ಹಾನಗಲ್ ಬೈ ಎಲೆಕ್ಷನ್ ದಿನಾಂಕ ಘೋಷಣೆ ಮುನ್ನವೆ ಅಭ್ಯರ್ಥಿ ಪ್ರಕಟಿಸಿದ ಜೆಡಿಎಸ್?

By Suvarna News  |  First Published Jun 15, 2021, 9:42 PM IST

* ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ
* ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ಜೆಡಿಎಸ್‌ 
* ಬಿಜೆಪಿ ಶಾಸಕ ಸಿ.ಎಂ. ಉದಾಸಿ ನಿಧನದಿಂದ ತೆರವಾಗಿರುವ ಸ್ಥಾನ


ಬೆಂಗಳೂರು/ಹಾವೇರಿ, (ಜೂನ್.15): ಬಿಜೆಪಿ ಶಾಸಕರಾಗಿದ್ದ ಸಿ.ಎಂ.ಉದಾಸಿ ಅವರ ನಿಧನದಿಂದ ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.

ಆದ್ರೆ, ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ. ಇದರ ಮಧ್ಯೆ ಜೆಡಿಎಸ್ ತನ್ನ ಅಭ್ಯರ್ಥಿ ಹೆಸರನ್ನ ಘೋಷಣೆ ಮಾಡಿದೆ.

Tap to resize

Latest Videos

ಬಿಜೆಪಿ ಹಿರಿಯ ಶಾಸಕ ಸಿ.ಎಂ.ಉದಾಸಿ ವಿಧಿವಶ

ಹೌದು... ಬೈ ಎಲೆಕ್ಷನ್ ದಿನಾಂಕ ಘೋಷಣೆಯಾಗುವ ಮೊದಲೇ ನಿಯಾಜ್ ಶೇಖ್ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ ಎಂದು ತಿಳಿದುಬಂದಿದೆ.. ನಿಯಾಜ್ ಶೇಖ್ ಅವರು ಇಂದು (ಮಂಗಳವಾರ) ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್‌ಗೆ ಅಧಿಕೃತವಾಗಿ ಸೇರ್ಪಡೆಯಾದರು. 

ಪಕ್ಷದ ಬಾವುಟ ನೀಡಿ ನಿಯಾಜ್ ಶೇಖ್ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಯ್ಯದ್ ಅಲ್ತಾಪ್ ಉಪಸ್ಥಿತರಿದ್ದರು.

ಇನ್ನು ನಿಯಾಜ್ ಶೇಖ್ ಅವರು ಹಾವೇರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ಹಾಲಿ ಹಾನಗಲ್ ವಿಧಾನಸಬಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಚಿವ ಸಿ.ಎಂ.ಉದಾಸಿ ಅವರು ನಿಧಾನರಾಗಿದ್ದಕ್ಕೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಜೆಡಿಎಸ್‍ನಿಂದ ನಿಯಾಜ್ ಶೇಖ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಸಾಧ್ಯತೆಗಳು ಹೆಚ್ಚಿವೆ.

click me!