Assembly election: 25ರಂದು ಹಿರೇಕೆರೂರಿನಲ್ಲಿ ಜನಸಂಕಲ್ಪ ಯಾತ್ರೆ: ಬಿ.ಸಿ.ಪಾಟೀಲ್

By Kannadaprabha News  |  First Published Jan 21, 2023, 7:41 AM IST

ಹಿರೇಕೆರೂರ, ರಟ್ಟೀಹಳ್ಳಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ, ಲೋಕಾರ್ಪಣೆ ಹಾಗೂ ಜನಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಜ. 25ರಂದು ಹಿರೇಕೆರೂರ ಪಟ್ಟಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸುವರು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.


ಹಿರೇಕೆರೂರ (ಜ.21) : ಹಿರೇಕೆರೂರ, ರಟ್ಟೀಹಳ್ಳಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ, ಲೋಕಾರ್ಪಣೆ ಹಾಗೂ ಜನಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಜ. 25ರಂದು ಹಿರೇಕೆರೂರ ಪಟ್ಟಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸುವರು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.

ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರೇಕೆರೂರ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಜನವರಿ 25ರಂದು ಬೆಳಗ್ಗೆ 11 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಹಿರೇಕೆರೂರ ಹಾಗೂ ರಟ್ಟೀಹಳ್ಳಿ ತಾಲೂಕಿನಿ 90 ಗ್ರಾಮಗಳಿಗೆ . 335 ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಯಿಂದ ಹಂಸಭಾವಿ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವರು. . 29 ಕೋಟಿ ವೆಚ್ಚದ ಮಡ್ಲೂರು ಏತ ನೀರಾವರಿ ಯೋಜನೆ ಲೋಕಾರ್ಪಣೆಗೊಳಿಸುವರು.

Tap to resize

Latest Videos

undefined

ಜನಸಂಕಲ್ಪ ಸಮಾವೇಶ ಮುಂದಿನ ಚುನಾವಣೆಗೆ ದಿಕ್ಸೂಚಿ: ಶಾಸಕ ರಾಜೇಶ್

. 18 ಕೋಟಿ ವೆಚ್ಚದಲ್ಲಿ ಬುಳ್ಳಾಪುರ, ಹಾಡೇ ಮತ್ತು ಭಗವತಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶಂಕುಸ್ಥಾಪನೆ, . 45 ಕೋಟಿ ವೆಚ್ಚದಲ್ಲಿ 40 ಗ್ರಾಮಗಳಿಗೆ ಜಲ ಜೀವನ ಮಿಷನ್‌ ಯೋಜನೆಯಡಿ ಮನೆ ಮನೆಗೆ ನಳ ಸಂಪರ್ಕ ಯೋಜನೆಗೆ ಶಂಕುಸ್ಥಾಪನೆ, ರಟ್ಟೀಹಳ್ಳಿಯಲ್ಲಿ . 4 ಕೋಟಿ ವೆಚ್ಚದಲ್ಲಿ ಕಾರ್ಮಿಕ ಭವನ ನಿರ್ಮಾಣ. . 2 ಕೋಟಿ ವೆಚ್ಚದಲ್ಲಿ ಹಿರೇಕೆರೂರ ಪಟ್ಟಣ ಪಂಚಾಯಿತಿ ಕಟ್ಟಡ ಹಾಗೂ ಹಂಸಭಾವಿ ಗ್ರಾಮದಲ್ಲಿ . 18 ಕೋಟಿ ವೆಚ್ಚದಲ್ಲಿ 110 ಕೆವಿ ವಿದ್ಯುತ್‌ ವಿತರಣಾ ಕೇಂದ್ರ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ನಂತರ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳುವರು ಎಂದು ವಿವರಿಸಿದರು.

ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ(BS Yadiyurappa), ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ(nalin kumar kateel), ವಿಪ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸಚಿವರಾದ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಸುನೀಲಕುಮಾರ, ಎಂಟಿಬಿ ನಾಗರಾಜ, ಭೈರತಿ ಬಸವರಾಜ, ಸಂಸದ ಶಿವಕುಮಾರ ಉದಾಸಿ, ಬಾಬುರಾವ್‌ ಚಿಂಚನಸೂರ್‌ ಪಾಲ್ಗೊಳ್ಳುವರು. ಕಾರ್ಯಕ್ರಮಕ್ಕೆ ರೈತಬಾಂಧವರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಸಿದ್ರಾಮಣ್ಣರವರೇ 5 ವರ್ಷ ಸಿಎಂ ಆಗಿದ್ರಿ, ಏನು ಮಾಡಿದ್ರೀ?: ಸಿಎಂ ಬೊಮ್ಮಾಯಿ

ಟಿಎಪಿಎಂಎಸ್‌ ಅಧ್ಯಕ್ಷ ಎಸ್‌.ಎಸ್‌. ಪಾಟೀಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಿ.ಸಿ. ಪಾಟೀಲ, ಮುಖಂಡರಾದ ಆರ್‌.ಎನ್‌. ಗಂಗೋಳ, ಜಿ.ಪಿ. ಪ್ರಕಾಶಗೌಡ, ರವಿಶಂಕರ ಬಾಳಿಕಾಯಿ. ಪಪಂ ಸದಸ್ಯರಾದ ಗುರುಶಾಂತ ಎತ್ತಿನಹಳ್ಳಿ, ರಮೇಶ ತೊರಣಗಟ್ಟಿ, ಹನುಮಂತಪ್ಪ ಕುರುಬರ, ಕುಸುಮಾ ಬಣಕಾರ ಸೇರಿದಂತೆ ಇತರರಿದ್ದರು.

click me!