
ಗಂಗಾವತಿ(ಅ.29): ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ರಾಜ್ಯ ಮಟ್ಟದ ವ್ಯಕ್ತಿಯನ್ನಾಗಿ ಬೆಳೆಸಿದ್ದೇ ನಾನು ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ನಗರದ ವಾಲ್ಮೀಕಿ ವೃತ್ತದಲ್ಲಿ ತಾಲೂಕು ಆಡಳಿತ ಮತ್ತು ಪರಿಶಿಷ್ಟ ಪಂಗಡ ಇಲಾಖೆಯಿಂದ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಾಲ್ಮೀಕಿ ಸಮಾಜಕ್ಕೂ ತಮಗೂ ಅವಿನಾಭಾವ ಸಂಬಂಧ ಇದೆ. ಗಂಗಾವತಿ ಕ್ಷೇತ್ರಕ್ಕೆ ಚುನಾವಣೆ ಸ್ಪರ್ಧಿಸುವ ಮುನ್ನ ನನಗೆ ವಾಲ್ಮೀಕಿ ಸಮಾಜದವರೇ ಬೆಂಬಲವಾಗಿ ನಿಂತಿದ್ದರು. ಇದರಿಂದ ನನಗೆ ವಾಲ್ಮೀಕಿ ಸಮಾಜ ಎಂದರೆ ಬಹಳ ಪ್ರೀತಿಯ ಸಮಾಜ ಎಂದರು.
ಗಂಗಾವತಿಯಲ್ಲಿ ಜನತಾ ದರ್ಶನ: ಬರುವ ದಿನಗಳಲ್ಲಿ “ನಿಮ್ಮೊಂದಿಗೆ ನಾನು” ಕಾರ್ಯಕ್ರಮ, ಜನಾರ್ಧನ ರೆಡ್ಡಿ
ಇನ್ನು ಬಳ್ಳಾರಿಯ ಶ್ರೀರಾಮುಲು ಹಾಗೂ ಸಿರಗುಪ್ಪದ ಸೋಮಲಿಂಗಪ್ಪ ಅವರನ್ನು ಶಾಸಕರನ್ನಾಗಿ ಮಾಡಿದ್ದೇ ನಾನು ಎಂದ ಜನಾರೆಡ್ಡಿ, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ನಾವು ಪರಸ್ಪರ ಸ್ವಲ್ಪ ದೂರ ಉಳಿದಿದ್ದೇವೆಯೇ ಹೊರತು ವಾಲ್ಮೀಕಿ ಸಮಾಜಕ್ಕೆ ನಾನು ಯಾವತ್ತಿಗೂ ಬೆಂಬಲವಾಗಿ ನಿಲ್ಲುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.