ಒಪ್ಪಿಗೆ ಇಲ್ದೆ ಅಧಿಕಾರಿಗಳ ವೇತನ ಹೆಚ್ಚಳಕ್ಕೆ ಗರಂ

Kannadaprabha News   | Asianet News
Published : Sep 23, 2020, 08:59 AM IST
ಒಪ್ಪಿಗೆ ಇಲ್ದೆ ಅಧಿಕಾರಿಗಳ ವೇತನ ಹೆಚ್ಚಳಕ್ಕೆ ಗರಂ

ಸಾರಾಂಶ

ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡಿದ್ದಾರೆ. ನಂತರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಅಧಿಕಾರಿಗಳಿಗೆ ಅಂತಹ ಅಧಿಕಾರ ಕೊಟ್ಟವರ್ಯಾರು ಎಂದು ಜೆಡಿಎಸ್ ಮುಖಂಡ ಎಟಿ ರಾಮಸ್ವಾಮಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಧಾನಸಭೆ (ಸೆ.23): ‘ಶಾಸಕಾಂಗದ ಒಪ್ಪಿಗೆ ಪಡೆಯದೆ ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡಿದ್ದಾರೆ. ನಂತರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಅಧಿಕಾರಿಗಳಿಗೆ ಅಂತಹ ಅಧಿಕಾರ ಕೊಟ್ಟವರಾರ‍ಯರು? ಸರ್ಕಾರ ಅಷ್ಟುಬಲಹೀನವಾಯಿತಾ?’ ಎಂದು ಜೆಡಿಎಸ್‌ ಸದಸ್ಯ ಎ.ಟಿ. ರಾಮಸ್ವಾಮಿ ಅವರು ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಘಟನೆ ವಿಧಾನಸಭೆಯಲ್ಲಿ ಮಂಗಳವಾರ ನಡೆಯಿತು.

ಕೋವಿಡ್‌ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ‘ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರೆ ಕಾನೂನು (ತಿದ್ದುಪಡಿ) ವಿಧೇಯಕ 2020’ರ ಮೇಲಿನ ಚರ್ಚೆ ವೇಳೆ ಈವಿಷಯ ಪ್ರಸ್ತಾಪಿಸಿದ ಎ.ಟಿ.ರಾಮಸ್ವಾಮಿ ಅವರು, ‘ಕೋವಿಡ್‌ ಹಿನ್ನೆಲೆಯಲ್ಲಿ ಚುನಾಯಿತ ಪ್ರತಿನಿಧಿಗಳ ವೇತನ, ಭತ್ಯೆ ಕಡಿತಕ್ಕೆ ನಮ್ಮ ಯಾವುದೇ ವಿರೋಧ ಇಲ್ಲ. ಆದರೆ, ನ್ಯಾಯಾಂಗ ಅಧಿಕಾರಿಗಳು ಇಂತಹ ಸಂಕಷ್ಟದ ಸಂದರ್ಭದಲ್ಲಿ ಶಾಸನ ಸಭೆಯ ಒಪ್ಪಿಗೆಯನ್ನೂ ಪಡೆಯದೆ ತಮ್ಮ ವೇತನವನ್ನು ತಾವೇ ಹೆಚ್ಚಿಸಿಕೊಂಡಿದ್ದಾರೆ. ಆ ಬಳಿಕ ಸರ್ಕಾರ ಒಪ್ಪಿಗೆ ನೀಡಿದೆ. ಸರ್ಕಾರದ ಅಷ್ಟುಬಲ ಹೀನವಾಗಿದೆಯಾ ಎಂದು ಪ್ರಶ್ನಿಸಿದರು.

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಯಡಿಯೂರಪ್ಪ ...

ಇದಕ್ಕೆ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ‘ಅಧಿಕಾರಿಗಳ ವೇತನ ಹೆಚ್ಚಳದ ಬಗ್ಗೆ ಸದ್ಯಕ್ಕೆ ಉತ್ತರ ಕೊಡುವ ಸ್ಥಿತಿಯಲ್ಲಿಲ್ಲ. ಈ ಬಗ್ಗೆ ಪೂರ್ಣ ಮಾಹಿತಿ ತರಿಸಿಕೊಂಡು ಸಭೆಗೆ ಉತ್ತರ ನೀಡಲಾಗುವುದು ಎಂದರು.
 
ಜನಪ್ರತಿನಿಧಿಗಳ ವೇತನ, ಭತ್ಯೆ ಕಡಿತದಿಂದ ಸರ್ಕಾರಕ್ಕೆ ಕೋವಿಡ್‌ ನಿರ್ವಹಣೆಗೆ 16ರಿಂದ 18 ಕೋಟಿ ರು.ನಷ್ಟುಹಣ ಉಳಿತಾಯವಾಗಬಹುದೆಂದು ಅಂದಾಜಿಸಲಾಗಿದೆ. ನ್ಯಾಯಾಂಗಕ್ಕೆ ಸಂಬಂಧಿಸಿದ ವೇತನಾನುದಾನ ಹಂಚಿಕೆ, ಬಳಕೆಯ ನಿಯಂತ್ರಣ ಅಧಿಕಾರ ಪೂರ್ಣ ನಮ್ಮ ಕೈಯಲ್ಲಿಲ್ಲ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