Karnataka Assembly Elections 2023: ವಲಸಿಗರಿಂದ ಇಮ್ಮಡಿಯಾದ ಜೆಡಿಎಸ್‌ ಆತ್ಮವಿಶ್ವಾಸ..!

Published : Apr 23, 2023, 04:30 AM IST
Karnataka Assembly Elections 2023: ವಲಸಿಗರಿಂದ ಇಮ್ಮಡಿಯಾದ ಜೆಡಿಎಸ್‌ ಆತ್ಮವಿಶ್ವಾಸ..!

ಸಾರಾಂಶ

ರಾಷ್ಟ್ರೀಯ ಪಕ್ಷಗಳಿಂದ ಅಭ್ಯರ್ಥಿ ಘೋಷಣೆಯಾದ ಬಳಿಕ ಹಲವು ಮಂದಿ ಅಸಮಾಧಾನಗೊಂಡು ಜೆಡಿಎಸ್‌ ಸೇರಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮತ್ತಷ್ಟು ಬಲ ಬಂದಂತಾಗಿದೆ. ಪಕ್ಷ ನಿರೀಕ್ಷೆಗಿಂತ ಹೆಚ್ಚಿನ ಸ್ಥಾನ ಗಳಿಸುವ ವಿಶ್ವಾಸ ಹೆಚ್ಚಾಗಿದೆ. ಪ್ರಮುಖ ನಾಯಕರೇ ಪಕ್ಷಕ್ಕೆ ಬಂದಿರುವುದರಿಂದ ರಾಷ್ಟ್ರೀಯ ಪಕ್ಷಗಳಿಗೆ ಸಡ್ಡು ಹೊಡೆಯುವ ನಂಬಿಕೆ ಮೂಡಿದೆ. ಹೀಗಾಗಿ ಬಿಜೆಪಿ-ಕಾಂಗ್ರೆಸ್‌ಗೆ ಸರಿಸಾಟಿಯಾಗಿ ಸ್ಪರ್ಧೆವೊಡ್ಡಲು ಜೆಡಿಎಸ್‌ ಸಜ್ಜಾಗಿದೆ.

ಎ.ಮಂಜು

ಬೆಂಗಳೂರು(ಏ.23): ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ನಲ್ಲಿ ಟಿಕೆಟ್‌ ಸಿಗದೆ ಬೇಸರಗೊಂಡ ಪ್ರಮುಖ ಮುಖಂಡರು ಜೆಡಿಎಸ್‌ ಸೇರ್ಪಡೆಗೊಂಡಿರುವುದರಿಂದ ಪಕ್ಷದ ವರಿಷ್ಠರಿಗೆ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಆತ್ಮವಿಶ್ವಾಸ ಇಮ್ಮಡಿಗೊಂಡಿದೆ.

ರಾಷ್ಟ್ರೀಯ ಪಕ್ಷಗಳಿಂದ ಅಭ್ಯರ್ಥಿ ಘೋಷಣೆಯಾದ ಬಳಿಕ ಹಲವು ಮಂದಿ ಅಸಮಾಧಾನಗೊಂಡು ಜೆಡಿಎಸ್‌ ಸೇರಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮತ್ತಷ್ಟು ಬಲ ಬಂದಂತಾಗಿದೆ. ಪಕ್ಷ ನಿರೀಕ್ಷೆಗಿಂತ ಹೆಚ್ಚಿನ ಸ್ಥಾನ ಗಳಿಸುವ ವಿಶ್ವಾಸ ಹೆಚ್ಚಾಗಿದೆ. ಪ್ರಮುಖ ನಾಯಕರೇ ಪಕ್ಷಕ್ಕೆ ಬಂದಿರುವುದರಿಂದ ರಾಷ್ಟ್ರೀಯ ಪಕ್ಷಗಳಿಗೆ ಸಡ್ಡು ಹೊಡೆಯುವ ನಂಬಿಕೆ ಮೂಡಿದೆ. ಹೀಗಾಗಿ ಬಿಜೆಪಿ-ಕಾಂಗ್ರೆಸ್‌ಗೆ ಸರಿಸಾಟಿಯಾಗಿ ಸ್ಪರ್ಧೆವೊಡ್ಡಲು ಜೆಡಿಎಸ್‌ ಸಜ್ಜಾಗಿದೆ.

