
ಬೆಂಗಳೂರು, (ಅ.26): ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ (By Election) ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿದ್ದು, ಅದು ವೈಯಕ್ತಿಕ ಟೀಕೆಗಳಿಗೆ ಬಂದು ಬಂತಿದೆ.
ಮತ್ತೊಂದೆಡೆ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಒಂದು ನಾಣ್ಯದ ಎರಡು ಮುಖಗಳು ಎಂದು ಕಾಂಗ್ರೆಸ್ (Congress) ಆರೋಪಿಸಿದೆ. ಅದರಂತೆ ಇತ್ತ ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ (JDS BJP Alliance) ಮಾಡಿಕೊಂಡಿವೆ.
ಜೆಡಿಎಸ್ ಮುಗಿಸುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ
ಹೌದು...ಇಂದು (ಮಂಗಳವಾರ) ದೊಡ್ಡಬಳ್ಳಾಪುರ ನಗರಸಭೆ(Doddaballapura Municipal) ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಡೆದಿದ್ದು, ಈ ವೇಳೆ ಅಧ್ಯಕ್ಷರಾಗಿ ಬಿಜೆಪಿಯ ಎಸ್. ಸುಧಾರಾಣಿ ಮತ್ತು ಜೆಡಿಎಸ್‌ನ ಫರ್ಹಾನಾ ತಾಜ್ ಅವರು ಉಪಾಧ್ಯಕ್ಷರಾಗಿದ್ದಾರೆ. ಇದರೊಂದಿಗೆ ಸಚಿವ ಆರ್. ಅಶೋಕ್ (R Ashok) ಎಲ್ಲಾ ತಂತ್ರಗಾರಿಕೆಗಳು ಸಫಲವಾಗಿವೆ.
ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನ ಪಡೆಯಲು ಮ್ಯಾಜಿಕ್ ನಂಬರ್ 17 ಆಗಿತ್ತು. ಆದ್ರೆ, ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಗೆದ್ದಿತ್ತು. ಬಳಿಕ ಬಿಜೆಪಿ ಇಬ್ಬರು ಪಕ್ಷೇತರ ಹಾಗೂ 5 ಜೆಡಿಎಸ್ ಮತ್ತು ಒಬ್ಬರು ಸಂಸದರ ಮತದಿಂದ ಅಧಿಕಾರಕ್ಕೇರಿದೆ. ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಒಪ್ಪಂದ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್‌ಗೆ ಅಧಿಕಾರ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
'ಬಿಜೆಪಿ ಮತ್ತು ಜೆಡಿಎಸ್‌ಗೆ ನಾನೇ ಟಾರ್ಗೆಟ್. ಅವರಿಗೆ ನನ್ನನ್ನು ಕಂಡರೆ ಭಯ'
31 ಸದಸ್ಯ ಬಲದ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಬಿಜೆಪಿ 12, ಕಾಂಗ್ರೆಸ್ 9, ಜೆಡಿಎಸ್ 7, 3 ಪಕ್ಷೇತರ ಸದಸ್ಯರು ಗೆಲುವು ಸಾಧಿಸಿದ್ದರು. ಅತಂತ್ರ ಫಲಿತಾಂಶ ಬಂದ ಹಿನ್ನಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಿತ್ತು.
ಇನ್ನು ಈ ಬಗ್ಗೆ ಸಚಿವ ಆರ್.ಅಶೋಕ್ ಅವರು ಸಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿದ್ದು, ಫಲಿತಾಂಶದ ದಿನದಿಂದಲೂ ದೊಡ್ಡಬಳ್ಳಾಪುರ ನಗರಸಭೆಯನ್ನು ಬಿಜೆಪಿ ತನ್ನ ವಶ ಮಾಡಿಕೊಳ್ಳಲಿದೆ ಎಂಬುದನ್ನು ಆತ್ಮವಿಶ್ವಾಸದಿಂದ ಹೇಳುತ್ತಾ ಬಂದಿದ್ದೆ. ಅದರಂತೆ ಕೊನೆಗೂ ಜೆಡಿಎಸ್ ಪಕ್ಷ ಹಾಗೂ ಸ್ವತಂತ್ರವಾಗಿ ಆಯ್ಕೆಯಾದವರನ್ನು ವಿಶ್ವಾಸಕ್ಕೆ ತೆಗದುಕೊಂಡು ಅವರ ಮನವೊಲಿಸಿ, ಪಕ್ಷ ನನಗೆ ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇನೆ' ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಸತತ ಪ್ರಯತ್ನದ ಫಲವಾಗಿ ಇಂದು ನಗರಸಭೆಯ ನೂತನ ಅಧ್ಯಕ್ಷರಾಗಿ ಸುಧಾ ಮತ್ತು ಉಪಾಧ್ಯಕ್ಷರಾಗಿ ಜೆಡಿಎಸ್‌ನ ಫರ್ಹಾನ್ ತಾಜ್ ಆಯ್ಕೆಯಾಗಿದ್ದು, ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ. ಬರುವ ದಿನಗಳಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಆಗಲಿ ಎಂದು ಹಾರೈಸುತ್ತೇನೆ' ಎಂದು ಆರ್. ಅಶೋಕ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.