
ಬೆಂಗಳೂರು(ಜೂ.01): ಮುಸ್ಲಿಮರನ್ನು ಬಲಿ ಕೊಡಬೇಕು ಎಂಬ ಉದ್ದೇಶದಿಂದಲೇ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮಗೆ ನಾಲ್ಕನೇ ಅಭ್ಯರ್ಥಿ ಹಾಕುವಂತೆ ಹೇಳಿದ್ದೇ ಕಾಂಗ್ರೆಸ್. ಆ ಪಕ್ಷದ ಮುಖಂಡರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದರು. ಇದಾದ ಮೇಲೂ ಇವರು ಅಭ್ಯರ್ಥಿ ಹಾಕಿದ್ದಾರೆ ಎಂದರೆ ಮುಂದಿನದ್ದನ್ನು ಜನರು ತೀರ್ಮಾನ ಮಾಡುತ್ತಾರೆ ಎಂದರು. ಬಿಜೆಪಿ ಗೆಲ್ಲಿಸಬೇಕು ಎಂಬುದೇ ಇವರ ಉದ್ದೇಶ ಇದ್ದರೆ ಅಭ್ಯರ್ಥಿಯ ನಾಮಪತ್ರವನ್ನು ವಾಪಸ್ ಪಡೆದುಕೊಳ್ಳುವುದಿಲ್ಲ ಎಂದು ಕಿಡಿಕಾರಿದರು.
Karnataka Politics: ಕುಮಾರಸ್ವಾಮಿ ಮುಖ್ಯಮಂತ್ರಿ ಆಗೋದು ನಿಶ್ಚಿತ: ಸಿಎಂ ಇಬ್ರಾಹಿಂ
ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್‌ಸಿಗರಿಗೆ ಮುಸ್ಲಿಮರ ಬಗ್ಗೆ ಪ್ರೀತಿ ಇದ್ದಿದ್ದರೆ ಮೊದಲ ಅಭ್ಯರ್ಥಿಯನ್ನಾಗಿ ಮಾಡಬೇಕಿತ್ತು. ಆದರೆ, ಎರಡನೇ ಅಭ್ಯರ್ಥಿಯಾಗಿ ಯಾಕೆ ಹಾಕಿದ್ದಾರೆ ಎಂದು ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.