ಬೆಂಗಳೂರು ,(ಡಿ.02): ಮುಂಬರುವ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಈಗಿನಿಂದಲೇ ತಾಲೀಮು ಆರಂಭಿಸಿವೆ. ಇದರ ಮಧ್ಯೆ ನಾಯರುಗಳು ಸಹ ತಮ್ಮ ಮುಂದಿನ ರಾಜಕೀಯ(Politics) ಭವಿಷ್ಯದ ಲೆಕ್ಕಾಚಾರದೊಂದಿಗೆ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುತ್ತಿದ್ದಾರೆ.
ಅದರಂತೆ ಇಂದು (ಡಿ.02) ಬೆಂಗಳೂರಿನಲ್ಲಿ ಸಿದ್ದರಾಮಯ್ಯ(Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ನೇತೃತ್ವದಲ್ಲಿ ಬಿಜೆಪಿ(BJP) ಹಾಗೂ ಜೆಡಿಎಸ್ (JDS) ಮುಖಂಡರು ಕಾಂಗ್ರೆಸ್(Congress) ಸೇರ್ಪಡೆಯಾದರು.
Karnataka Politics: ಬಿಜೆಪಿ ನಾಯಕ ಕಾಂಗ್ರೆಸ್ ಸೇರ್ಪಡೆಗೆ ಮಾತುಕತೆ, ಮಾಹಿತಿ ಬಿಟ್ಟುಕೊಟ್ಟ 3ನೇ ವ್ಯಕ್ತಿ
ಜೆಡಿಎಸ್‌ನ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಆರ್. ಮನೋಹರ್, ಮಾಲೂರಿನ ಮಾಜಿ ಶಾಸಕ, ಬಿಜೆಪಿ ಮುಖಂಡ ನಾಗರಾಜು, ರಾಜ್ಯ ಮಡಿವಾಳರ ಸಂಘದ ನಂಜಪ್ಪ, ಅಮರನಾಥ್, ಜೆಡಿಎಸ್ ನ ಗೋಪಿಕೃಷ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನುಸೂಯ ಸೇರಿದಂತೆ ಅನೇಕ ಮುಖಂಡರು ಸೇರ್ಪಡೆಯಾಗಿದ್ದು ಇವರಿಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕಾಂಗ್ರೆಸ್ ಧ್ವಜ ನೀಡಿ ಪಕ್ಷಕ್ಕೆ ಸ್ವಾಗತಕೋರಿದರು.
ವೇಟಿಂಗ್ ಲಿಸ್ಟ್‌ನಲ್ಲಿ ಘಟಾನುಘಟಿಗಳು
ಹೌದು...ಜೆಡಿಎಸ್ ಹಾಗೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೆ ಹಲವು ಘಟಾನುಘಟಿ ನಾಯಕರು ತುದಿಗಾಲಲ್ಲಿ ನಿಂತಿದ್ದಾರೆ. ಕೋಲಾರ ಜೆಡಿಎಸ್ ಹಾಲಿ ಶಾಸಕ ಶ್ರೀನಿವಾಸ್ ಗೌಡ, ಜಿಟಿ ದೇವೇಗೌಡ, ಸಂದೇಶ್ ನಾಗರಾಜ್ ಸೇರಿದಂತೆ ಹಲವು ಘಟಾನುಘಟಿ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಕ್ಯೂನಲ್ಲಿ ನಿಂತಿದ್ದು, ಸೇರ್ಪಡೆಗೆ ಕಾಲ, ಸಮಯ ನಿಗದಿಯಾಗಿಲ್ಲ. 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೇಲೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಬಗ್ಗೆ ಈಗಾಗಲೇ ಕಾಂಗ್ರೆಸ್‌ನಲ್ಲಿ ಚರ್ಚೆಗಳು ಆಗಿವೆ.
