2023ರ ಅಸೆಂಬ್ಲಿ ಎಲೆಕ್ಷನ್‌ಗೆ ಸೆ.28ಕ್ಕೆ ಜೆಡಿಎಸ್ ಮೊದಲ ಪಟ್ಟಿ: ಎಚ್‌ಡಿಕೆ

By Kannadaprabha NewsFirst Published Sep 2, 2021, 11:36 AM IST
Highlights

*  ಜೆಡಿಎಸ್‌ಗೆ ಬರುವವರು ಬರಬಹುದು, ಹೋಗೋರು ಹೋಗಬಹುದು
*  ಮೊದಲ ಹಂತದಲ್ಲಿ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಹೆಸರು ಅಂತಿಮ
*  ಸಿದ್ಧತೆ ದೃಷ್ಟಿಯಿಂದ ಎಲ್ಲರಿಗೂ ಬಿಡದಿ ಬಳಿಯ ನನ್ನ ತೋಟದಲ್ಲೇ ಕಾರ್ಯಾಗಾರ: ಎಚ್‌ಡಿಕೆ
 

ಮೈಸೂರು(ಸೆ.02):  2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೆ. 28ಕ್ಕೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2023ರ ವಿಧಾನಸಭಾ ಚುನಾವಣೆ ವೇಳೆಗೆ ಮಿಷನ್ 123 ಆಗಲಿದೆ. ಮೊದಲ ಹಂತದಲ್ಲಿ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗುವುದು. ಇನ್ನೂ 10 ರಿಂದ 15 ಅಭ್ಯರ್ಥಿಗಳ ಹೆಸರು ಪಟ್ಟಿಗೆ ಸೇರಿಕೊಳ್ಳುತ್ತವೆ ಎಂದರು. 

ಪಕ್ಷ ತೊರೆಯಲು ಎಚ್‌ಡಿಕೆ, ಸಾ. ರಾ ಕಾರಣ ಎಂದ ಮಾಜಿ ಸಚಿವ ಜಿಟಿಡಿ!

ಸಿದ್ಧತೆ ದೃಷ್ಟಿಯಿಂದ ಎಲ್ಲರಿಗೂ ಬಿಡದಿ ಬಳಿಯ ನನ್ನ ತೋಟದಲ್ಲೇ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು. ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷ ತೊರೆಯಲು ತೀರ್ಮಾನಿಸಿದ್ದಾರೆ. ಜೆಡಿಎಸ್ ಬಾಗಿಲು ದೊಡ್ಡದಾಗಿ ತೆರೆದಿದೆ. ಬರುವವರು ಬರಬಹುದು, ಹೋಗೋರು ಹೋಗಬಹುದು. 2 ವರ್ಷದ ಹಿಂದೆಯೇ ಪಕ್ಷದಿಂದ ದೂರ ಸರಿದಿದ್ದೇನೆ ಅಂತ ಅವರೇ ಹೇಳಿದ್ದಾರೆ.  ಈಗ ಒಂದು ನೆಪ ಹೇಳಿ ಹೋಗೋಕೆ ಮುಂದಾಗಿದ್ದಾರೆ ಎಂದರು.
 

click me!