ಜಾರಕಿಹೊಳಿ ಟೀಂ ಬೆಳಗಾವಿಗೆ ವಾಪಸ್ : ಸಫಲವಾಯ್ತಾ ಯತ್ನ..?

Kannadaprabha News   | Asianet News
Published : Aug 27, 2021, 08:26 AM ISTUpdated : Aug 27, 2021, 08:47 AM IST
ಜಾರಕಿಹೊಳಿ ಟೀಂ ಬೆಳಗಾವಿಗೆ ವಾಪಸ್ :  ಸಫಲವಾಯ್ತಾ ಯತ್ನ..?

ಸಾರಾಂಶ

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟು ಕೆಲ ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಶಾಸಕ ರಮೇಶ್ ಜಾರಕಿಹೊಳಿ ಟೀಂ ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲೇ ಬೀಡುಬಿಟ್ಟಿದ್ದ ಶಾಸಕರ ಟೀಂ

 ನವದೆಹಲಿ (ಆ.27): ಸಚಿವ ಸ್ಥಾನದ ಮೇಲೆ ಕಣ್ಣಿಟ್ಟು ಕೆಲ ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಶಾಸಕ ರಮೇಶ್ ಜಾರಕಿಹೊಳಿ, ಶ್ರೀಮಂತ ಪಾಟೀಲ್, ಮಹೇಶ್ ಕುಮಟಳ್ಳಿ ಗುರುವಾರ ಬೆಳಗಾವಿಗೆ ವಾಪಸಾಗಿದ್ದಾರೆ. 

ಮುಖ್ಯಮಂತ್ರಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲೇ ಶಾಸಕ ರಮೇಶ್ ಜಾರಕಿಹೊಳಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಕುಮಟಳ್ಳಿ, ಶ್ರೀಮಂತ ಪಾಟಿಲ್  ದೆಹಲಿಯಲ್ಲಿ ಬೀಡು ಬಿಟ್ಟಿದ್ದರು. 

ದೆಹಲಿಯಲ್ಲಿ ಬೀಡುಬಿಟ್ಟ ಜಾರಕಿಹೊಳಿ ಬ್ರದರ್ಸ್: ಬಿಜೆಪಿಯಲ್ಲಿ ಬೂದಿ ಮುಚ್ಚಿದ ಕೆಂಡ

ಮುಖ್ಯಮಂತ್ರಿಗಳು ಬಿಜೆಪಿ ವರಿಷ್ಠರನ್ನು ಭೇಟಿಯಾಗುವ ಮುನ್ನವೇ ಅವರ ಜತೆಗೆ ತಮ್ಮ ಬೇಡಿಕೆಗೆ ಸಂಬಂಧಿಸಿ ಮಾತುಕತೆ ನಡೆಸಿದ್ದರು. ನಂತರ  ರಾಜ್ಯ ಬಿಜೆಪಿ ಉಸ್ತುವಾರಿ  ಅರುಣ್ ಸಿಂಗ್ ಅವರನ್ನು ಜಾರಕಿಹೊಳಿ ತಂಡ ಭೇಟಿಯಾಗಿದೆ ಎನ್ನಲಾಗಿದ್ದು ಇದು ಖಚಿತವಲ್ಲ. 

ಈ ಮಧ್ಯೆ ಬಾಲಚಂದ್ರ ಜಾರಕಿಹೊಳಿ ಅವರು ಹಾಲು ಉತ್ಪಾದನಾ ಸಂಘಕ್ಕೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಳ್ಳಲು ಇನ್ನೂ ದೆಹಲಿಯಲ್ಲೆ ಉಳಿದುಕೊಂಡಿದ್ದಾರೆ ಎನ್ನಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