RR ನಗರದಲ್ಲಿ ಠೇವಣಿ ಕಳೆದುಕೊಂಡ ಜೆಡಿಎಸ್, ಮತ ಗಳಿಸಿದ್ದೆಷ್ಟು ಗೊತ್ತಾ.?

Published : Nov 10, 2020, 06:55 PM ISTUpdated : Nov 10, 2020, 06:57 PM IST
RR ನಗರದಲ್ಲಿ  ಠೇವಣಿ ಕಳೆದುಕೊಂಡ ಜೆಡಿಎಸ್, ಮತ ಗಳಿಸಿದ್ದೆಷ್ಟು ಗೊತ್ತಾ.?

ಸಾರಾಂಶ

ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ  ಜೆಡಿಎಸ್  ಅಭ್ಯರ್ಥಿ ಠೇವಣಿ ಕಳೆದುಕೊಂಡಿದ್ದಾರೆ. ಹಾಗಾದ್ರೆ, ಜೆಡಿಎಸ್ ಅಭ್ಯರ್ಥಿ ಗಳಿಸಿದ ಮತ ಎಷ್ಟು ಗೊತ್ತಾ.?

ಬೆಂಗಳೂರು, (ನ.10) : ತೀವ್ರ ಕುತೂಹಲ ಕೆರಳಿಸಿದ್ದ ಶಿರಾ ಹಾಗೂ ರಾಜರಾಜೇಶ್ವರಿನಗರದ ಉಪ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 

ಇತ್ತ ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಂತ ಕೃಷ್ಣಮೂರ್ತಿ ಠೇವಣಿ ಕಳೆದುಕೊಂಡಿದ್ದಾರೆ.  ಹೌದು.. ಆರಂಭದಿಂದಲೂ ಎಲ್ಲಾ ಸುತ್ತಿನಲ್ಲೂ ಮೂರನೇ ಸ್ಥಾನದಲ್ಲಿಯೇ ಇದ್ದ ಕೃಷ್ಣಮೂರ್ತಿ ಅವರು ಗಳಿಸಿದ ಮತಗಳು 10,251.

ರಾಜರಾಜೇಶ್ವರಿನಗರದಲ್ಲಿ ಬಿಜೆಪಿಯ ಅಭ್ಯರ್ಥಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದರು. ಕಾಂಗ್ರೆಸ್‌ನ ಅಭ್ಯರ್ಥಿ ಕುಸುಮಾ ಸ್ಪರ್ಧಿಸಿದ್ದ ಮೊದಲ ಚುನಾವಣೆಯಲ್ಲಿಯೇ ಸೋಲು ಕಂಡರು. ಇನ್ನು ಜೆಡಿಎಸ್‌ನ ಕೃಷ್ಣಮೂರ್ತಿ ಕೇವಲ 10,251 ಮತಗಳನ್ನು ಪಡೆಯುವ ಮೂಲಕ ಠೇವಣಿ ಕಳೆದುಕೊಂಡಿದ್ದಾರೆ. 

RR ನಗರ ಬೈ ಎಲೆಕ್ಷನ್: ಬಿಜೆಪಿ ಗೆಲುವಿಗೆ, ಕಾಂಗ್ರೆಸ್ ಸೋಲಿಗೆ ಕಾರಣಗಳು...!

ಈ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಹಣಾಹಣಿ ನಡೆದಿತ್ತು. ಆದ್ರೇ ಜೆಡಿಎಸ್ ಆಟಕ್ಕುಂಟು, ಲೆಕ್ಕಕ್ಕಿಲ್ಲ ಎನ್ನುವಂತಾಗಿತ್ತು. ಆದರೂ ದಳಪತಿಗಳು ಒಕ್ಕಲಿಗ ಮತಗಳ ಮೇಲೆ ನಂಬಿಕೆ ಇಟ್ಟಿದ್ದರು. ಆದ್ರೆ, ಅದ್ಯಾವುದು ವರ್ಕೌಟ್ ಆಗಿಲ್ಲ.

ಬಿಜೆಪಿಯ ಅಭ್ಯರ್ಥಿ ಮುನಿರತ್ನ 1,25,734 ಮತಗಳನ್ನು ಪಡೆದು 57,936 ಮತಗಳ ಅಂತರದಿಂದ ಜಯಶೀಲರಾಗಿದ್ದರೇ, ಕಾಂಗ್ರೆಸ್ ನ ಅಭ್ಯರ್ಥಿ ಹೆಚ್.ಕುಸುಮಾ ಅವರು 67,798 ಮತ ಗಳಿಸಿ, ಸೋಲು ಕಂಡಿದ್ದಾರೆ.

ಇನ್ನು ಜೆಡಿಎಸ್ ಅಭ್ಯರ್ಥಿ ಠೇವಣಿ ಕಳೆದುಕೊಂಡಿರುವು ಒಂದು ಕಡೆ ಇರಲಿ ಕರ್ನಾಟಕದಲ್ಲಿ ಒಂದು ದಿನಕ್ಕೆ ಬರುವ ಕೊರೋನಾ ಪಾಸಿಟಿವ್ ಕೇಸ್‌ಗಳಷ್ಟು ಮತ ಪಡೆದಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!