ಬಸವರಾಜ ಹೊರಟ್ಟಿ ಬಿಜೆಪಿ ಸೇರ್ತಾರಾ? ಇದಕ್ಕೆ ಸ್ಪಷ್ಟನೆ ಕೊಟ್ಟ ಪರಿಷತ್ ಸಭಾಪತಿ

By Suvarna News  |  First Published Feb 11, 2022, 12:34 PM IST

* ಬಸವರಾಜ ಹೊರಟ್ಟಿ  ಅವಧಿ ಜೂನ್ ವೇಳೆಗೆ ಮುಕ್ತಾಯ
* ಬಸವರಾಜ ಹೊರಟ್ಟಿ ಬಿಜೆಪಿ ಸೇರ್ತಾರಾ? 
* ಇದಕ್ಕೆ ಸ್ಪಷ್ಟನೆ ಕೊಟ್ಟ ಪರಿಷತ್ ಸಭಾಪತಿ


ಹುಬ್ಬಳ್ಳಿ, (ಫೆ.11):  ಕರ್ನಾಟಕದ 4 ವಿಧಾನಪರಿಷತ್ (Karnataka Legislative Council Election) ಸ್ಥಾನಗಳಿಗೆ  ಈ ವರ್ಷದ ಮಧ್ಯಭಾಗದಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತವಾಗಿವೆ.  

 ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರ  ಸದಸ್ಯತ್ವ ಅವಧಿ ಜೂನ್ ವೇಳೆಗೆ ಮುಕ್ತಾಯವಾಗಲಿದ್ದು, ಅವರು ಮುಂದಿನ ಚುನಾವಣೆಗೆ ಬಿಜೆಪಿಯಿಂದ ಕಣಕ್ಕಿಳಿಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಇದೀಗ ಅದಕ್ಕೆ ಸ್ವತಃ ಹೊರಟ್ಟಿ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

Tap to resize

Latest Videos

Karnataka MLC Poll ಕರ್ನಾಟಕದಲ್ಲಿ ಮತ್ತೆ ಚುನಾವಣೆ, ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ

ಹುಬ್ಬಳ್ಳಿಯಲ್ಲಿ ಇಂದು(ಶುಕ್ರವಾರ) ಮಾತನಾಡಿದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ , ಸದ್ಯಕ್ಕೆ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಸೇರುವ ಬಗ್ಗೆ ನಾನು ಎಲ್ಲೂ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಶಿಕ್ಷಕರ ಕ್ಷೇತ್ರಕ್ಕೆ ಆಯಾ ಪಕ್ಷ ಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಪ್ರಕಟಿಸಿವೆ. ಇನ್ನೂ ಮೇ ತಿಂಗಳಲ್ಲಿ ಚುನಾವಣೆ ಇದೆ . ನನ್ನ ಚುನಾವಣೆ ವಿಚಾರದಲ್ಲಿ ಜಾತಿ  ಪ್ರಶ್ನೆಯೇ ಬರಲ್ಲ. ಶಿಕ್ಷಕರ ಬೆಂಬಲ ನನಗಿದೆ. ಯಾವ ಪಕ್ಷಕ್ಕೂ ಹೋಗಬೇಕೆಂಬುದಿಲ್ಲ. ಕೆಲವರು ಸ್ನೇಹಿತರ ಬಿಜೆಪಿಗೆ ಸೇರುವಂತೆ ಆಹ್ವಾನ ನೀಡಿದ್ದರು. ಮತ್ತೆ ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಸಲಹೆ ನೀಡಿದ್ದಾರೆ  ಎಂದರು.

ಮತಾಂತರ ನಿಷೇಧ ಕಾಯ್ದೆ ಬಜೆಟ್ ಅಧಿವೇಶನದಲ್ಲಿ ಪರಿಷತ್ ನಲ್ಲಿ ಮಂಡನೆ ಅನ್ನೋ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾವ ಮಸೂದೆಗಳು ಮಂಡನೆಯಾಗುತ್ತೆ ಅನ್ನೋದರ ಬಗ್ಗೆ ಮಾಹಿತಿಯಿಲ್ಲ  ಪರಿಷತ್ ನಲ್ಲಿ ಮಂಡನೆ ಆದ್ರೂ ನೆಕ್ ಟು ನೆಕ್ ಫೈಟ್ ಇದೆ ಎಂದು ತಿಳಿಸಿದರು.

