ಜೆಡಿಎಸ್‌ ತೊರೆದು ಬಿಜೆಪಿ ಸೇರಿದ ರಾಮಸ್ವಾಮಿ

Published : Apr 02, 2023, 08:29 AM IST
ಜೆಡಿಎಸ್‌ ತೊರೆದು ಬಿಜೆಪಿ ಸೇರಿದ ರಾಮಸ್ವಾಮಿ

ಸಾರಾಂಶ

ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರದಿಂದ, ಅದಿಲ್ಲವಾದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾಸನದಿಂದ ಸ್ಪರ್ಧೆ ಸಾಧ್ಯತೆ. 

ನವದೆಹಲಿ(ಏ.02): ಅರಕಲಗೂಡು ಕ್ಷೇತ್ರದಿಂದ ಎರಡು ಬಾರಿ ಕಾಂಗ್ರೆಸ್‌ ಮತ್ತು ಎರಡು ಬಾರಿ ಜೆಡಿಎಸ್‌ ಶಾಸಕರಾಗಿದ್ದ ಎ.ಟಿ.ರಾಮಸ್ವಾಮಿ ಕೇಂದ್ರ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಸಮ್ಮುಖದಲ್ಲಿ ದೆಹಲಿಯಲ್ಲಿ ಶನಿವಾರ ಬಿಜೆಪಿಗೆ ಸೇರ್ಪಡೆಯಾದರು. ಅವರಿಗೆ ಬಿಜೆಪಿ ಸದಸ್ಯತ್ವ ನೀಡಿ, ಬಿಜೆಪಿ ಶಾಲು ಹೊದಿಸಿ ಬಿಜೆಪಿ ನಾಯಕರು ಬರಮಾಡಿಕೊಂಡರು. ಈ ವೇಳೆ ರಾಜ್ಯಸಭಾ ಸಂಸದ ಲೆಹರ್‌ಸಿಂಗ್‌ ಸಾಥ್‌ ನೀಡಿದರು. ಈ ಮಧ್ಯೆ ಅವರು ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರದಿಂದ, ಅದಿಲ್ಲವಾದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾಸನದಿಂದ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಕ್ಷ ಸೇರ್ಪಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎ.ಟಿ.ರಾಮಸ್ವಾಮಿ, ನಾನು ಎಂಎಲ್‌ಎ ಆಕಾಂಕ್ಷಿ ಅಲ್ಲ. ಪಕ್ಷ ಅವಕಾಶ ಕೊಟ್ಟರೆ ಸಣ್ಣದೊಂದು ಕಪ್ಪು ಚುಕ್ಕಿಯೂ ಇಲ್ಲದಂತೆ ಕೆಲಸ ಮಾಡುತ್ತೇನೆ. ಭಾನುವಾರ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಮತ್ತು ಪಕ್ಷದ ರಾಷ್ಟ್ರಾಧ್ಯಕ್ಷರಾದ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದೇನೆ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿ ಹಲವರ ಜೊತೆ ಕೆಲಸ ಮಾಡುವುದು ಖುಷಿಯ ಸಂಗತಿ ಎಂದರು.

ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ರಾಮಸ್ವಾಮಿಗೌಡ

ಇಡೀ ವಿಶ್ವದಲ್ಲೇ ಭಾರತ ಪ್ರಗತಿಯಲ್ಲಿ ದಾಪುಗಾಲು ಹಾಕುತ್ತಿದೆ. ಬಿಜೆಪಿ ನಾಯಕರು ಮೌಲ್ಯಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ಬಿಜೆಪಿ ಸೇರುತ್ತಿದ್ದೇನೆ ಎಂದ ಅವರು, ಯಾವುದೇ ಷರತ್ತುಗಳು ಇಲ್ಲದೆ ನಾನು ಬಿಜೆಪಿ ಸೇರ್ಪಡೆಯಾಗಿದ್ದೇನೆ. ನಾನು ಎಂಎಲ್‌ಎ ಆಕಾಂಕ್ಷಿ ಅಲ್ಲ. ಪಕ್ಷ ಅವಕಾಶ ಕೊಟ್ಟರೆ ಸಣ್ಣ ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡುವೆ ಎಂದರು.

ಭೂಗಳ್ಳರ ವಿರುದ್ಧ ಹೋರಾಟ ನಿಲ್ಲದು:

ನಾನು 41,000 ಎಕರೆ ನಕಲಿ ದಾಖಲೆ ಸೃಷ್ಟಿಸಿ ಹಕ್ಕು ಸ್ಥಾಪಿಸಿದ್ದ ಭೂಗಳ್ಳರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಿದೆ. ಹಣವಂತರು, ಪ್ರಭಾವಿಗಳು ನಕಲಿ ದಾಖಲೆ ಸೃಷ್ಟಿಸಿಕೊಂಡಿದ್ದಾರೆ. ಸರ್ಕಾರಿ ಅಧಿಕಾರಿಗಳೂ ಇದರಲ್ಲಿ ಭಾಗಿಯಾಗಿದ್ದಾರೆ. ಭೂಗಳ್ಳರ ಮಾಫಿಯಾ ಮತ್ತು ಹಣಬಲದ ಬಲಿಪಶು ನಾನು. ಆದರೆ ನನ್ನ ಹೋರಾಟ ಮಾತ್ರ ನಿಲ್ಲಿಸಲ್ಲ ಎಂದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: BBK 12 - ಕಿಚ್ಚ ಸುದೀಪ್‌ ಮುಂದೆ ರೇಷ್ಮೆ ಶಾಲಿನಲ್ಲಿ ಹೊಡೆದಂತೆ ಸತ್ಯದರ್ಶನ ಮಾಡಿಸಿದ ಗಿಲ್ಲಿ ನಟ