ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು ಹೋಗಲ್ಲ: ಡಿಕೆ ಶಿವಕುಮಾರ

By Kannadaprabha News  |  First Published Jan 25, 2024, 6:59 AM IST

ಹತಾಶಗೊಂಡಿರುವ ಬಿಜೆಪಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಯತ್ನಿಸುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.  ಆರ್ ಎಸ್ಎಸ್ ನಲ್ಲಿ ಗುರುತಿಸಿಕೊಂಡಿದ್ದ, ಬಿಜೆಪಿ ನಾಯಕರಾಗಿದ್ದ ಜಗದೀಶ್ ಶೆಟ್ಟರ್ 2023 ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸೇರಿದ್ದರು. 


ಬೆಂಗಳೂರು (ಜ.25): ಹತಾಶಗೊಂಡಿರುವ ಬಿಜೆಪಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಯತ್ನಿಸುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. 

ಆರ್ ಎಸ್ಎಸ್ ನಲ್ಲಿ ಗುರುತಿಸಿಕೊಂಡಿದ್ದ, ಬಿಜೆಪಿ ನಾಯಕರಾಗಿದ್ದ ಜಗದೀಶ್ ಶೆಟ್ಟರ್ 2023 ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸೇರಿದ್ದರು. 

Tap to resize

Latest Videos

ಮೈಸೂರಿನ ಬಯಲುಕುಪ್ಪೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಕಾಂಗ್ರೆಸ್ ನಲ್ಲಿರುವ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಪಕ್ಷಕ್ಕೆ ಕರೆದುಕೊಳ್ಳಲು ಹಲವು ಬಿಜೆಪಿ ನಾಯಕರು ಹತಾಶ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. 

ವಾರದೊಳಗೆ ಜಾತಿಗಣತಿ ವರದಿ ಸಿಎಂಗೆ ಸಲ್ಲಿಕೆ: ಜಯಪ್ರಕಾಶ್‌ ಹೆಗ್ಡೆ

ಇದು ಪಕ್ಷದ ದುರ್ಬಲತೆಯ ಸಂಕೇತವಾಗಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಗೆ ಅವರ ಬಳಿ ಅಭ್ಯರ್ಥಿಗಳಿಲ್ಲ. ಬಿಜೆಪಿ ಮತ್ತು ಜೆಡಿಎಸ್ ನಾಯಕತ್ವ ಮತ್ತು ಆತ್ಮಸ್ಥೈರ್ಯದ ಗಂಭೀರ ಕೊರತೆಯಿಂದ ಬಳಲುತ್ತಿವೆ ಮತ್ತು ಆದ್ದರಿಂದ ಅವರು ಕೈಜೋಡಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಟೀಕಾ ಪ್ರಹಾರ ನಡೆಸಿದ್ದಾರೆ. 

ಬಿಜೆಪಿಯನ್ನು ದೂರವಿಡಲು ಹೆಚ್ ಡಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿದ್ದೆವು, ಈಗ ಕುಮಾರಸ್ವಾಮಿಯವರು ತಮ್ಮ ಸರ್ಕಾರವನ್ನು ಬೀಳಿಸಿದವರನ್ನೇ ಅಪ್ಪಿಕೊಳ್ಳುತ್ತಿದ್ದಾರೆ. ಈ ಅಪವಿತ್ರ ಮೈತ್ರಿ ಎರಡು ಪಕ್ಷಗಳ ಸ್ಥಿತಿಗತಿಗೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಅವರು ಹೇಳಿದರು. 

ಬೇಡವೆಂದರೂ ಮುಸ್ಲಿಂ ಯುವಕನೊಂದಿಗೆ ಪ್ರೇಮ; ಸಹೋದರಿ, ತಾಯಿಯನ್ನ ಕೆರೆಗೆ ತಳ್ಳಿ ಕೊಂದ ಯುವಕ!

click me!