ಅಮರಾವತಿ(ಜೂ.15): ಆಂಧ್ರಪ್ರದೇಶದಲ್ಲಿ ತಮ್ಮ ಜನಸೇನಾ ಪಕ್ಷವನ್ನು ಸಂಘಟಿಸುವ ಜೊತೆಗೆ ಬಿಜೆಪಿ ಹಾಗೂ ಟಿಡಿಪಿಯನ್ನು ಒಗ್ಗೂಡಿಸಿ ಎನ್‌ಡಿಎ ಸರ್ಕಾರಕ್ಕೆ ಭಾರೀ ಬಹುಮತ ಬರುವಲ್ಲಿ ಶ್ರಮಿಸಿದ್ದ ಟಾಲಿವುಡ್‌ನ ಚಾಲೆಂಜಿಂಗ್ ಸ್ಟಾರ್ ಪವನ್ ಕಲ್ಯಾಣ್‌ರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ.
ಪವನ್ ಕಲ್ಯಾಣ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನದ ಜೊತೆಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಪರಿಸರ, ಅರಣ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ನೀಡಲಾಗಿದೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್ ಅವರಿಗೆ ಮಾನವ ಸಂಪನ್ಮೂಲ, ಮಾಹಿ ತಂತ್ರಜ್ಞಾನ ಮತ್ತು ಸಂವಹನ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಅನಿತಾ ವಂಗಲಪುಡಿ ಅವರಿಗೆ ಮಹತ್ವದ ಗೃಹ ಖಾತೆ ನೀಡಲಾಗಿದೆ.
Pawan Kalyan Life ಮೂವರು ಹೆಂಡ್ತಿಯರ ಮುದ್ದಿನ ಗಂಡ ಪವನ್ ಕಲ್ಯಾಣ್!
2024ರ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಅವರ ಪಕ್ಷ ಸ್ಪರ್ಧಿಸಿದ್ದ ಎಲ್ಲ 21 ಕ್ಷೇತ್ರಗಳಲ್ಲಿ ಹಾಗೂ 2 ಲೋಕಸಭೆ ಕ್ಷೇತ್ರಗಳಲ್ಲಿ ಗೆದ್ದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.