'ನೇರವಾಗಿ ಪ್ರಶ್ನಿಸಲಾಗದ ಅತಿರಥ ಮಹಾರಥರು ಟ್ವಿಟರ್ ಮೂಲಕ ದಾಳಿ ಮಾಡಿ ಓಡಿದ್ದಾರೆ'

Published : Jul 29, 2020, 05:25 PM IST
'ನೇರವಾಗಿ ಪ್ರಶ್ನಿಸಲಾಗದ ಅತಿರಥ ಮಹಾರಥರು ಟ್ವಿಟರ್ ಮೂಲಕ ದಾಳಿ ಮಾಡಿ ಓಡಿದ್ದಾರೆ'

ಸಾರಾಂಶ

ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ಶುರುವಾಗಿದ್ದು, ಎಚ್‌ಡಿಕೆ ಸರನಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದ್ದಾರೆ.

ಬೆಂಗಳೂರು, (ಜುಲೈ.29) : "ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು CM ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ?" ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಇದಕ್ಕೆ ಮಾಜಿ ಸಿಎಂ  ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವ ಕುಮಾರಸ್ವಾಮಿ, ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು CM ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ?" ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.  ನನ್ನನ್ನು ನೇರವಾಗಿ ಪ್ರಶ್ನಿಸಲಾಗದ ಕಾಂಗ್ರೆಸ್‌ನ ಅತಿರಥ ಮಹಾರಥರು ಪಕ್ಷದ ಟ್ವಿಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ. ಆಯ್ತು, ಚರ್ಚೆ ಆರಂಭವಾಗಿದೆ. ಅದನ್ನು ನಾನು ಪೂರ್ತಿಗೊಳಿಸುತ್ತೇನೆ ಎಂದು ಹರಿಹಾಯ್ದಿದ್ದಾರೆ.

ಕುದುರೆ ವ್ಯಾಪಾರಕ್ಕೆ ಕಾಂಗ್ರೆಸ್ ಅನ್ವರ್ಥ ನಾಮ: ಖರೀದಿ ವಿಚಾರದಲ್ಲಿ 2 ಪಕ್ಷಗಳೂ ಅಪರಾಧಿಗಳೇ ಎಂದ ಎಚ್‌ಡಿಕೆ

 ನಾವು ಬೇಡವೆಂದರೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಿದಿರಿ. ಆನಂತರ ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್‌ನ ನೈತಿಕತೆ ಎಲ್ಲಿತ್ತು? ಎಂದು ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ನಾಯಕರನ್ನು ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜೆಡಿಎಸ್ ಎದುರು ನಡು ಬಗ್ಗಿಸಿ ನಾವು ಬೇಡವೆಂದರೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಿದಿರಿ. ಆನಂತರ ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್‌ ನೈತಿಕತೆ ಎಲ್ಲಿತ್ತು? ಎಂದು ಪ್ರಶ್ನೆಸಿದ್ದಾರೆ.

ರೈತರ ಸಾಲ ಮನ್ನಾ ಮಾಡಿ ರಾಜಧರ್ಮ ಪಾಲಿಸಬೇಕಿತ್ತು. ನಿಮ್ಮೆಲ್ಲಾ ಆಟಗಳು ಗೊತ್ತಿದ್ದು ಕೂಡ ರಾಜ್ಯದ ಜನತೆಯ ಹಿತಕ್ಕಾಗಿ ನಾನು ಕೂಡ ಚಾಣಕ್ಯ ನೀತಿಯನ್ನು ಪ್ರದರ್ಶಿಸಿ ರೈತರ ಹಿತ ರಕ್ಷಿಸಿದೆ. ಇದರಲ್ಲಿ ನನ್ನ ವೈಯಕ್ತಿಕ ಲಾಭವೇನಿಲ್ಲ ಎಂದು ಕಾಂಗ್ರೆಸ್​ಗೆ ಎಚ್​ಡಿಕೆ ತಿರುಗೇಟು ನೀಡಿದರು.

ಬೇಡವೆಂದರೂ ನಮ್ಮ ಮನೆ ಬಾಗಿಲಿಗೆ ಬಂದವರು ನೀವು. ನಾನು ಅಮಾಯಕನಾಗಿರಲಿಲ್ಲ. ಕಾಂಗ್ರೆಸ್​​ನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ. ಆದರೆ ನಾಡಿನ ರೈತರ ಹಿತ ಕಾಯಲು ನಾನು ಜಾಣತನ ಪ್ರದರ್ಶಿಸಿದೆ ಎಂಬುದು ನೆನಪಿರಲಿ ಎಂದು ಕುಟುಕಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌
ಧರ್ಮಸ್ಥಳ ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌: ಬಿಜೆಪಿ ನಾಯಕರ ತೀವ್ರ ಆರೋಪ