ಜೆಡಿಎಸ್‌ ಅಧಿಕಾರಕ್ಕೆ ಬಂದರೆ ವೃದ್ಧರಿಗೆ 5000, ರೈತರಿಗೆ ಎಕರೆಗೆ ವರ್ಷಕ್ಕೊಮ್ಮೆ 10000: ಎಚ್‌ಡಿಕೆ ಘೋಷಣೆ

Published : Jan 31, 2023, 04:50 PM IST
ಜೆಡಿಎಸ್‌ ಅಧಿಕಾರಕ್ಕೆ ಬಂದರೆ ವೃದ್ಧರಿಗೆ 5000, ರೈತರಿಗೆ ಎಕರೆಗೆ ವರ್ಷಕ್ಕೊಮ್ಮೆ 10000: ಎಚ್‌ಡಿಕೆ ಘೋಷಣೆ

ಸಾರಾಂಶ

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರೈತರಿಗೆ ಪ್ರತಿ ಎಕರೆ ಜಮೀನಿಗೆ ಪ್ರತಿವರ್ಷ 10 ಸಾವಿರ ಆರ್ಥಿಕ ನೆರವು, ವೃದ್ಧಾಪ್ಯ ವೇತನ 5 ಸಾವಿರಕ್ಕೆ ಹೆಚ್ಚಳ ಮತ್ತು ವಿಧವಾ ವೇತನ 2,500ಗೆ ಏರಿಕೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಕೊಪ್ಪಳ (ಜ.31): ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರೈತರಿಗೆ ಪ್ರತಿ ಎಕರೆ ಜಮೀನಿಗೆ ಪ್ರತಿವರ್ಷ 10 ಸಾವಿರ ಆರ್ಥಿಕ ನೆರವು, ವೃದ್ಧಾಪ್ಯ ವೇತನ 5 ಸಾವಿರಕ್ಕೆ ಹೆಚ್ಚಳ ಮತ್ತು ವಿಧವಾ ವೇತನ 2,500ಗೆ ಏರಿಕೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಸೋಮವಾರ ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ತಾವರಗೇರಾ ಗ್ರಾಮದಲ್ಲಿ ಈ ಘೋಷಣೆ ಮಾಡಿದರು. ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರಾಜ್ಯದ ರೈತರನ್ನು ಸಾಲಮುಕ್ತಗೊಳಿಸುವುದು, ಹಳ್ಳಿಗಳ ಅಭಿವೃದ್ಧಿ, ಸ್ವಸಹಾಯ ಸಂಘಗಳ ಸಾಲ ಮನ್ನಾ ಸೇರಿ ಪಂಚರತ್ನ ಯೋಜನೆಗಳನ್ನು ಅನುಷ್ಠಾನ ಮಾಡುತ್ತೇನೆ. ಕಾಂಗ್ರೆಸ್‌ ಮತ್ತು ಬಿಜೆಪಿಯೊಂದಿಗೆ ಕೈಜೋಡಿಸಿದರೆ ಯೋಜನೆಗಳ ಅನುಷ್ಠಾನ ಅಸಾಧ್ಯ. ಆದ್ದರಿಂದ ಜೆಡಿಎಸ್‌ಗೆ ಸಂಪೂರ್ಣ ಅಧಿಕಾರ ನೀಡುವಂತೆ ಮನವಿ ಮಾಡಿದರು.

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಕಾವಲುಗಾರನಾಗಿ ಸೇವೆ: ಎಚ್‌.ಡಿ.ಕುಮಾರಸ್ವಾಮಿ

ಯುವಕರು, ಯುವತಿಯರಿಗೆ ಸ್ವಯಂ ಉದ್ಯೋಗ, ಮಹಿಳಾ ಸ್ವಸಹಾಯ ಸಂಘಗಳ ಸಂಪೂರ್ಣ ಸಾಲಮನ್ನಾ ಯೋಜನೆಗಳನ್ನು ಜಾರಿ ಮಾಡಿಯೇ ತೀರುತ್ತೇನೆ. ಇದಕ್ಕೆ ಸುಮಾರು .2.5 ಲಕ್ಷ ಕೋಟಿ ಬಜೆಟ್‌ ಅಗತ್ಯವಿದೆ. ಅದನ್ನು ಕ್ರೋಢೀಕರಿಸುವುದೂ ಗೊತ್ತಿದೆ ಎಂದರು. ಈ ಎಲ್ಲ ಯೋಜನೆಗಳನ್ನು ಜಾರಿ ಮಾಡಲು ಜೆಡಿಎಸ್‌ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕಾಗುತ್ತದೆ. ಆದರೆ ಇದೆಲ್ಲವನ್ನೂ ಬಿಜೆಪಿ, ಕಾಂಗ್ರೆಸ್‌ ಸರ್ಕಾರದ ಜತೆ ಮಾಡುವುದು ಅಸಾಧ್ಯ. ಅದಕ್ಕಾಗಿ ಇದೊಂದು ಬಾರಿ ನನಗೆ ಸಂಪೂರ್ಣ ಅಧಿಕಾರ ನೀಡಿ ಎಂದು ಮನವಿ ಮಾಡಿದರು. ಹಾಗೊಂದು ವೇಳೆ ಸಂಪೂರ್ಣ ಅಧಿಕಾರಕ್ಕೆ ಬಂದರೂ ಭರವಸೆ ಈಡೇರಿಸದಿದ್ದರೆ ಜೆಡಿಎಸ್‌ಅನ್ನೇ ವಿಸರ್ಜನೆ ಮಾಡುತ್ತೇನೆ ಎಂದು ಘೋಷಿಸಿದರು.