ಕುಮಾರಸ್ವಾಮಿ ಸಿಎಂ ಆದರೆ ಮಾತ್ರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ: ಅರಿಕೆರೆ‌ ಮಂಜುನಾಥಗೌಡ

ಕಾಂಗ್ರೆಸ್‌ನಿಂದ ರಘು ಆಚಾರ್‌, ಮನೋಹರ್‌ ತಹಸೀಲ್ದಾರ್‌, ಅನಿಲ್‌ ಲಾಡ್‌, ಬಿಜೆಪಿಯಿಂದ ಆಯನೂರು ಮಂಜುನಾಥ್‌, ಎ.ಬಿ.ಮಾಲಕರೆಡ್ಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆಪ್ತ ಎನ್‌.ಆರ್‌.ಸಂತೋಷ್‌, ಎಂ.ಪಿ.ಕುಮಾರಸ್ವಾಮಿ, ಸೂರ್ಯಕಾಂತ ನಾಗಮಾರಪಳ್ಳಿ, ಎ.ಮಂಜು ಜೆಡಿಎಸ್‌ ಸೇರಿದ ಪ್ರಮುಖರಾಗಿದ್ದಾರೆ. ಇನ್ನುಳಿದಂತೆ 20ಕ್ಕೂ ಹೆಚ್ಚು ನಾಯಕರು ಪಕ್ಷಕ್ಕೆ ಸೇರ್ಪಡೆಗೊಂಡು ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಕುಮಾರಸ್ವಾಮಿಗೆ ಹೆಗಲು ನೀಡಲು ಮುಂದಾಗಿದ್ದಾರೆ. ಇನ್ನು, ಜೆಡಿಎಸ್‌ ತೊರೆದು ಕಾಂಗ್ರೆಸ್‌ಗೆ ಹೋಗಿದ್ದ ವೈ.ಎಸ್‌.ವಿ.ದತ್ತ ಅವರು ಸಹ ಅಲ್ಲಿ ಟಿಕೆಟ್‌ ಸಿಗದೆ ಅಸಮಾಧಾನಗೊಂಡು ವಾಪಸ್‌ ಜೆಡಿಎಸ್‌ಗೆ ಬಂದಿದ್ದಾರೆ. ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ ಕೃಪಾಕಟಾಕ್ಷದಿಂದಾಗಿ ಅವರಿಗೂ ಟಿಕೆಟ್‌ ಲಭಿಸಿದೆ. ಎಲ್ಲಾ ನಾಯಕರು ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಪ್ರತಿಸ್ಪರ್ಧೆ ನೀಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ಅನ್ಯ ಪಕ್ಷಗಳಿಂದ ಬಂದಿರುವ ಮುಖಂಡರಿಗೆ ಅವರದೇ ಆದ ವರ್ಚಸ್ಸು ಇದೆ. ಹೀಗಾಗಿ ಅವರಿಗೆ ಹೆಚ್ಚಿನ ಮಣೆ ಹಾಕಲಾಗಿದೆ. ಅದನ್ನು ಬಳಸಿಕೊಂಡು ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ತಂತ್ರವನ್ನು ಕುಮಾರಸ್ವಾಮಿ ಹೆಣೆದಿದ್ದಾರೆ. ಸ್ವಂತ ಬಲದ ಸರ್ಕಾರ ರಚನೆಗೆ ತೀವ್ರ ಕಸರತ್ತು ನಡೆಸುತ್ತಿರುವ ಜೆಡಿಎಸ್‌, ವಲಸೆ ಬಂದ ನಾಯಕರು ಜಯಗಳಿಸುವ ವಿಶ್ವಾಸ ಹೊಂದಿದೆ ಎನ್ನಲಾಗಿದೆ.