ಜೆಡಿಎಸ್ ನಾಯಕರೇ ಹೆಚ್ಚು
ಹೌದು...ಜೆಡಿಎಸ್‌ನಿಂದಲೇ ಹಲವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಂದೆ ಸಹ ಹಲವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಅದರಲ್ಲೂ ಮಂಡ್ಯ, ತುಮಕೂರು, ಕೋಲಾರ ಜಿಲ್ಲೆಗಳ ಜೆಡಿಎಸ್ ನಾಯಕರು 2023ರ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾಹಿತಿ ಇದೆ.
ಚಿಕ್ಕಮಗಳೂರು ಜೆಡಿಎಸ್ ನಾಯಕ ಕಾಂಗ್ರೆಸ್‌ಗೆ
ಕಳೆದ ಬಾರಿ ಚಿಕ್ಕಮಗಳೂರು(Chikkamagaluru) ವಿಧಾನಸಭಾ ಚುನಾವಣೆಯಲ್ಲಿ (Assembly Election) ಜೆಡಿಎಸ್‌ನಿಂದ (JDS) ಸ್ಪರ್ಧೆ ಮಾಡಿದ್ದ ಬಿ.ಎಚ್. ಹರೀಶ್ ಕಾಂಗ್ರೆಸ್ (Congress) ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಡಿ.3ರಂದು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿರುವ ಕಾಂಗ್ರೆಸ್ ಮತದಾರರ ಸಮಾವೇಶದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದೇನೆ ಎಂದು ಬಿ.ಎಚ್. ಹರೀಶ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಕಾಂಗ್ರೆಸ್ ತತ್ತ್ವ, ಸಿದ್ಧಾಂತಗಳನ್ನು ಒಪ್ಪಿ ಸೇರ್ಪಡೆಗೊಳುತ್ತಿದ್ದೇನೆ. ಬಿಜೆಪಿಯ (bjp) ದುರಾಳಿತ ವ್ಯವಸ್ಥೆ ವಿರುದ್ಧವಾಗಿ ಹೋರಾಟ ನಡೆಸಲಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಎಂದು ನನಗನಿಸಿದೆ. ಬೆಂಬಲಿಗರು ಹಾಗೂ ರೈತರೊಂದಿಗೆ ಚರ್ಚಿಸಿ, ಸಲಹೆ, ಅಭಿಪ್ರಾಯ ಪಡೆದು ಈ ತೀರ್ಮಾನ ಕೈಗೊಂಡಿದ್ದೇನೆ ಎಂದು ಹೇಳಿದರು.
ಎ ಮಂಜು ವಾಪಸ್ ಕಾಂಗ್ರೆಸ್‌ಗೆ
ಯೆಸ್..ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಎ.ಮಂಜು ಮತ್ತೆ ವಾಪಸ್ ಕಾಂಗ್ರೆಸ್ ಸೇರಲು ಬಯಸಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಒಂದು ಸುತ್ತಿನ ಮಾತುಕತೆ ಆಗಿದೆ. ಆದ್ರೆ, ಮಂಜು ಸೇರ್ಪಡೆಗೆ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿರುವ ಶಿವಕುಮಾರ್ ಅವರ ನಿವಾಸದಲ್ಲಿ ಎ. ಮಂಜು ಡಿಕೆಶಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ವೇಳೆ ಹಾಸನ ಡಿಸಿಸಿ ಅಧ್ಯಕ್ಷ ಜಾವಗಲ್ ಮಂಜುನಾಥ್ ಮತ್ತು ಮಾಜಿ ಕಾಂಗ್ರೆಸ್ ಎಂಎಲ್ಸಿ ಎಂಎ ಗೋಪಾಲಸ್ವಾಮಿ ಜೊತೆಗಿದ್ದರು. ಮಂಜು ಅವರು ಕಾಂಗ್ರೆಸ್‌ಗೆ ಮರಳುವುದನ್ನು ವಿರೋಧಿಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುವುದಾಗಿ ಶಿವಕುಮಾರ್ ಭರವಸೆ ನೀಡಿದ್ದಾರೆ ಎಂದು ಇತರ ಹಿರಿಯ ಕಾಂಗ್ರೆಸ್ ನಾಯಕರು ಬಹಿರಂಗಪಡಿಸಿದ್ದಾರೆ.