ಕೊಪ್ಪಳದಲ್ಲಿ ಅದ್ಧೂರಿ ಚಾಲನೆ: ಕೊಪ್ಪಳದಲ್ಲಿ ಪಂಚರತ್ನ ಯಾತ್ರೆಗೆ ಸೋಮವಾರ ಚಾಲನೆ ನೀಡಲಾಗಿದ್ದು, ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಸಂಸದ ಸಂಗಣ್ಣ ಕರಡಿ, ಮಾಜಿ ಶಾಸಕ ಕೆ.ಶರಣಪ್ಪ ಜತೆಗಿದ್ದಾಗ ಈ ಭಾಗದಲ್ಲಿ ಜೆಡಿಎಸ್‌ ಪ್ರಬಲವಾಗಿತ್ತು. ಅದಾದ ನಂತರ ಇಲ್ಲಿ ಪಕ್ಷಕ್ಕೆ ಅಷ್ಟಾಗಿ ಬಲ ಇರಲಿಲ್ಲ. ಆದರೆ ಇದೀಗ ಜನ ಸೇರಿರುವುದನ್ನು ನೋಡಿದ ಮೇಲೆ ಈ ಭಾಗದಲ್ಲಿ ನಮ್ಮ ಶಕ್ತಿ ಇದೆ ಎನ್ನುವ ಆಶಾಭಾವ ಮೂಡಿದೆ ಎಂದು ಕುಮಾರಸ್ವಾಮಿ ಹೇಳಿದರು. ವಿಧಾನಸಭಾ ಕ್ಷೇತ್ರದ ತಾವರಗೇರಾ ಗ್ರಾಮದಲ್ಲಿ ಅಭಿಮಾನಿಗಳು ಜೆಸಿಬಿಯಲ್ಲಿ ನಿಂತು ಕುಮಾರಸ್ವಾಮಿ ಅವರಿಗೆ ಹೂವು ಮಳೆ ಸುರಿಸಿದರು.

ರಾಯಚೂರಿನಲ್ಲಿ ನಡೆದ ಜೆಡಿಎಸ್‌ ಪಂಚರತ್ನ ಯಾತ್ರೆಗೆ ಸಿಂಧನೂರಿನಲ್ಲಿ ಅದ್ಧೂರಿ ತೆರೆ!

ಎಚ್‌ಡಿಕೆಗೆ 5000, ಎಳನೀರು ನೀಡಿದ ಮಹಿಳೆ: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮಹಿಳೆಯೊಬ್ಬರು 5 ಸಾವಿರ ನಗದು ಮತ್ತು ಎಳನೀರು ನೀಡಿ ಅಭಿಮಾನ ಮೆರೆದ ಘಟನೆ ತಾಲೂಕಿನ ಗುಮಗೇರಿ ಗ್ರಾಮದಲ್ಲಿ ಸೋಮವಾರ ನಡೆಯಿತು. ಪಂಚರತ್ನ ಯಾತ್ರೆಯ ಮೂಲಕ ತಾವರಗೇರಾದಿಂದ ಕುಷ್ಟಗಿಗೆ ತೆರಳುವಾಗ ಕುಮಾರಸ್ವಾಮಿ ಅವರಿಗೆ ಗುಮಗೇರಿ ಗ್ರಾಮದ ಸುಜಾತಾ ಎಂಬವರು .5 ಸಾವಿರ ನಗದು ಹಾಗೂ ಎಳನೀರನ್ನು ನೀಡಿದರು. ಸುಜಾತಾ ಅವರು ಬಿಎಸ್ಪಿ ಮುಖಂಡ ಶಿವಪುತ್ರ ಗುಮಗೇರಿ ಅವರ ಪುತ್ರಿ. ಕುಮಾರಸ್ವಾಮಿ ಬಡವರ ಪರ ಕೆಲಸ ಮಾಡುತ್ತಿದ್ದಾರೆ ಎಂದು ಅಭಿಮಾನದಿಂದ ಹಣ ನೀಡಿರುವುದಾಗಿ ಸುಜಾತಾ ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