ಬಿಬಿಎಂಪಿ ಚುನಾವಣೆ ಮೇಲೆ ದಳಪತಿ ಕಣ್ಣು, ಜಲಧಾರೆ' ನಂತರ 'ಜನಸೇವಕ' ಕಾರ್ಯಕ್ರಮ

Published : Jun 16, 2022, 09:45 PM IST
ಬಿಬಿಎಂಪಿ ಚುನಾವಣೆ ಮೇಲೆ ದಳಪತಿ ಕಣ್ಣು, ಜಲಧಾರೆ' ನಂತರ 'ಜನಸೇವಕ' ಕಾರ್ಯಕ್ರಮ

ಸಾರಾಂಶ

* ಬಿಬಿಎಂಪಿ ಚುನಾವಣೆ ಮೇಲೆ ದಳಪತಿ ಕಣ್ಣು * ಜೆಡಿಎಸ್ ಪಕ್ಷದಿಂದ ಜನಸೇವಕ ಎಂಬ ವಿಶಿಷ್ಟ ಕಾರ್ಯಕ್ರಮ * ಜೂನ್ 22 ರಂದು ಕಾರ್ಯಕ್ರಮ ಉದ್ಘಾಟನೆ.

ಬೆಂಗಳೂರು, (ಜೂನ್.16): ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಜೆಡಿಎಸ್‌ ಜನತಾ ಜಲಧಾರೆ ಕಾರ್ಯಕ್ರಮ ನಡೆಸಿದೆ.  ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಜಾರಿಗೆ ಸಂಕಲ್ಪ ಮಾಡಿ ಜಾತ್ಯತೀತ ಜನತಾ ದಳ ಜನತಾ ಜಲಧಾರೆ- ಗಂಗಾ ರಥಯಾತ್ರೆ ರಾಜ್ಯದ ಹಲವೆಡೆ ಸಂಚರಿಸಿತ್ತು. ಇದೀಗ ಜೆಡಿಎಸ್ ಮತ್ತೊಂದು ವಿಶಿಷ್ಟ ಕಾರ್ಯಕ್ರಮ ಮಾಡಲು ಮುಂದಾಗಿದೆ.

ಹೌದು.... ಜಲಧಾರೆ' ನಂತರ ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ದಳಪತಿಗಳು,'ಜನಸೇವಕ' ಕಾರ್ಯಕ್ರಮ ಹಮ್ಮಿಕೊಂಡಿದೆ. ಜೂನ್ 22 ರಂದು ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.

ಜನಸೇವಕ ಹೆಸರಿನಲ್ಲಿ 25 ವಾಹನಗಳು ಬೆಂಗಳೂರಿನ ಎಲ್ಲಾ ವಾರ್ಡ್ ಗಳಲ್ಲಿ ಸಂಚರಿಸಲಿದ್ದು, ಪ್ರತಿಯೊಂದು ವಾರ್ಡ್ ನಲ್ಲೂ ಜನರ ಸಮಸ್ಯೆ ಗಳು, ಅಭಿವೃದ್ಧಿ ಕಾರ್ಯಕ್ರಮ ಗಳ ಬಗ್ಗೆ ಸಭೆ ನಡೆಸಲಾಗುತ್ತದೆ.

BBMP ಚುನಾವಣೆ ಮೀಸಲಾತಿಗೆ ರಾಜ್ಯಪಾಲರ ಅನುಮೋದನೆ

ಜೆಡಿಎಸ್ ಅಧಿಕಾರದಲ್ಲಿ ಇದ್ದಾಗ ಬೆಂಗಳೂರು ಅಭಿವೃದ್ಧಿಗೆ ಮಾಡಿರುವ ಕೆಲಸಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಅಲ್ಲದೇ ಬೆಂಗಳೂರಿಗೆ ದೇವೇಗೌಡರ ಹಾಗೂ‌ ಕುಮಾರಸ್ವಾಮಿ ನೀಡಿರುವ ಕೊಡುಗೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಿದೆ.

ಇದೇ ವೇಳೆ ಮುಂದಿನ ದಿನಗಳಲ್ಲಿ ಬೆಂಗಳೂರು ಅಭಿವೃದ್ಧಿಗೆ ಜನರ ಸಲಹೆಯನ್ನು ಪಡೆಯಲಲಾಗುತ್ತದೆ. ಪ್ರತಿಯೊಂದು ವಾಹನದಲ್ಲಿ ಒಂದು ಬೃಹತ್ ಸಲಹಾ ಪೆಟ್ಟಿಗೆ ಅಳವಡಿಕೆ ಮಾಡಲಾಗುತ್ತದೆ.  ಜನರು ಒಂದು ಚೀಟಿ ಪಡೆದು ಸಲಹೆಗಳನ್ನು ಬರೆದು ಪೆಟ್ಟಿಗೆ ಯಲ್ಲಿ ಹಾಕಬಹುದು.

ಓದು ಬರಹ ಬರದೇ ಇದ್ದವರಿಗೆ ವಾಹನದಲ್ಲೇ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ತಮ್ಮ ಸಮಸ್ಯೆ, ಅಥವಾ ಸಲಹೆಗಳನ್ನು ರೆಕಾರ್ಡ್ ಮಾಡಬಹುದು. ಈ ಎಲ್ಲಾ ಸಲಹೆಗಳನ್ನು  ಕ್ರೂಢೀಕರಿಸಲಿದೆ.

