ಜನತಾದರ್ಶನ ಜನರಿಗೆ ಸ್ಪಂದಿಸುವ ಕಾರ್ಯಕ್ರಮ: ಸಚಿವ ರಾಮಲಿಂಗಾರೆಡ್ಡಿ

By Kannadaprabha News  |  First Published Mar 2, 2024, 10:43 PM IST

ಜಿಲ್ಲಾ ಮಟ್ಟದಲ್ಲಿ ಪರಿಹರಿಸಲಾಗದ ಸಮಸ್ಯೆಗಳಿಗೆ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ನೀಡಲು ಕಳೆದ 4 ತಿಂಗಳಿಂದ ಜನತಾ ದರ್ಶನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. 


ಮಾಗಡಿ (ಮಾ.02): ಜಿಲ್ಲಾ ಮಟ್ಟದಲ್ಲಿ ಪರಿಹರಿಸಲಾಗದ ಸಮಸ್ಯೆಗಳಿಗೆ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ನೀಡಲು ಕಳೆದ 4 ತಿಂಗಳಿಂದ ಜನತಾ ದರ್ಶನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕವಾಗಿ ಕೌಂಟರ್‌ಗಳನ್ನು ನಿರ್ಮಿಸಲಾಗಿದ್ದು, ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ತಾಲೂಕಿನ ಸೋಲೂರು ಗ್ರಾಮದ ಆರ್ಯ ಈಡಿಗರ ಸಂಸ್ಥಾನ ಮಠದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಕರೆ ನೀಡಿದರು. ಜನತಾ ದರ್ಶನ ಕಾರ್ಯಕ್ರಮ ಜನರಿಗೆ ಸ್ಪಂದಿಸುವ ಕಾರ್ಯಕ್ರಮವಾಗಬೇಕು. ಜನರ ಸಮಸ್ಯೆಗಳನ್ನು ಪರಿಶೀಲಿಸಿ ಕಾನೂನು ಚೌಕಟ್ಟಿನಲ್ಲಿ ಪರಿಹರಿಸಬೇಕು. 

Tap to resize

Latest Videos

ನದಿ ಪಾತ್ರಗಳಲ್ಲಿರುವ ಜನರ ರಕ್ಷಣೆಗೆ ಸರ್ಕಾರ ಕ್ರಮವಹಿಸಲಿ: ಸಚಿವ ಕೃಷ್ಣ ಬೈರೇಗೌಡ

ಜನರ ಸಮಸ್ಯೆಗಳಿಗೆ ಪರಿಹಾರ ದೊರೆತಾಗಲೇ ಜನತಾ ದರ್ಶನ ಕಾರ್ಯಕ್ರಮ ಯಶಸ್ವಿಯಾಗುತ್ತದೆ. ಎಲ್ಲಾ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಆಲಿಸಲು ತಮ್ಮ ಸಮಯ ನೀಡಬೇಕು ಎಂದರು. ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು. ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಎಸ್ಪಿ ಕಾರ್ತಿಕ್ ರೆಡ್ಡಿ, ಉಪ ವಿಭಾಗಾಧಿಕಾರಿ ಬಿನೋಯ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯೇಂದ್ರಗೆ ಅಧ್ಯಕ್ಷ ಆಗಲು ಅಪಕ್ವ: ರಾಜ್ಯ ಸರ್ಕಾರವು ಭಕ್ತರ ಹಣದಲ್ಲಿ ಪಾಲು ಕಸಿಯುತ್ತಿದೆ ಎಂಬ ಬಿ.ವೈ.ವಿಜಯೇಂದ್ರ ಆರೋಪವು ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಲು ಎಷ್ಟು ಅಪಕ್ವ ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ಗುರುವಾರ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ತಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೇ 2011ರಲ್ಲಿ ಹೆಚ್ಚಿನ ಆದಾಯವಿರುವ ದೇವಾಲಯಗಳ ಹಣವನ್ನು ಆದಾಯವಿಲ್ಲದ ದೇವಾಲಯಗಳಿಗೆ ಹಾಗೂ ಹಿಂದೂ ಧಾರ್ಮಿಕ ಉದ್ದೇಶಗಳಿಗೆ ಬಳಸಲು ಕಾನೂನು ತಂದಿದ್ದರು. 

ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕುರಿತ ಎಫ್‌ಎಸ್‌ಎಲ್‌ ವರದಿ ಬಂದಿಲ್ಲ: ಪರಮೇಶ್ವರ್‌

ಕಾನೂನಿನ ಅರಿವಿಲ್ಲದಿದ್ದರೆ ತಿಳಿದುಕೊಂಡು ಮಾತನಾಡಬೇಕು ಎಂದು ತೀಕ್ಷ್ಣವಾಗಿ ಹೇಳಿದರು. ಬಿಜೆಪಿ ಅಧಿಕಾರದಲ್ಲಿದ್ದ ಎರಡೂ ಅವಧಿಯಲ್ಲೂ ಈ ಕಾನೂನು ಇತ್ತು. ಆಗ ಕೂಡ ನಿಮ್ಮ ಸರ್ಕಾರವು ಹಿಂದೂಗಳ ಮೇಲೆ ವಕ್ರ ಕಣ್ಣು ಬೀರಿ ಆದಾಯ ಮಾಡಿಕೊಂಡಿದ್ದೀರಾ? ಆಗ ಕೂಡ ನಿಮ್ಮ ಆಡಳಿತದಲ್ಲಿ ದರಿದ್ರತನವಿತ್ತೇ? ಎರಡು ಬಾರಿ ಆಡಳಿತದಲ್ಲಿದ್ದಾಗಲೂ ಭಕ್ತರ ಹಣದಲ್ಲಿ ಬಿಜೆಪಿ ಸರ್ಕಾರ ಪಾಲು ಕಸಿಯುವ ಕೆಲಸ ಮಾಡಿತೇ ಎಂದು ಪ್ರಶ್ನಿಸಿದರು.

click me!