ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಜೆಡಿಎಸ್ ಪಕ್ಷ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಪಕ್ಷಗಳ ಕಾರ್ಯಕರ್ತರು ಅಣ್ಣ-ತಮ್ಮಂದಿರಂತೆ ಸಮ್ಮಿಲನಗೊಂಡಿದ್ದಾರೆ ಎಂದು ರಾಜ್ಯ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಕೆ.ಆರ್.ಪೇಟೆ (ಮಾ.31): ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಜೆಡಿಎಸ್ ಪಕ್ಷ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಪಕ್ಷಗಳ ಕಾರ್ಯಕರ್ತರು ಅಣ್ಣ-ತಮ್ಮಂದಿರಂತೆ ಸಮ್ಮಿಲನಗೊಂಡಿದ್ದಾರೆ ಎಂದು ರಾಜ್ಯ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಪಟ್ಟಣದ ಟಿಎಪಿಸಿಎಂಎಸ್ ಸಮುದಾಯ ಭವನದ ಆವರಣದಲ್ಲಿ ಏರ್ಪಡಿಸಿದ್ದ ಬಿಜೆಪಿ - ಜೆಡಿಎಸ್ ಕಾರ್ಯಕರ್ತರ ಸ್ನೇಹ ಸಮ್ಮಿಲನ ಸಭೆಯನ್ನು ಉಧ್ಘಾಟಿಸಿ ಮಾತನಾಡಿದ ಅವರು, ರೈತರ ಪರ ಸದಾ ಕೆಲಸ ಮಾಡುವ ಕುಮಾರಣ್ಣರನ್ನು ಚುನಾವಣೆಯಲ್ಲಿ ಅತಿಹೆಚ್ಚು ಮತಗಳನ್ನು ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಸಚಿವ ನಾರಾಯಣಗೌಡರು ಕೂಡ ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿ ಕುಮಾರಣ್ಣರ ಗೆಲುವಿಗೆ ಟೊಂಕಕಟ್ಟಿ ನಿಂತಿರುವುದು ಕಾರ್ಯಕರ್ತರಲ್ಲಿ ಹುಮ್ಮಸ್ಸು ತಂದಿದೆ. ಕುಮಾರಣ್ಣ ಚುನಾವಣೆಗೆ ನಿಂತರೆ ಈ ಭಾಗದ ಹಲವು ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಲು ಜಿಲ್ಲೆಯಲ್ಲಿ ಕುಮಾರಣ್ಣನನ್ನು ಗೆಲ್ಲಿಸಿಕೊಡಬೇಕು. ಏಪ್ರಿಲ್ 4 ರಂದು ಕುಮಾರಣ್ಣ ನಾಮಪತ್ರ ಸಲ್ಲಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಬೇಕು ಎಂದು ಮನವಿ ಮಾಡಿದರು.
ಕೋವಿಡ್ ವೇಳೆಯ ಆರೋಪಗಳು ಕೇವಲ ಅಪಪ್ರಚಾರ: ಡಾ.ಕೆ.ಸುಧಾಕರ್
ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ಇದೇ ಮನೆಯಿಂದ ಹೋದವನು ನಾನು, ಈಗ ನೊಡುತ್ತಿರುವುದು ಸಂತಸವಾಗುತ್ತಿದೆ. ನನಗೆ ಜೆಡಿಎಸ್ ನಲ್ಲಿ ಇದ್ದಾಗ ಮಂಜಣ್ಣ ಬಲಗೈನಂತೆ ಇದ್ದರು. ನನ್ನ ಎರಡು ಚುನಾವಣೆಗಳಲ್ಲಿ ನನ್ನ ಗೆಲುವಿಗೆ ಶ್ರಮಿಸಿದವರು. ಮಂಜಣ್ಣ ಗೆದ್ದಿರುವುದು ನನಗೆ ಸಂತೋಷವಾಗಿದೆ ಎಂದು ತಿಳಿಸಿದರು. ಶಾಸಕ ಎಚ್.ಟಿ.ಮಂಜು ಮಾತನಾಡಿ, ಕಾಂಗ್ರೆಸ್ ನಾಯಕರು ಜೆಡಿಎಸ್ ನಾಯಕರ ಬಗ್ಗೆ ಮಾತನಾಡುವಾಗ ಎಚ್ಚರದಿಂದ ಮಾತನಾಡಬೇಕು. ಮತದಾರರನ್ನು ಬ್ಲಾಕ್‌ಮೇಲ್ ಮಾಡುವ ಕೆಲಸ ಮಾಡುತ್ತಿರುವ ನಿಮಗೆ( ಕಾಂಗ್ರೆಸ್) ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
ತುಮಕೂರಿಗೆ ನೀರು ಬಿಟ್ಟು ನಮಗೆ ನೀರು ಬಿಡಲು ಕೇಳಿದಾಗ ಉಸ್ತುವಾರಿ ಸಚಿವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಯಾವ ಮುಖ ಹೊತ್ತುಕೊಂಡು ಮತ ಕೇಳಲು ಬರುತ್ತೀರಿ. ಬಜೆಟ್‌ನಲ್ಲಿ ಮಂಡ್ಯಕ್ಕೆ ಹಣ ನೀಡಿದಾಗ ಮಂಡ್ಯ ಬಜೆಟ್ ಎಂದು ಹಾಸ್ಯ ಮಾಡಿದ ನಿಮಗೆ ಕುಮಾರಣ್ಣನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ರಾಜ್ಯ ಮಹಾಮಂಡಳದ ನಿರ್ದೇಶಕ ಎಸ್.ಎಲ್.ಮೋಹನ್, ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ, ಮನ್ಮುಲ್ ನಿರ್ದೇಶಕ ಡಾಲುರವಿ, ಮನ್ಮುಲ್ ಮಾಜಿ ಅಧ್ಯಕ್ಷ ಎಂ.ಬಿ.ಹರೀಶ್, ಮಾಜಿ ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಎ.ಆರ್.ರಘು, ಪುರಸಭಾ ಸದಸ್ಯ ಪ್ರಮೋದ್, ತಾಲೂಕು ಬಿಜೆಪಿ ಅಧ್ಯಕ್ಷ ನಾಗರಾಜು, ಭರತ್ ಹಲವರು ಇದ್ದರು.
ಕುಮಾರಸ್ವಾಮಿ ಗೆದ್ದರೆ ಕೇವಲ ಸಂಸದರಲ್ಲ. ರಾಜ್ಯದ ಪ್ರತಿನಿಧಿಯಾಗಿ ಕೆಲಸ: ಸಿಎಸ್ ಪುಟ್ಟರಾಜು ಅಭಿಮತ
‘ದೇಶಕ್ಕಾಗಿ ಮೋದಿ, ಕಾವೇರಿಗಾಗಿ ಕುಮಾರಣ್ಣ’: ಮೈಸೂರು - ಕೊಡಗು ಲೋಕಸಭಾ ಸದಸ್ಯ ಪ್ರತಾಪಸಿಂಹ ಮಾತನಾಡಿ, ದೇಶ ಕಾಯಲು ಮೋದಿ, ಕಾವೇರಿ ಕಾಯಲು ಕುಮಾರಣ್ಣ ಆಗಬೇಕಿದೆ. ಅದಕ್ಕಾಗಿ ನಾವೆಲ್ಲರೂ ಕುಮಾರಣ್ಣನಿಗೆ ಮತ ಹಾಕಬೇಕು. ಕಾವೇರಿ ವಿಷಯವಾಗಿ ಮಾಜಿ ಪ್ರಧಾನಿ ದೇವೇಗೌಡರ ಹೋರಾಟ ಅಪಾರವಾದುದು ಎಂದರು. ಕುಮಾರಣ್ಣ 2018ರಲ್ಲಿ ಪ್ರವಾಹ ಬಂದಾಗ ಕೊಡಗಿನ ಜನರಿಗೆ ಸಾಕಷ್ಟು ಮನೆಗಳಲ್ಲಿ ಕಟ್ಟಿಸಿಕೊಟ್ಟಿದ್ದಾರೆ. ಜೆಡಿಎಸ್ - ಬಿಜೆಪಿ ಕಾಲಿಟ್ಟರೆ ವರುಣ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ರಾಜ್ಯಕ್ಕೆ ಕಾಲಿಟ್ಟರೆ ಬರ ಎಂದು ವ್ಯಂಗ್ಯವಾಡಿದರು.