
ಮಳವಳ್ಳಿ (ಫೆ.19): ಜೆಡಿಎಸ್ ಪಕ್ಷ ಜಾತ್ಯತೀತ ಪದವನ್ನು ಬಳಸುವ ಅರ್ಹತೆಯನ್ನೇ ಕಳೆದುಕೊಂಡಿದೆ. ಪಕ್ಷದಿಂದ ಆ ಪದವನ್ನು ಕೈಬಿಡಬೇಕು. ಜಾತ್ಯತೀತ ಎಂಬ ಪದವನ್ನು ಬಳಸುವ ನೈತಿಕತೆಯೇ ಜೆಡಿಎಸ್‌ಗೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ಮೈದಾನದಲ್ಲಿ ಬಿಡಿ ಎಂದು ಆಗ್ರಹಿಸಿದರು. ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಜೆಡಿಎಸ್, ಬಿಜೆಪಿ ಈಗ ಒಂದಾಗಿವೆ. ಮುಂದಿನ ಜನ್ಮದಲ್ಲಿ ನಾನು ಮುಸಲ್ಮಾನನಾಗಿ ಹುಟ್ಟುತ್ತೇನೆಂದು ದೇವೇಗೌಡರು ಹೇಳಿದರು. ಆದರೆ ಈಗ ಕೋಮುವಾದಿ ಪಕ ಬಿಜೆಪಿ ಜೊತೆ ಸೇರಿದಾರೆ. ಮಿಸ್ಟರ್‌ದೇವೇಗೌಡರೇ ನೀವೇ ನಿಮ್ಮ ಮಗನನ್ನು ಬಿಜೆಪಿ ಜೊತೆ ಕಳಿಸಿದ್ದೇನೆ ಅಂತೀರಿ. ಹಾಗಿದ್ದ ಮೇಲೆ ಜಾತ್ಯತೀತ ಎಂಬ ಪದ ಇಟ್ಟುಕೊಳ್ಳುವುದಕ್ಕೆ ನಿಮಗೆ ಯಾವ ನೈತಿಕತೆ ಇದೆ. ಈಗಲೇ ಜಾತ್ಯತೀತ ಪದವನ್ನು ಕೈಬಿಟ್ಟು ಬಿಡಿ ಎಂದು ಆಗ್ರಹಿಸಿದರು.
ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸೋಲಿಸಲು ಶ್ರಮಿಸಿದ್ದೆವು. ಅದಕ್ಕೆ 136 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬಂದಿದ್ದೇವೆ. ಈಗ ಬಿಜೆಪಿ ಮತ್ತು ಜೆಡಿಎಸ್ ಡೋಂಗಿಗಳ ರೀತಿ ಹೇಳಿಕೆ ನೀಡುತ್ತಿವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಈ ಬಾರಿ ಕನಿಷ್ಠ 20 ಸ್ಥಾನ ಗೆದ್ದು ಲೋಕಸಭೆಗೆ ಕಳಿಸುತ್ತೇವೆ. ಉಪಕಾರ ಮಾಡಿದವರನ್ನು ಎಂದಿಗೂ ಜನರು ಮರೆಯುವುದಿಲ್ಲ. ಈವರೆಗೂ 155 ಕೋಟಿ ಹೆಣ್ಣು ಮಕ್ಕಳು ಉಚಿತವಾಗಿ ಬಸ್ಸಿನಲ್ಲಿ ಓಡಾಡುತ್ತಿದ್ದಾರೆ. ಬಿಜೆಪಿ ದೇವೇಗೌಡರು, ಕುಮಾರಸ್ವಾಮಿ ಈ ಅವಕಾಶ ಮಾಡಿಕೊಟ್ಟಿದ್ದಾರಾ? ಅದನ್ನು ಮಾಡಿಕೊಟ್ಟಿದ್ದು ಸಿದ್ದರಾಮಯ್ಯ ಸರ್ಕಾರ ಎನ್ನುವುದನ್ನು ಮರೆಯಬೇಡಿ ಎಂದರು.
Loksabha Elections 2024: ಬಿಜೆಪಿ ವರಿಷ್ಠರಿಂದ ದೆಹಲಿಗೆ ಬುಲಾವ್: ನಿಖಿಲ್ ಕುಮಾರಸ್ವಾಮಿ
2018ರ ಚುನಾವಣೆಯಲ್ಲಿ ಜೆಡಿಎಸ್‌ನವರು 37 ಸ್ಥಾನಗಳಲ್ಲಿ ಗೆದ್ದಿದ್ದರು. 2023ರಲ್ಲಿ 19 ಸ್ಥಾನ ಗೆದ್ದಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಅದು ಶೂನ್ಯ ಆಗಲಿದೆ. ಜೆಡಿಎಸ್ ಶಾಸಕರು ಎಲ್ಲಿ ಪಕ್ಷ ಬಿಟ್ಟು ಹೋಗುವರೋ ಎಂಬ ಭಯದಿಂದ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಹಿಂದೆ ನಮ್ಮ ಜೊತೆ ಇದ್ದವರು ಇಂದು ಕೋಮುವಾದಿಗಳ ಜೊತೆ ಸೇರಿದ್ದಾರೆ. ಇಂಥವರನ್ನು ನಂಬಿ ಮತ ಹಾಕುವಿರಾ ಎಂದು ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.