ಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ನಿಂದ 'ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ' ಅಭಿಯಾನ

Published : Apr 10, 2025, 11:51 AM ISTUpdated : Apr 10, 2025, 12:13 PM IST
ಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ನಿಂದ 'ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ' ಅಭಿಯಾನ

ಸಾರಾಂಶ

ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಹಳೆ ಮೊಳಗಿಸಿದ ಬೆನ್ನಲ್ಲೇ ಪ್ರತಿಪಕ್ಷ ಜೆಡಿಎಸ್‌ ಸಹ ವಿನೂತನ  ಅಭಿಯಾನ ಆರಂಭಿಸಿದ್ದು, 'ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ' ಹೆಸರಲ್ಲಿ ಅಭಿಯಾನ ಆರಂಭಿಸಿದೆ. 

ಬೆಂಗಳೂರು (ಏ.10): ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಹಳೆ ಮೊಳಗಿಸಿದ ಬೆನ್ನಲ್ಲೇ ಪ್ರತಿಪಕ್ಷ ಜೆಡಿಎಸ್‌ ಸಹ ವಿನೂತನ  ಅಭಿಯಾನ ಆರಂಭಿಸಿದ್ದು, 'ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ' ಹೆಸರಲ್ಲಿ ಅಭಿಯಾನ ಆರಂಭಿಸಿದೆ. ಇದೇ ವೇಳೆ ಬೆಲೆ ಏರಿಕೆ ವಿರುದ್ಧ ಜನಜಾಗೃತಿ ಮೂಡಿಸಲು ಶನಿವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. 

ಜೆಡಿಎಸ್‌ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ 'ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ' ಎಂಬ ಅಭಿಯಾನ ಪ್ರಾರಂಭಿಸಿದೆ. ಪಕ್ಷದ ಕಾರ್ಯಕರ್ತರು ನಗರದ ಬಸ್ ನಿಲ್ದಾಣ ಸೇರಿ ವಿವಿಧೆಡೆ ಪೋಸ್ಟರ್ ಅಂಟಿಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇದೇ ವೇಳೆ ವಿದ್ಯುತ್, ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಸ್ತಾಪಿಸಿ 'ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ' ಹೆಸರಲ್ಲಿ ಹಾಡನ್ನು ಸಹ ಬಿಡುಗಡೆ ಮಾಡಿದೆ. ಮೂರು ನಿಮಿಷಗಳ ಹಾಡಿ ನಲ್ಲಿ ಸರ್ಕಾರದ ವಿರುದ್ಧ ಲೇವಡಿ ಮಾಡಲಾಗಿದೆ. ಪೋಸ್ಟರ್‌ನಲ್ಲಿನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಎಲ್ಲ ಮಾಹಿತಿ ಲಭ್ಯವಾಗಲಿದೆ. 

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಯುವಘಟಕ ರಾಜ್ಯಾಧ್ಯಕ್ಷ ನಿಖಿಲ್ ಅವರು ಅಭಿಯಾನ ಕುಮಾರಸ್ವಾಮಿ ಕುರಿತು ಮಾಹಿತಿ ನೀಡುವುದರ ಜತೆಗೆ https://www.saakappasaaku.com ಎಂಬ ನೂತನ ವೆಬ್‌ಸೈಟ್ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಈ ವೆಬ್ ಸೈಟ್‌ನಲ್ಲಿ ಜೆಡಿಎಸ್ ಕಾರ್ಯಕರ್ತರು ಮಾತ್ರವಲ್ಲ, ರಾಜ್ಯದ ಯಾರೇ ಆದರೂ ನೋಂದಣಿ ಮಾಡಿಕೊಂಡರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಹೇಳಿದರು.

ಹೊಸ ಮೆಟ್ರೋ ಪಿಲ್ಲರ್‌ಗಳ ನಡುವೆ ಮಣ್ಣು ರಹಿತ ಗಾರ್ಡನ್‌ ನಿರ್ಮಾಣ

ಶನಿವಾರ ಬೃಹತ್ ಪ್ರತಿಭಟನೆ: ಬೆಲೆ ಏರಿಕೆ ವಿರುದ್ದ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇದೇ ಶನಿವಾರ ಬೆಂಗಳೂರಿನಲ್ಲಿನ ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು. ಸರ್ಕಾರ ವಿರುದ್ಧ ಆರಂಭಿಸಿರುವ ಅಭಿಯಾನವು ಕೇವಲ ಒಂದೆರಡು ದಿನಕ್ಕೆ ಸಿಮೀತವಾಗಿ ರುವುದಿಲ್ಲ. ಅದು ನಿರಂತರವಾಗಿ ನಡೆಸ ಲಾಗುತ್ತದೆ ಎಂದು ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು, ಶಾಸಕ ಸಚಿವ ಸ್ವರೂಪ್ ಪ್ರಕಾಶ್, ಮಾಜಿ ವೆಂಕಟರಾವ್ ನಾಡಗೌಡ, ಸಂಸದ ಮಲ್ಲೇಶ್ ಬಾಬು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?