ಇದರಿಂದ ಜನ ಏನು ಬಯಸುತ್ತಿದ್ದಾರೆ ಎನ್ನುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಬೆಂಗಳೂರಿನ ಟ್ರಾಫಿಕ್, ಕಸ ಸಮಸ್ಯೆ, ಕೆರೆ ಒತ್ತುವರಿ ಸಮಸ್ಯೆ ಗಳ ಬಗ್ಗೆ ಪ್ರಮುಖ ವಾಗಿ ಗಮನ ಹರಿಸಲು ಈ ಕಾರ್ಯಕ್ರಮದ ಪ್ಲಾನ್ ಆಗಿದೆ. ಜನಸೇವಕ ವಾಹನಗಳು ಒಟ್ಟು ಒಂದು ತಿಂಗಳ ಕಾಲ ನಗರದಲ್ಲಿ ಸಂಚರಿಸಲಿವೆ.

ಬಿಬಿಎಂಪಿ ಎಲೆಕ್ಷನ್
​​​​​​​ವಾರ್ಡ್‌ ಮರು ವಿಂಗಡಣಾ ಸಮಿತಿಯು ಬಿಬಿಎಂಪಿ ಮುಖ್ಯ ಆಯುಕ್ತರ ನೇತೃತ್ವದಲ್ಲಿ ಕಳೆದೊಂದು ವರ್ಷದಿಂದ ಈವರೆಗೆ ವಾರ್ಡ್‌ ಮರು ವಿಂಗಡಣೆ ಕುರಿತು ವರದಿ ಸಿದ್ಧಪಡಿಸಿದೆ. ಸುಪ್ರೀಂಕೋರ್ಟ್‌ ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆಗೆ ಎಂಟು ವಾರ ಗಡುವು ನೀಡಿರುವ ಹಿನ್ನೆಲೆಯಲ್ಲಿ ವಾರ್ಡ್‌ಗಳ ಮರು ವಿಂಗಡಣಾ ಸಮಿತಿ ಈ ಹಿಂದೆ ಸಲ್ಲಿಸಿದ್ದ ಕರಡು ವರದಿಯಲ್ಲಿ ಕೆಲವೊಂದು ಲೋಪಗಳು ಇರುವುದನ್ನು ನಗರಾಭಿವೃದ್ಧಿ ಇಲಾಖೆ ಗುರುತಿಸಿ ಅದನ್ನು ಸರಿಪಡಿಸಿ ಮತ್ತೊಮ್ಮ ವರದಿ ಸಲ್ಲಿಸುವಂತೆ ನಿರ್ದೇಶಿಸಿತ್ತು.

2011ರ ಜನಗಣತಿ ಆಧಾರದಲ್ಲಿ 84.43 ಲಕ್ಷ ಜನಸಂಖ್ಯೆಯಿದ್ದು, ಅದನ್ನು 243 ವಾರ್ಡ್‌ಗಳಿಗೆ ಸರಾಸರಿ 35 ಸಾವಿರ ಜನಸಂಖ್ಯೆ ಹಂಚಿಕೆ ಮಾಡಬೇಕಿತ್ತು. ವಾರ್ಡ್‌ಗಳ ಸಂಖ್ಯೆ 198ರಿಂದ 243ಕ್ಕೆ ಹೆಚ್ಚಾಗುವುದರಿಂದ ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಕೆಲವು ಕ್ಷೇತ್ರಗಳಲ್ಲಿ ವಾರ್ಡ್‌ ಸಂಖ್ಯೆ ಹೆಚ್ಚು, ಕೆಲವು ಕ್ಷೇತ್ರದಲ್ಲಿ ಕಡಿಮೆ ಆಗಲಿದೆ. ನಗರ ಕೇಂದ್ರ ಭಾಗದಲ್ಲಿರುವ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆ ಇರುವುದಿಲ್ಲ ಎಂದು ತಿಳಿದು ಬಂದಿದೆ.

ಬೊಮ್ಮನಹಳ್ಳಿಯಲ್ಲಿ ಅತೀ ಹೆಚ್ಚು ವಾರ್ಡ್‌: ಕೇಂದ್ರ ಭಾಗದ ವಿಧಾನಸಭಾ ಕ್ಷೇತ್ರಗಳಾದ ಚಾಮರಾಜಪೇಟೆ, ಮಲ್ಲೇಶ್ವರ, ಶಾಂತಿನಗರ, ರಾಜಾಜಿನಗರ, ಚಿಕ್ಕಪೇಟೆ, ಗಾಂಧಿನಗರ, ಜಯನಗರ ಸೇರಿದಂತೆ 10 ವಿಧಾನಸಭಾ ಕ್ಷೇತ್ರಗಳ ವಾರ್ಡ್‌ಗಳ ಸಂಖ್ಯೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವಾರ್ಡ್‌ಗಳ ಪೈಕಿ ಒಂದು ವಾರ್ಡ್‌ ಕಡಿತಗೊಳಿಸಲಾಗಿದೆ. ಇದರಲ್ಲಿ ಕಾಂಗ್ರೆಸ್‌ ಶಾಸಕರ ಇರುವ 7 ಕ್ಷೇತ್ರಗಳು, ಬಿಜೆಪಿ ಶಾಸಕರ ಇರುವ 3 ಕ್ಷೇತ್ರಗಳಿವೆ. ಬೊಮ್ಮನಹಳ್ಳಿಯಲ್ಲಿ ಈ ಹಿಂದಿಗಿಂತ 6 ವಾರ್ಡ್‌ಗಳನ್ನು ಹೆಚ್ಚಿಗೆ ಸೃಷ್ಟಿಸಲಾಗಿದ್ದು, ಕ್ಷೇತ್ರದ ವಾರ್ಡ್‌ ಸಂಖ್ಯೆ 14ಕ್ಕೆ ಏರಿಕೆಯಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