
ನವದೆಹಲಿ (ಸೆ.22): ಮುಂದಿನ ದಿನಗಳಲ್ಲಿ ಜೆಡಿಎಸ್- ಬಿಜೆಪಿ ಹೊಂದಾಣಿಕೆ ಬಗ್ಗೆ ಫಾರ್ಮಲಿ ಕೆಲವು ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಈಗಾಗಲೇ ಚರ್ಚೆ ಮಾಡಿರುವ ಬಗ್ಗೆ ರಾಷ್ಟ್ರೀಯ ಪಕ್ಷವಾಗಿ ಬಿಜೆಪಿ ರಾಜ್ಯ ಘಟಕದ ನಾಯಕರೊಂದಿಗೆ ಚರ್ಚೆ ಮಾಡಲಾಗುತ್ತದೆ. ಎನ್‌ಡಿಎನಲ್ಲಿ ಹೊಂದಾಣಿಕೆ ಮಾಡಿಕೊಂಡು ಹೋಗುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗಿದೆ ಎಂದು ಜೆಡಿಎಸ್ ವರಿಷ್ಠ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ನವದೆಹಲಿಯಲ್ಲಿ ಗೃಹಸಚಿವ ಅಮಿತ್‌ಶಾ ಮನೆಯಲ್ಲಿ ಸುಮಾರು 40 ನಿಮಿಷಗಳ ಕಾಲ ಚರ್ಚೆ ಮಾಡಿ ಹೊರಬಂದು ಮಾಧ್ಯಮಗಳೊಂದಿಗೆ ಮಾತನಾಡಿದ, ಮಾಜಿ ಸಿಎಂ ಕುಮಾರಸ್ವಾಮಿ, ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಹಾಗೂ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಮ್ಮುಖದಲ್ಲಿ ಚರ್ಚೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಜೆಡಿಎಸ್- ಬಿಜೆಪಿ ಹೊಂದಾಣಿಕೆ ಬಗ್ಗೆ ಫಾರ್ಮಲಿ ಕೆಲವು ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಈಗಾಗಲೇ ಚರ್ಚೆ ಮಾಡಿರುವ ಬಗಗೆ ರಾಷ್ಟ್ರೀಯ ಪಕ್ಷವಾಗಿ ಬಿಜೆಪಿ ರಾಜ್ಯ ಘಟಕದ ನಾಯಕರೊಂದಿಗೆ ಚರ್ಚೆ ಮಾಡಲಾಗುತ್ತದೆ. ಎನ್‌ಡಿಎನಲ್ಲಿ ಹೊಂದಾಣಿಕೆ ಮಾಡಿಕೊಂಡು ಹೋಗುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಕಾವೇರಿ ನೀರಿನ ವಿಚಾರದಲ್ಲಿ ಸಿಟ್ಟಿದ್ರೆ ಎಷ್ಟಾದ್ರೂ ಬೈಯಿರಿ, ಬೈಸಿಕೊಳ್ತೀವಿ: ಡಿಸಿಎಂ ಡಿ.ಕೆ. ಶಿವಕುಮಾರ್
ಕಾವೇರಿ ನೀರಿನ ವಿಚಾರವಾಗಿಯೂ ಗೃಹ ಸಚಿವರೊಂದಿಗೆ ಚರ್ಚೆ ಮಾಡಲಾಗಿದೆ. ಕಾವೇರಿ ನೀರಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದು, ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಸರ್ಕಾರ ತೋರಿದ ಅಸಡ್ಡೆಯ ಬಗ್ಗೆಯೂ ಮಾಹಿತಿ ನೀಡಿದ್ದೇವೆ. ಕಾವೇರಿ ಪ್ರಾಧಿಕಾರ ಹಾಗೂ ಸಮಿತಿಯಿಂದ ನೀರಿಲ್ಲ ಎಂದಾಕ್ಷಣ ನೀರು ಬಿಡಿ ಎಂದು ಆದೇಶ ಹೊರಡಿಸಿದ್ದಾರೆ. ಈಗಾಗಲೇ ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಅರ್ಜಿ ಹಾಕಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಿಗೆ ರೈತರ ಪರವಾಗಿ ಕೆಲಸ ಮಾಡುವಂತೆ ತಿಳಿಸಲಾಗಿದೆ ಎಂದರು.
