ್ಷ ಜಗದೀಶ ಶೆಟ್ಟರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಿತ್ತು. ಆದರೆ, ರಾಜಕಾರ ಣದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಶೆಟ್ಟರ್ ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿಗೆ ಮರಳಿ ದ್ದಾರೆ. ಈ ಬೆಳವಣಿಗೆಯಿಂದ ಬೆಳಗಾವಿ ಜಿಲ್ಲಾ ರಾಜಕೀಯ ಲೆಕ್ಕಾಚಾರಗಳೆಲ್ಲವೂ ಬದಲಾಗುವ ಸಾಧ್ಯತೆಗಳಿವೆ. 

ಸಂಸದರಾಗಿದ್ದ ಸುರೇಶ ಅಂಗಡಿ ಅವರ ಆಕಾಲಿಕ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ ತಮ್ಮ ಬೀಗರಾದ ಮಂಗಲ ಸುರೇಶ ಅಂಗಡಿ ಅವರ ಗೆಲುವಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಪ್ರಮುಖ ಪಾತ್ರ ವಹಿಸಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ಹಾಲಿ ಸಂಸದೆ ಮಂಗಲ ಅಂಗಡಿ ಅವರ ರಾಜಕೀಯ ನಡೆ ಕೂಡಡೋಲಾಯ ಮಾನವಾಗಿತ್ತು. ಮುಂಬರುವ ಲೋಕಸಭಾ ಚುನಾ ವಣೆಯಲ್ಲಿ ಮಂಗಲ ಅಂಗಡಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಗಳು ಕ್ಷೀಣಿಸಿದ್ದವು. ಇದರಿಂದಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಯೂ ದೊಡ್ಡದಾ ಗಿತ್ತು. ಆದರೆ, ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದರಿಂದ ಹಾಲಿ ಸಂಸದೆ ಮಂಗಲ ಅಂಗಡಿ ಅವರಿಗೆ ಮತ್ತೆ ಬಲ ಬಂದಂತಾಗಿದೆ.

ಅಂಗಡಿ ಕುಟುಂಬ ಒಪ್ಪಿಗೆ ನೀಡಿದರೆ ಜಗದೀಶ ತಮ್ಮ ಬೀಗರಾದ ಮಾಜಿ ಸಿಎಂ ಜಗದೀಶ ಶೆಟ್ಟರ್ ಮರಳಿ ಬಿಜೆಪಿಗೆ ಸೇರ್ಪಡೆಯಾ ಗಿರುವುದು ಖುಷಿವಿಚಾರ. ಇದರಿಂದಾಗಿ ನಮಗೆ ಬಲ ಬಂದಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಅಂಗಡಿ ಕುಟುಂಬಕ್ಕೆ ಬಿಜೆಪಿ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವಿದೆ. ನಾವು ಯಾರಿಗೂ ಟಿಕೆಟ್ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಅಂತ ಸಂಸದೆ ಮಂಗಲ ಅಂಗಡಿ ತಿಳಿಸಿದ್ದಾರೆ. 

ಲೋಕಸಭೆ ಚುನಾವಣೆ 2024: ಹಾಸನದಲ್ಲಿ ಪ್ರಜ್ವಲ್‌ಗೆ ಕಾಂಗ್ರೆಸ್‌ನಿಂದ ಪ್ರಬಲ ಎದುರಾಳಿ ಯಾರು?

ಮಾಜಿ ಸಿಎಂ ಜಗದೀಶ ಶೆಟ್ಟರ್ ಅದು ಬಿಜೆಪಿ ಸೇರಿರುವುದು ನಮ್ಮ ಕುಟುಂಬಕ್ಕೆ ಅಷ್ಟೇಯಲ್ಲ ಇಡೀ ಬಿಜೆಪಿ ಕಾರ್ಯಕರ್ತರಿಂಗ ಖುಷಿ ತಂದಿದೆ. ಈ ದಿನ ಉತ್ತರ ಕರ್ನಾಟಕ ಭಾಗಕ್ಕೆ ಶುಭ ದಿನ. ಸಂತೋಷದ ದಿನವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ನನ್ನ ಸ್ಪರ್ಧೆ ಕುರಿತು ಚರ್ಚೆ ಮಾಡಿಲ್ಲ. ಬೇರೆಯವರಿಗೆ ಟಿಕೆಟ್ ಕೊಟ್ಟರೂ ನಾವು ಕೆಲಸ ಮಾಡುತ್ತೇವೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷದ ಹೈಕಮಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಜಗದೀಶ ಶೆಟ್ಟರ್ ಸೊಸೆ ಶ್ರದ್ಧಾ ಅಂಗಡಿ (ಶೆಟ್ಟರ್) ಹೇಳಿದ್ದಾರೆ. 

ಶೆಟ್ಟರ್ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ, ಶೆಟ್ಟರ್ ಬೆಳಗಾವಿ ಚುನಾವಣಾ ಆಖಾಡಕ್ಕಿಳಿದರೆ ಆಗುವ ಲಾಭಗಳೇನು? ಹಾನಿಗಳೇನು? ಎನ್ನುವ ರಾಜಕೀಯ ಲೆಕ್ಕಾಚಾರಗಳು ಕೂಡ ಬಿಜೆಪಿಯಲ್ಲಿ ಶುರುವಾಗಿದೆ. ಏನೇ ಆಗಲಿ ಬೆಳಗಾವಿ ಕ್ಷೇತ್ರದಿಂದ ಅಂತಿಮವಾಗಿ ಯಾರಿಗೆ ಟಿಕೆಟ್ ಸಿಗುತ್ತದೆ ಎನ್ನುವುದನ್ನು ಕಾಯ್ದು ನೋಡಬೇಕು.

click me!