ಲೋಕಸಭೆ ಚುನಾವಣೆ 2024: ಮಂಡ್ಯದಲ್ಲಿ ಜೆಡಿಎಸ್‌-ಬಿಜೆಪಿ ಒಗ್ಗಟ್ಟು ಪ್ರದರ್ಶನ

By Kannadaprabha News  |  First Published Mar 29, 2024, 10:30 AM IST

ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಸಮನ್ವಯತೆಯಿಂದ ಕೆಲಸ ಮಾಡಿ, ರಾಜ್ಯದ ಎಲ್ಲಾ 28 ಸ್ಥಾನಗಳ ಗೆಲುವಿಗೆ ಶ್ರಮಿಸುವ ಒಕ್ಕೊರಲಿನ ತೀರ್ಮಾನವನ್ನು ಸಭೆ ಕೈಗೊಂಡಿತು. ಮಂಡ್ಯದಲ್ಲಿ ಜೆಡಿಎಸ್ ಸ್ಪರ್ಧೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ನಾರಾಯಣಗೌಡ ಕೂಡಸಭೆಯಲ್ಲಿ ಪಾಲ್ಗೊಂಡಿದ್ದರು. 


ಮಂಡ್ಯ(ಮಾ.29):  ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ನಡೆದ ಮೊಟ್ಟಮೊದಲ ಜೆಡಿಎಸ್-ಬಿಜೆಪಿ ಸಮನ್ವಯ ಸಮಿತಿ ಸಭೆ ಉಭಯ ಪಕ್ಷಗಳ ನಾಯಕರ ಅಭೂತಪೂರ್ವ ಒಗ್ಗಟ್ಟಿಗೆ ಸಾಕ್ಷಿಯಾಯಿತು. 

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಡಾ. ಸಿ.ಎನ್.ಅಶ್ವತ್ಥ ನಾರಾಯಣ, ಕೆ.ಸಿ.ನಾರಾಯಣಗೌಡ, ಕೆ.ರಾಮದಾಸ್, ಜಿಲ್ಲಾಧ್ಯಕ್ಷ ಇಂದ್ರೇಶ್ ಮತ್ತಿತರ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. 

Latest Videos

undefined

ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಕಾಂಗ್ರೆಸ್‌ಗೆ ನಿದ್ದೆ ಬರ್ತಿಲ್ಲ: ವಿಜಯೇಂದ್ರ

ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಸಮನ್ವಯತೆಯಿಂದ ಕೆಲಸ ಮಾಡಿ, ರಾಜ್ಯದ ಎಲ್ಲಾ 28 ಸ್ಥಾನಗಳ ಗೆಲುವಿಗೆ ಶ್ರಮಿಸುವ ಒಕ್ಕೊರಲಿನ ತೀರ್ಮಾನವನ್ನು ಸಭೆ ಕೈಗೊಂಡಿತು. ಮಂಡ್ಯದಲ್ಲಿ ಜೆಡಿಎಸ್ ಸ್ಪರ್ಧೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ನಾರಾಯಣಗೌಡ ಕೂಡಸಭೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ, ಕುಮಾರಸ್ವಾಮಿಯವರಿಗೆ ನೀವು ನಾಮಪತ್ರ ಸಲ್ಲಿಸಿ ಹೋಗಿ, ನಿಮ್ಮನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು ಎಂದು ಧೈರ್ಯ ತುಂಬಿದರು. ಜೆಡಿಎಸ್ ಬಿಡಲು ಮುಂದಾಗಿದ್ದ ಕೆ.ಎಸ್.ವಿಜಯ್ ಆನಂದ್ ಕೂಡ ಭಾಗಿಯಾಗಿದ್ದು ವಿಶೇಷವಾಗಿತ್ತು. 

click me!