ಸುಪ್ರೀಂ ಕೋರ್ಟ್‌ನಲ್ಲಿನ ತೀರ್ಪನ್ನು ಪರಿಶೀಲನೆ ಮಾಡಿದಾಗ ಧ್ಯಾನ್‌ಚಂದ್ ವರ್ಸಸ್ ಆಂಧ್ರಪ್ರದೇಶ ಸರ್ಕಾರದ ಸಂಬಂಧದಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ಪಾಲನೆ ಮಾಡದಿರುವುದು ನ್ಯಾಯ ಉಲ್ಲಂಘನೆ ಆಗದಿರುವ ಬಗ್ಗೆ ತಿಳಿಸಲಾಗಿದೆ. ಬೇಕಾದಲ್ಲಿ ಈ ಕೇಸ್‌ನ ನಂಬರ್ ಕೂಡ ಕೊಡುತ್ತೇನೆ. ಅದೇ ರೀತಿ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಬೇಕು. ಇನ್ನು ರಾಜ್ಯ ಸರ್ಕಾರ 5 ಗ್ಯಾರಂಟಿಯ ಭಜನೆ ಮಾಡಿಕೊಂಡು ರೈತರಿಗೆ ಅನ್ಯಾಯ ಮಾಡಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ನಿವೃತ್ತಿ ಹೊಂದಿದ ಹಲವು ನ್ಯಾಯಾಧೀಶರ ಬಳಿ ಹಾಗೂ ನಿವೃತ್ತಿ ಹೊಂದಿದ ಅಡ್ವೋಕೇಟ್ ಜನರಲ್‌ಗಳನ್ನು ಕರೆಸಿ ಚರ್ಚೆ ಮಾಡುವ ವ್ಯವಧಾನವೂ ಇಲ್ಲವಾಗಿದೆ ಎಂದು ಹೇಳಿದರು.
ನಾಳೆ ಮಂಡ್ಯ ಬಂದ್: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪ್ರಯಾಣಿಕರೇ ಎಚ್ಚರ!
2024ರ ಲೋಕಸಭೆಯ ಚುನಾವಣೆಯಲ್ಲಿ ಸ್ಪರ್ಧಿಸೊಲ್ಲ: ಮೈತ್ರಿಯ ವಿಚಾರದ ಬಗ್ಗೆ ಚರ್ಚೆಯನ್ನು ಮಾಡಲಾಗಿದೆ. ಆದರೆ, ಲೋಕಸಭೆಯಲ್ಲಿ ಎಷ್ಟು ಸೀಟು ಹಂಚಿಕೆ ಮಾಡಿಕೊಳ್ಳುವ ಬಗ್ಗೆ ಅಂತಿಮವಾಗಿ ಚರ್ಚೆಯನ್ನು ಮಾಡಿಲ್ಲ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಒಬ್ಬ ಕಾರ್ಯಕರ್ತನಾಗಿ ನಾನು ಕೆಲಸವನ್ನು ಮಾಡಿಕೊಂಡು ಹೋಗುತ್ತೇನೆ. ಇನ್ನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಕ್ಕೆ ಹಲವಾರು ನಾಯಕರಿದ್ದಾರೆ. ನಾನು ಮಂಡ್ಯದಿಂದ ಸ್ಪರ್ಧೆ ಮಾಡುವ ಆಕಾಂಕ್ಷಿಯಲ್ಲ. ನಾನು ಚುನಾವಣಾ ರಾಜಕಾರಣದಿಂದ ಸದ್ಯಕ್ಕೆ ಹಿಂದೆ ಸರಿದಿದ್ದೇನೆ. ಆದರೆ, ನಾನು ರಾಜಕಾರಣದಿಂದ ಹಿಂದಕ್ಕೆ ಸರಿಯುವುದಿಲ್ಲ. ನನ್ನ ವೃತ್ತಿಜೀವನ ಸಿನಿಮಾವಾಗಿದ್ದು, ಅದರಲ್ಲಿ ಮುಂದುವರೆಯುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.