 ಹಿಜಾಬ್(Hijab),​ ಕೇಸರಿ ಶಾಲು ವಿವಾದಕ್ಕೆ ಸಂಬಂಧಪಟ್ಟಂತೆ ಹೊರಟ್ಟಿ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ತನ್ನ ಜವಬ್ದಾರಿಯಿಂದ ವಿಮುಖವಾಗಿದೆ‌. ಹಿಜಾಬ್ ಕೇಸರಿ ವಿವಾದ(controversy) ರಾಜಕೀಯಮಯವಾಗಿದ್ದು, ಶಾಲಾ-ಕಾಲೇಜಿಗೆ ರಜೆ ನೀಡಿದ್ದು ಸರಿಯಲ್ಲ. ಸರ್ಕಾರಕ್ಕೆ ಈ ವಿಷಯದಲ್ಲಿ ಗಂಭೀರತೆ ಇಲ್ಲ. ಶಿಕ್ಷಣ ಸಚಿವರು ಸುಮ್ಮನೆ ಆರಾಮಾಗಿದ್ದರೆ ಹೇಗೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ರಾಮನ ಭಕ್ತರೇ ಇರಲಿ ಹನುಮನ ಭಕ್ತರೇ ಇರಲಿ. ಮಕ್ಕಳ ಜೊತೆ ರಾಜಕೀಯ ಮಾಡಬಾರದು. ಕೆಲ ಸಂಘಟನೆಗಳು ರಾಜಕೀಯ ನಾಯಕರ ಸಂಬಂಧಿಕರಾಗಿದ್ದಾರೆ. ಕುಮ್ಮಕ್ಕು ಕೊಟ್ಟು ಈ ರೀತಿ ಮಾಡಲಾಗುತ್ತಿದೆ. ಸಮಾಜದಲ್ಲಿ ಜವಬ್ದಾರಿ ಇರುವವರು ನಮ್ಮ ಊರು, ‌ನಮ್ಮ ಜಿಲ್ಲೆಯ ಮಕ್ಕಳು ಎನ್ನುವುದನ್ನು ಮರೆತಿದ್ದಾರೆ. ಈ ರೀತಿ ಮಾಡುವುದು ಒಂದೇ, ಕೊಲೆ ಮಾಡುವುದು ಎರಡೂ ಒಂದೇ ಎಂದು ಹೇಳಿದರು.

ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ
 2 ಪದವೀಧರ ಮತ್ತು 2 ಶಿಕ್ಷಕರ ಕ್ಷೇತ್ರ ಒಟ್ಟು ನಾಲ್ಕು ಸ್ಥಾನಗಳಿಗೆ ,  ಜೂನ್ ಇಲ್ಲವೇ ಜುಲೈ ತಿಂಗಳ ಮಧ್ಯ ಭಾಗದಲ್ಲಿ  ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಈ ಸಂಬಂಧ ಬಿಜೆಪಿ (BJP) ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಿದೆ.

ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಅರುಣ್ ಶಹಾಪುರ್ ಅವರಿಗೆ ಟಿಕೆಟ್ ದೊರೆಯುವ ನಿರೀಕ್ಷೆಗಳಿವೆ.  

ಇನ್ನು ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಹೆಸರು ಘೋಷಿಸುವ ನಿರೀಕ್ಷೆ ಇದೆ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಗೋ.‌ಮಧುಸೂದನ್ ಹಾಗೂ ಕಳೆದ ಬಾರಿ ಸೋತಿದ್ದ ಮೈ.ವಿ.ರವಿಶಂಕರ ಹೆಸರುಗಳು ರೇಸ್​ನಲ್ಲಿದ್ದು, ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇತ್ತ ಕಾಂಗ್ರೆಸ್​ನಲ್ಲಿ ಪರಿಷತ್​ನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಮಧುಮಾದೇಗೌಡರು ಹಾಗೂ ಧಾರವಾಡದ ಗುರಿಕಾರ್ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ. ಇನ್ನೆರಡು ಕ್ಷೇತ್ರಗಳಿಗೆ ನಾಯಕರ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

click me!