ಮತ್ತೆ ಮೇಷ್ಟ್ರಾದ ಮಾಜಿ ಶಾಸಕ ದತ್ತ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪಾಠ...!

By Suvarna NewsFirst Published May 6, 2020, 10:31 PM IST
Highlights

ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವವರಿಗೆ ಸುಮಾರು 10 ಲಕ್ಷ ರೂ. ಆಹಾರ ಕಿಟ್ ವಿತರಿಸಿರುವ ಜೆಡಿಎಸ್‌ ನಾಯಕ ವೈ ಎಸ್‌ವಿ ದತ್ತ, ಇದೀಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮೇಷ್ಟ್ರಾಗಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. 

ಚಿಕ್ಕಮಗಳೂರು, (ಮೇ.06): ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ. ದತ್ತ ಇದೀಗ ಮೇಷ್ಟ್ರಾಗಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. 

"

ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಫೇಸ್ ಬುಕ್ ಲೈವ್‍ನಲ್ಲಿ ಪ್ರತಿ ದಿನ ಸಂಜೆ 7.30 ರಿಂದ 8.30ರವೆಗೆ ಪಾಠ ಮಾಡುತ್ತಿದ್ದು, ಒಂದು ವಾರ ಗಣಿತ, ಮತ್ತೊಂದು ವಾರ ಭೌತಶಾಸ್ತ್ರ ಪಾಠ ಮಾಡಲು ಮುಂದಾಗಿದ್ದಾರೆ. 

ಸೋಲಿಸಿದ್ರೂ ಕ್ಷೇತ್ರದ ಜನರ ನೆರವಿಗೆ ನಿಂತ ದತ್ತಣ್ಣನ ದೊಡ್ಡತನಕ್ಕೆ ಚಿತ್ರಗಳೇ ಸಾಕ್ಷಿ

ಲಾಕ್‌ಡೌನ್‌ನಿಂದ ಈಗಾಗಲೇ ಎಸ್.ಎಸ್.ಎಲ್.ಸಿ ಮುಂದೂಡಲಾಗಿದ್ದು, ಜೂನ್‌ನಲ್ಲಿ ಪರೀಕ್ಷೆ ನಡೆಸಲು ಚಿಂತನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ದತ್ತ ಅವರು, ಫೇಸ್‍ಬುಕ್ ಮೂಲಕ ರಾಜ್ಯದ 10ನೇ ಕ್ಲಾಸ್ ಮಕ್ಕಳಿಗೆ ಗಣಿತ ಪಾಠ ಮಾಡುತ್ತಿದ್ದಾರೆ.

ಮತ್ತೆ ಮೇಷ್ಟ್ರಾದ ದತ್ತ
ಹೌದು..ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ವೈ.ಎಸ್.ವಿ. ದತ್ತ ಮೂಲತಃ ಶಿಕ್ಷಕರು. ನಂತರ ಶಿಕ್ಷಕ ವೃತ್ತಿಯಿಂದ ರಾಜಕಾರಣಕ್ಕೆ ಬಂದಿದ್ದರು. ಇದೀಗ ಈಗ ಕೊರೋನಾ ಆತಂಕದಿಂದ ದೇಶವೇ ಲಾಕ್‍ಡೌನ್ ಆದ ಮೇಲೆ 10ನೇ ತರಗತಿಯ ಪರೀಕ್ಷೆ ಕೂಡ ಮುಂದೂಡಲಾಗಿದೆ.

ಜೂನ್ ತಿಂಗಳಿನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇರುವ ಕಾರಣ ಮಕ್ಕಳಿಗೆ ಪುನರ್ ಮನನ ತರಗತಿ ಅಗತ್ಯವೆಂದು ವರ್ಷಗಳ ಬಳಿಕ ಮತ್ತೆ ಶಿಕ್ಷಕ ವೃತ್ತಿಗೆ ಕಾಲಿಟ್ಟಿದ್ದಾರೆ.

click me!