ಚಿತ್ತಾಪುರದಲ್ಲಿ ಸಿಎಂ ಬೊಮ್ಮಾಯಿ, ಬಿಎಸ್‌ವೈ ನೇತೃತ್ವದ ಸಮಾವೇಶ
ಚಿತ್ತಾಪುರ(ಕಲಬುರಗಿ)(ಅ.23): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಯನ್ನು ಇಂದು(ಭಾನುವಾರ) ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಧ್ಯಾಹ್ನ 3 ಗಂಟೆಗೆ ಚಿತ್ತಾಪುರದ ಹಳೇ ಸೇಂದಿ ಡಿಪೋ ಅವರಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಮಾವೇಶದ ಸಿದ್ಧತೆ ಪರಿಶೀಲಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಿ, ಚಿತ್ತಾಪುರ ತಾಲೂಕಿನಲ್ಲಿ ನಡೆಯುತ್ತಿರುವ ಜನ ಸಂಕಲ್ಪ ಯಾತ್ರೆಯಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಫಿನಿಕ್ಸ್ ಪಕ್ಷಿಯಂತೆ ಮೇಲೆದ್ದು ಬರಲಿದೆ: ಅಲ್ಲಂಪ್ರಭು ಪಾಟೀಲ್
ಚಿತ್ತಾಪುರ ಪಟ್ಟಣಕ್ಕೆ ರಾಜ್ಯದ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ ನಿರಾಣಿ, ಸಚಿವರಾದ ಗೋವಿಂದ ಕಾರಜೊಳ, ಬೈರತಿ ಬಸವರಾಜ, ಶ್ರೀರಾಮುಲು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ, ಕೇಂದ್ರ ಸಚಿವರಾದ ಭಗವಂತ ಖೂಬಾ, ಸಂಸದರಾದ ಡಾ.ಉಮೇಶ ಜಾಧವ, ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.