ಲೋಕಸಭೆ ಚುನಾವಣೆ 2024: ಬಿಜೆಪಿ ಜತೆ ಮೈತ್ರಿ ಯಶಸ್ಸಿಗೆ ಜೆಡಿಎಸ್‌ ಅಷ್ಟಸೂತ್ರ..!

By Kannadaprabha NewsFirst Published Mar 26, 2024, 7:31 AM IST
Highlights

ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಆಯೋಜಿಸುವ ಸಾರ್ವಜನಿಕ ಸಭೆ ಮತ್ತು ಪ್ರಚಾರ ಸಭೆಗಳಲ್ಲಿ ಉಭಯ ಪಕ್ಷಗಳ ನಾಯಕರು ಯಾವುದೇ ವಿವಾದಾತ್ಮಕ ಹೇಳಿಕೆಗಳಿಗೆ ಆಸ್ಪದ ನೀಡದೆ ಸಮನ್ವಯತೆಯಿಂದ ಚುನಾವಣೆಯನ್ನು ನಡೆಸಬೇಕು. ಮೈತ್ರಿ ಅಭ್ಯರ್ಥಿಗಳ ಬಗ್ಗೆ ಯಾವುದೇ ಅಸಮಾಧಾನವನ್ನು ಯಾವುದೇ ಸಂದರ್ಭದಲ್ಲಿ ವ್ಯಕ್ತಪಡಿಸಬಾರದು. ಸಮನ್ವಯ ಸಭೆಗಳನ್ನು ಆಯೋಜಿಸಬೇಕು: ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ 

ಬೆಂಗಳೂರು(ಮಾ.26):  ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೈತ್ರಿ ಧರ್ಮಪಾಲನೆ ಮಾಡುವ ಉದ್ದೇಶದಿಂದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಎಲ್ಲ ಹಂತದ ಮುಖಂಡರಿಗೆ 8 ಪ್ರಮುಖ ಅಂಶಗಳನ್ನು ಒಳಗೊಂಡ ನಿರ್ದೇಶನಗಳನ್ನು ರವಾನಿಸಿದ್ದಾರೆ.

ರಾಜ್ಯದಲ್ಲಿನ 28 ಲೋಕಸಭಾ ಕ್ಷೇತ್ರ ಗಳ ಪೈಕಿ ಮಂಡ್ಯ, ಹಾಸನ ಮತ್ತು ಕೋಲಾರ (ಮೀಸಲು) ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಉಳಿದ 25 ಲೋಕಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈ ಎಲ್ಲಾ ಕ್ಷೇತ್ರಗಳಲ್ಲೂ ಮೈತ್ರಿಕೂಟದ ಎರಡೂ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಬೆಂಬಲಿಸುತ್ತ ಮತ್ರಿ ಧರ್ಮ ಪಾಲನೆ ಮಾಡಬೇಕಾಗುತ್ತದೆ. ಈ ಸಂಬಂಧ ಜೆಡಿಎಸ್‌ನ ತತ್ವ, ಸಿದ್ಧಾಂತ ಮತ್ತು ಬದ್ದತೆಗೆ ಧಕ್ಕೆಯಾಗದ ರೀತಿಯಲ್ಲಿ ಚುನಾವಣೆ ಪ್ರಚಾರವನ್ನು ಕೈಗೊಳ್ಳಬೇಕಾಗಿದೆ ಎಂದು ಅವರು ಪತ್ರದ ಮೂಲಕ ತಿಳಿಸಿದ್ದಾರೆ.

