ಶೇ.75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸಬೇಕು: ಸಚಿವ ಆರ್‌.ಬಿ. ತಿಮ್ಮಾಪೂರ

Published : Dec 25, 2025, 06:49 AM IST
RB Timmapur

ಸಾರಾಂಶ

ಎಲ್ಲರೂ ಸಮಾನರಾಗಿ ಬಾಳುವೆ ನಡೆಸಬೇಕು.ಡಾ.ಅಂಬೇಡ್ಕರ್‌ ಅವರು ನೀಡಿರುವ ಮತದಾನ ಹಕ್ಕನ್ನು ಸರಿಯಾರಿ ಬಳಸಿಕೊಂಡು ನಮಗೆ ಬೇಕಾದ ನಾಯಕರನ್ನು ಆರಿಸಿ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಕರೆ ನೀಡಿದರು.

ಜಮಖಂಡಿ (ಡಿ.25): ಶೇ.75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸುವಂತಾಬೇಕು. ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು, ಕೆಟ್ಟ ಪ್ರವೃತ್ತಿ ಬಿಟ್ಟು ಒಗ್ಗಟ್ಟಿನಿಂದ ಬಸವತತ್ವಗಳ ಆಚರಣೆಗೆ ತರುವ ಮೂಲಕ ಎಲ್ಲರೂ ಸಮಾನರಾಗಿ ಬಾಳುವೆ ನಡೆಸಬೇಕು.ಡಾ.ಅಂಬೇಡ್ಕರ್‌ ಅವರು ನೀಡಿರುವ ಮತದಾನ ಹಕ್ಕನ್ನು ಸರಿಯಾರಿ ಬಳಸಿಕೊಂಡು ನಮಗೆ ಬೇಕಾದ ನಾಯಕರನ್ನು ಆರಿಸಿ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಕರೆ ನೀಡಿದರು.

ನಗರದ ಅಬುಬಕರ ದರ್ಗಾ ಮೈದಾನದಲ್ಲಿ ಶಹೀದ್‌ ಹಜರತ್‌ ಟಪ್ಪು ಸುಲ್ತಾನ ಜಯಂತ್ಯುತ್ಸವ ಸಮಿತಿ ವತಿಯಿಂದ ಏರ್ಪಡಿಸಿದ್ದ ಕೌಮಿ ಏಕತಾ ಸಮಾಮೇಶ ಉದ್ದೇಶಿಸಿ ಮಾತನಾಡಿ, ಟಿಪ್ಪು ಸುಲ್ತಾನರು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದರು. ಆಗಿನ ಕಾಲದಲ್ಲೇ ರಾಕೆಟ್‌ಗಳನ್ನು ತಯಾರಿಸಿ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು. ಅನೇಕ ಮಠ, ಮಂದಿರ ನಿರ್ಮಿಸಿದ್ದರು. ನಾಣ್ಯಗಳನ್ನು ಚಲಾವಣೆಗೆ ತಂದಿದ್ದರು. ಸ್ವಾರ್ಥಕ್ಕಾಗಿ ದೇಶವನ್ನು ಗಟ್ಟಿಯಾಗಿ ಕಟ್ಟಲು ಶ್ರಮಿಸಿದ ಟಿಪ್ಪು ಸುಲ್ತಾನರ ಇತಿಹಾಸ ತಿರುಚುವ ಕೆಲಸ ನಡೆದಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸಮಾವೇಶ ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ ಮತನಾಡಿ, 12 ವರ್ಷಗಳಿಂದ ಭಾರತ ಬದಲಾಗಿದೆ. ಹೆಜ್ಜೆ ಹೆಜ್ಜೆಗೂ ಸಮಸ್ಯೆಗಳು ಎದುರಾಗಿವೆ. ದಲಿತ, ಮುಸ್ಲಿಮರ ಸಮಸ್ಯೆಗಳು ಒಂದೇ ಆಗಿದ್ದು, ದಲಿತರು ಮುಸ್ಲಿಮರು ಒಗ್ಗಟ್ಟಿನಿಂದ ಹೋರಾಟ ಮಾಡುವ ಅವಶ್ಯಕತೆ ಇದೆ. ದಲಿತರು, ಮುಸ್ಲಿಮರು ಉನ್ನತ ಹುದ್ದೆ ಅಲಂಕರಿಸಬೇಕು.ದಲಿತರು ಮುಸ್ಲಿಮರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚಿಂತನೆಗಳು ನಡೆಯಬೇಕಿದೆ. ಸಮಸ್ಯೆಗಳ ಪರಿಹಾರಕ್ಕೆ ಒಗ್ಗಟ್ಟಿನಿಂದ ಒಂದೇ ವೇದಿಕೆಗೆ ಬರಬೇಕಿದೆ ಎಂದ ಅವರು, ದೆಹಲಿಗೆ ಹೋಗಲು ಯಾವ ಮಾರ್ಗ ಹಿಡಿಯಬೇಕು ಎಂಬುದರ ಬಗ್ಗೆ ಚಿಂತನೆಗಳು ನಡೆಯಬೇಕು. ಅದಕ್ಕಾಗಿ ಒಗ್ಗಟ್ಟು ಬೇಕೆಂದು ಮಾರ್ಮಿಕವಾಗಿ ನುಡಿದರು.

ಉನ್ನತ ಹುದ್ದೆ ಅಲಂಕರಿಸಬೇಕು

ಸಮಾವೇಶ ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ ಮತನಾಡಿ, 12 ವರ್ಷಗಳಿಂದ ಭಾರತ ಬದಲಾಗಿದೆ. ಹೆಜ್ಜೆ ಹೆಜ್ಜೆಗೂ ಸಮಸ್ಯೆಗಳು ಎದುರಾಗಿವೆ. ದಲಿತ, ಮುಸ್ಲಿಮರ ಸಮಸ್ಯೆಗಳು ಒಂದೇ ಆಗಿದ್ದು, ದಲಿತರು ಮುಸ್ಲಿಮರು ಒಗ್ಗಟ್ಟಿನಿಂದ ಹೋರಾಟ ಮಾಡುವ ಅವಶ್ಯಕತೆ ಇದೆ. ದಲಿತರು, ಮುಸ್ಲಿಮರು ಉನ್ನತ ಹುದ್ದೆ ಅಲಂಕರಿಸಬೇಕು. ದಲಿತರು ಮುಸ್ಲಿಮರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚಿಂತನೆಗಳು ನಡೆಯಬೇಕಿದೆ. ಸಮಸ್ಯೆಗಳ ಪರಿಹಾರಕ್ಕೆ ಒಗ್ಗಟ್ಟಿನಿಂದ ಒಂದೇ ವೇದಿಕೆಗೆ ಬರಬೇಕಿದೆ ಎಂದ ಅವರು, ದೆಹಲಿಗೆ ಹೋಗಲು ಯಾವ ಮಾರ್ಗ ಹಿಡಿಯಬೇಕು ಎಂಬುದರ ಬಗ್ಗೆ ಚಿಂತನೆಗಳು ನಡೆಯಬೇಕು. ಅದಕ್ಕಾಗಿ ಒಗ್ಗಟ್ಟು ಬೇಕೆಂದು ಮಾರ್ಮಿಕವಾಗಿ ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೈಸ್‌ ವಿರುದ್ಧ ಇಳಿವಯಸ್ಸಲ್ಲೂ ಕಾನೂನು ಹೋರಾಟ: ಗೌಡ
ಸಿದ್ದು 2028ರವರೆಗೂ ಸಿಎಂ, ಇಳಿಸಲು ಆಗೋಲ್ಲ: ಜಮೀರ್‌