ಬಿಜೆಪಿ ಮತ್ತು ಕಾಂಗ್ರೆಸ್‌ಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಜೆಡಿಎಸ್‌, ಕೆಲವು ಕ್ಷೇತ್ರಗಳನ್ನು ಮಾತ್ರ ಅಂತಿಮಗೊಳಿಸಿತ್ತು. ಪ್ರಮುಖ ನಾಯಕರು ಬರುವ ನಿರೀಕ್ಷೆಯಲ್ಲಿದ್ದ ಕ್ಷೇತ್ರಗಳನ್ನು ಅಂತಿಮಗೊಳಿಸಿರಲಿಲ್ಲ. ಪ್ರಚಾರ ಕಾರ್ಯವನ್ನೂ ಮೊದಲೇ ಆರಂಭಿಸಿ ಪಂಚರತ್ನ ರಥಯಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಿತು. ಮಿಷನ್‌ 123 ಅಡಿಯಲ್ಲಿ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡರು. ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ 2-3 ಸುತ್ತಿನ ಪ್ರವಾಸ ಮುಗಿಸಿದರು. ಈ ವೇಳೆ ಜೆಡಿಎಸ್‌ ಪರ ಸಿಕ್ಕ ಜನ ಬೆಂಬಲ ಗಮನಿಸಿ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಇದೀಗ ರಾಷ್ಟ್ರೀಯ ಪಕ್ಷಗಳಿಂದ ಪ್ರಮುಖ ನಾಯಕರು ಆಗಮಿಸಿರುವುದರಿಂದ ಅವರ ವಿಶ್ವಾಸಕ್ಕೆ ಮತ್ತಷ್ಟುಬಲ ಬಂದಂತಾಗಿದೆ. ಜೆಡಿಎಸ್‌ ಹೆಚ್ಚಿನ ಸ್ಥಾನ ಗಳಿಸುವ ನಂಬಿಕೆಯು ಅವರಲ್ಲಿ ಹೆಚ್ಚಾಗಿದೆ. ಇದೇ ನಿಟ್ಟಿನಲ್ಲಿ ಕುಮಾರಸ್ವಾಮಿ ಕಾರ್ಯೋನ್ಮುಖವಾಗಿದ್ದಾರೆ. ಜನರ ಬಳಿಗೆ ಹೋಗಿ ಮತಯಾಚನೆ ಮಾಡುತ್ತಿದ್ದಾರೆ.

ಪಂಚರತ್ನ ಕಾರ್ಯಕ್ರಮ ಮುಂದಿಟ್ಟುಕೊಂಡು ಪ್ರಚಾರದಲ್ಲಿ ತೊಡಗಿರುವ ಕುಮಾರಸ್ವಾಮಿ ಅವರು ಎರಡು ರಾಷ್ಟ್ರೀಯ ಪಕ್ಷಗಳ ನ್ಯೂನತೆಗಳನ್ನು ಸಹ ಜನತೆಯ ಮುಂದಿಡಲು ಮುಂದಾಗಿದ್ದಾರೆ. ಆದರೆ, ಬಿಜೆಪಿ-ಕಾಂಗ್ರೆಸ್‌ ವಿರುದ್ಧ ಹೆಚ್ಚಾಗಿ ಟೀಕೆಗಳನ್ನು ಮಾಡದೆ ಪಂಚರತ್ನ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಿ ಮತದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಕಾಂಗ್ರೆಸ್‌-ಬಿಜೆಪಿಯಿಂದ ಬಂದ ನಾಯಕರು ಸಹ ಸಾಥ್‌ ನೀಡುತ್ತಿರುವುದು ಕುಮಾರಸ್ವಾಮಿ ಅವರಿಗೆ ಚುನಾವಣೆಯಲ್ಲಿ ಜಯಗಳಿಸುವ ಆತ್ಮವಿಶ್ವಾಸ ಹೆಚ್ಚಿದೆ ಎಂದು ಹೇಳಲಾಗಿದೆ.

ಕೊಡಗು: ವಿರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಜೆಡಿಎಸ್ ನಾಮಪತ್ರ ವಾಪಸ್..?

ಪಂಚರತ್ನ ಯೋಜನೆಗಳನ್ನು ಜಾರಿಗೆ ತರುವ ಭರವಸೆಯೊಂದಿಗೆ ಮತಯಾಚನೆ ಮಾಡುತ್ತಿದ್ದಾರೆ. 123 ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಹೊಂದಿರುವ ಗುರಿ ತಲುಪಲು ಸಾಧ್ಯವಿರುವ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಪ್ರಾದೇಶಿಕ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಬೇಕೆಂಬ ಆಪೇಕ್ಷೆ ಹೊಂದಿದ್ದಾರೆ. ಇದಕ್ಕೆ ಚುನಾವಣಾ ಫಲಿತಾಂಶವೇ ಉತ್ತರ ನೀಡಲಿದೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!