
ಬೆಂಗಳೂರು (ಮೇ 4): 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಜಿದ್ದಾಜಿದ್ದಿನ ಕಣವಾಗಿದೆ. ಬಿಜೆಪಿ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳು ಮತ್ತು ಸ್ಥಳೀಯ ಪಕ್ಷ ಜೆಡಿಎಸ್ ಅಧಿಕಾರ ಹಿಡಿಯಲು ಭಾರಿ ಪೈಪೋಟಿ ನಡೆಸಿವೆ. ಹಿಂದೆಂದು ಕಾಣದಂತ ಸ್ಪರ್ಧೆ ಏರ್ಪಟ್ಟಿದೆ. ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಜನ್‌ಕಿ ಬಾತ್ ನಡೆಸಿದ ಅತೀ ದೊಡ್ಡ ಸಮೀಕ್ಷಾ ವರದಿ ಪ್ರಕಟಗೊಂಡಿದೆ. ವರದಿ ಪ್ರಕಾರ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತ ಪಡೆಯುವ ಪಕ್ಷವಾಗಿ ಹೊರಹೊಮ್ಮಲಿದೆ. ಆದರೆ, ಮತಗಳಿಕೆಯಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಕೊಂಚ ಮುಂದಿದೆ.
Jan Ki Baat Suvarna News Survey: ಮೋದಿ ಪ್ರಭಾವ, ಸರಳ ಬಹುಮತದತ್ತ ಬಿಜೆಪಿ!
ಇನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಜನ್‌ಕಿ ಬಾತ್ ಸಮೀಕ್ಷೆಯಲ್ಲಿ ಏ.14ರಂದು ಬಿಡುಗಡೆ ಮಾಡಿದ ಸಮೀಕ್ಷಾ ವರದಿಯಲ್ಲಿ ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರೂ, ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಸಮೀಕ್ಷಾ ವರದಿ ಬಂದಿತ್ತು. ಆದರೆ, ಈ ಬಾರಿ ಮಾ.15ರಿಂದ ಮೇ 1ರವರೆಗೆ ನಡೆಸಲಾದ ಸಮೀಕ್ಷೆಯಲ್ಲಿ ಬಿಜೆಪಿಗೆ ಸರಳ ಬಹುಮತ ಬಂದಿದೆ. ಇನ್ನು ಕಾಂಗ್ರೆಸ್ 2ನೇ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಆದರೆ, ಇಡೀ ರಾಜ್ಯದಲ್ಲಿ ಮತಗಳಿಕೆ ಲೆಕ್ಕಾಚಾರದಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಮುಂದಿದೆ. ಬಿಜೆಪಿ ಶೇ.40 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಶೇ.41 ಮತಗಳನ್ನು ಗಳಿಸಲಿದೆ ಎಂದು ಜನ್‌ಕಿ ಬಾತ್ ಸುವರ್ಣನ್ಯೂಸ್ ಸಮೀಕ್ಷೆಯಿಂದ ತಿಳಿದುಬಂದಿದೆ. ಒಟ್ಟಾರೆ ರಾಜ್ಯದ ವೋಟ್‌ಶೇರಿಂಗ್‌ನಲ್ಲಿ ಕಾಂಗ್ರೆಸ್ ಮೊದಲ ಸ್ಥಾನ ಪಡೆದುಕೊಂಡಿದೆ.
ಜನ್ ಕಿ ಬಾತ್ ಸುವರ್ಣ ಸಮೀಕ್ಷೆ ( ಶೇಕಡಾವಾರು ವೋಟ್ ಶೇರಿಂಗ್)
ಮತಗಳಿಕೆಯಲ್ಲಿ ಮುಂದಿರುವ ಕಾಂಗ್ರೆಸ್: ಚುನಾವಣೆಯಲ್ಲಿ ಪಕ್ಷ ಪಡೆದುಕೊಳ್ಳುವ ವೋಟ್ ಶೇರಿಂಗ್ ಅತ್ಯಂತ ಪ್ರಮುಖವಾಗಿದೆ. ಇದರಲ್ಲಿ ಕಾಂಗ್ರೆಸ್ ಮತ ಹಂಚಿಕೆ ಶೇಕಡಾವಾರು ಉತ್ತಮಪಡಿಸಿಕೊಂಡಿದೆ. ಕಾಂಗ್ರೆಸ್ ಒಳ ಜಗಳ, ಕೆಲ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ, ಇತ್ತ ಜೆಡಿಎಸ್ ಪ್ರಯತ್ನಗಳಿಂದ ಅತಂತ್ರ ವಿಧಾನಸಭಾ ಚುನಾವಣೆ ಸೃಷ್ಟಿಯಾಗಲಿದೆ ಅನ್ನೋದು ಸಮೀಕ್ಷೆಯಿಂದ ತಿಳಿದುಬಂದಿತ್ತು.
Jan Ki Baat Suvarna Survey: ರಾಜ್ಯದ 6 ಪ್ರಾದೇಶಿಕ ವಿಭಾಗವಾರು ಪಕ್ಷಗಳ ಬಲಾಬಲವೆಷ್ಟು?
ಮೋದಿ ಅಲೆಗೆ ಹೆಚ್ಚಿದ ಕ್ಷೇತ್ರಗಳು: ಆದರೆ, ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರು (ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ದೇಶದ ಬಿಜೆಪಿ ಘಟಾನುಘಟಿ ನಾಯಕರು) ರಾಜ್ಯದಲ್ಲಿ ಬೀಡು ಬಿಟ್ಟು ಪ್ರಚಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರಳ ಬಹುಮತ (100-114 ಕ್ಷೇತ್ರದಲ್ಲಿ ಗೆಲುವು) ಬರಲಿದೆ ಎಂದು ತಿಳಿದುಬಂದಿದೆ. ಇದರಲ್ಲಿ ಮೋದಿ ಅಲೆಯೂ ಕೂಡ ಕೆಲಸ ಮಾಡಿದೆ. ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಸ್ಥಾನಗಳು ಕುಸಿತವಾಗಿದ್ದು, ಇತರೆ (ಪಕ್ಷೇತರ) ಅಭ್ಯರ್ಥಿಗಳ ಗೆಲುವಿನ ಸಂಖ್ಯೆ 1 ರಿಂದ 5ಕ್ಕೆ ಏರಿಕೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.