ಮಂಡ್ಯಕ್ಕೆ ಹೋಗ್ಬೇಡಿ, ನಿಖಿಲ್‌ರನ್ನು ನಿಲ್ಲಿಸ್ಬೇಡಿ ಚನ್ನಪಟ್ಟಣ ಕಾರ್ಯಕರ್ತರಿಂದ ಎಚ್ಡಿಕೆಗೆ ಒತ್ತಾಯ

ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಆಯೋಜಿಸುವ ಸಾರ್ವಜನಿಕ ಸಭೆ ಮತ್ತು ಪ್ರಚಾರ ಸಭೆಗಳಲ್ಲಿ ಉಭಯ ಪಕ್ಷಗಳ ನಾಯಕರು ಯಾವುದೇ ವಿವಾದಾತ್ಮಕ ಹೇಳಿಕೆಗಳಿಗೆ ಆಸ್ಪದ ನೀಡದೆ ಸಮನ್ವಯತೆಯಿಂದ ಚುನಾವಣೆಯನ್ನು ನಡೆಸಬೇಕು. ಮೈತ್ರಿ ಅಭ್ಯರ್ಥಿಗಳ ಬಗ್ಗೆ ಯಾವುದೇ ಅಸಮಾಧಾನವನ್ನು ಯಾವುದೇ ಸಂದರ್ಭದಲ್ಲಿ ವ್ಯಕ್ತಪಡಿಸಬಾರದು. ಸಮನ್ವಯ ಸಭೆಗಳನ್ನು ಆಯೋಜಿಸಬೇಕು ಎಂದಿದ್ದಾರೆ.

ಅಷ್ಟ ಸೂತ್ರಗಳು

1 ಎರಡೂ ಪಕ್ಷಗಳು ಎರಡೂ ಪಕ್ಷದ ಚಿಹ್ನೆಗಳನ್ನು ಸಮ ಮಾಡಬೇಕು ಅಳತೆಯಲ್ಲಿ ಬಳಕೆ
2 ಸಾರ್ವಜನಿಕ ಸಭೆ ಮತ್ತು ಚುನಾ ವಣಾ । ಪ್ರಚಾರ: ಸಭೆಗಳಲ್ಲಿ ಎರಡೂ ಪಕ್ಷಗಳ ಬಾವುಟ ಪ್ರದರ್ಶಿಸಬೇಕು
3 ಜೆಡಿಎಸ್ ಮತ್ತು ಬಿಜೆಪಿ ನಾಯಕರ ಫೋಟೋಗಳನ್ನು ಭೇದವಿಲ್ಲದೇ ಉಪಯೋಗಿಸಿಕೊಳ್ಳಬೇಕು
4 ಸಭೆಗಳಲ್ಲಿ ಕಡ್ಡಾಯವಾಗಿ ಎರಡೂ ಪಕ್ಷಗಳ ಕಾರ್ಯಕರ್ತರು ತಮ್ಮ ತಮ್ಮ ಪಕ್ಷದ ಶಾಲುಗಳನ್ನು ಬಳಸಬೇಕು
5 ರಾಷ್ಟ್ರ ಮತ್ತು ರಾಜ್ಯಮಟ್ಟದ ಜೆಡಿಎಸ್ ಮತ್ತು ಬಿಜೆಪಿ ನಾಯಕರ ಸಾಧನೆಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು
6 ಕ್ಷೇತ್ರ/ಜಿಲ್ಲಾ/ವಿಧಾನಸಭಾವಾರು ಮುಖಂಡರ ಫೋಟೋಗಳನ್ನು ಕ್ಷೇತ್ರವಾರು ಸಮನ್ವಯ ಸಮಿತಿ ಯಲ್ಲಿ ಚರ್ಚಿಸಿ ಬಳಸಬೇಕು 
7 ಮೈತ್ರಿ ಪಕ್ಷದೊಂದಿಗೆ ಚರ್ಚಿಸಿ, ಮತ ಗಟ್ಟೆ ಸಮಿತಿಗಳನ್ನು ರಚಿಸಿ, ಮತದಾ ರರನ್ನು ಮತಗಟ್ಟೆಗೆ ಕರೆತಂದು ಮೈತ್ರಿ ಅಭ್ಯರ್ಥಿಗಳ ಪರವಾಗಿ ಮತದಾನ ಮಾಡುವಂತೆ ಕ್ರಮ ವಹಿಸುವುದು 
8 ಗೊಂದಲ ಉಂಟು ಮಾಡಿಕೊಳ್ಳಬಾ ರದು. ಕಠಿಣ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಪಕ್ಷದ ಕೇಂದ್ರ ಕಚೇರಿಯ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು

click me!