
ಬೆಂಗಳೂರು, (ಅ.16): ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ (By Election) ಕದನ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಗೆಲುವಿಗಾಗಿ ರಾಜಕೀಯ ಬಿಜೆಪಿ, ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ಭರ್ಜರಿ ಪ್ರಚಾರದಲ್ಲಿ ತೊಡಗಿವೆ.
ಇದರ ಭಾಗವಾಗಿ ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಜೆಡಿಎಸ್ 20 ಜನ ಸ್ಟಾರ್ ಪ್ರಚಾರಕರ (Star campaigners) ಪಟ್ಟಿ ಬಿಡುಗಡೆ ಮಾಡಿದೆ.
ಎಚ್ ಡಿ ದೇವೇಗೌಡ (HD Devegowda), ಎಚ್ ಡಿ ಕುಮಾರಸ್ವಾಮಿ (HD Kumaraswamy), ಎಚ್ ಕೆ ಕುಮಾರಸ್ವಾಮಿ (HK Kumaraswamy), ಜಫ್ರುಲ್ಲಾ ಖಾನ್, ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ, ಸೇರಿದಂತೆ ಒಟ್ಟು 20 ಜನರ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದೆ.
ಉಪಕದನಕ್ಕೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್ : ಹಾನಗಲ್‌ಗೆ 61- ಸಿಂದಗಿಗೆ 47 ಉಸ್ತುವಾರಿಗಳ ನೇಮಕ
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಜಫ್ರುಲ್ಲಾ ಖಾನ್, ಮಾಜಿ ಸಚಿವರಾದ ಎಚ್.ಡಿ.ರೇವಣ್ಣ( HD Revanna), ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ, ಸಂಸದ ಪ್ರಜ್ವಲ್ ರೇವಣ್ಣ (Prajwal Revanna), ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy), ಶಾಸಕರಾದ ಡಾ.ಕೆ.ಅನ್ನದಾನಿ, ಡಾ.ದೇವಾನಂದ ಚವ್ಹಾಣ್, ಬಿ.ಎಂ.ಫಾರೂಕ್, ರಾಜಾ ವೆಂಕಟಪ್ಪ ನಾಯಕ, ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ, ಮುಖಂಡರಾದ ಬಿ.ಜಿ.ಪಾಟೀಲ್, ಮಲ್ಲಿಕಾರ್ಜುನ ಯಂಡಿಗೇರಿ, ನಾಜೀರ್ ಹುಸೇನ್ ಉಸ್ತಾದ್, ಸಯ್ಯದ್ ಮೋಹಿದ್ ಆಲ್ತಾಫ್, ರಾಜುಗೌಡ, ಬಿ.ಡಿ. ಪಾಟೀಲ್ ಇಂಡಿ ಅವರನ್ನು ಚುನಾಣೆ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ.
ಸಿಂಧಗಿ ಉಪಚುನಾವಣೆ ಕಣದಲ್ಲಿ ನಾಜಿಯಾ ಶಕೀಲಾ ಅಂಗಡಿ ಕಣದಲ್ಲಿದ್ರೆ, ಹಾನಗಲ್‌ನಲ್ಲಿ ನಿಯಾಜ್ ಶೇಕ್ ಅವರನ್ನ ಕಣಕ್ಕಿಳಿಸಿದ್ದು, ಈ ಅಭ್ಯರ್ಥಿಗಳ ಪರ ಈ ಜೆಡಿಎಸ್ ಪ್ರಚಾರಕರು ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ.
ಇನ್ನು ಇದೇ ಅಕ್ಟೋಬರ್ 30 ರಂದು ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ನವೆಂಬರ್ 02ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.