ಸಂಕ್ರಾಂತಿ ದಿನವೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ, ಪಂಚರತ್ನ ಯೋಜನೆ ಘೋಷಿಸಿದ HDK

By Suvarna NewsFirst Published Sep 28, 2021, 10:41 PM IST
Highlights

* 2023 ರ ಸಾರ್ವತ್ರಿಕ ಚುನಾವಣೆಗೆ ರಣಕಹಳೆ ಊದಿದ ದಳಪತಿಗಳು
*JDSನಿಂದ 'ಪಂಚರತ್ನ' ಯೋಜನೆ ಘೋಷಣೆ
* ಪಂಚರತ್ನ ಯೋಜನೆ ಘೋಷಣೆ ಮಾಡಿದ ಎಚ್‌ಡಿ ಕುಮಾರಸ್ವಾಮಿ

ರಾಮನಗರ, (ಸೆ.28): 2023ರ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಈಗಾಗಲೇ ಭರ್ಜರಿ ತಯಾರಿ ನಡೆಸಿದ್ದು, 'ಪಂಚರತ್ನ' ಯೋಜನೆ ಘೋಷಣೆ

ಜನತಾ ಪರ್ವ 1.O ಹಾಗೂ ಮಿಷನ್ 123 ಗುರಿಯೊಂದಿಗೆ ಬಿಡದಿಯ ತಮ್ಮ ತೋಟದಲ್ಲಿ ಹಮ್ಮಿಕೊಂಡಿರುವ 4 ದಿನಗಳ ಕಾರ್ಯಗಾರದ 2ನೇ ದಿನದ ಕೊನೆಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಎಚ್‌ಡಿಕೆ, ಪಂಚರತ್ನ ಯೋಜನೆಗಳಾದ ವಸತಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿಗೆ ವಿಶೇಷ ಯೋಜನೆ ನೀಡುತ್ತೇವೆ. ಈ ಬಗ್ಗೆ ನನ್ನ ಪರಿಕಲ್ಪನೆಯ ಕಾರ್ಯಕ್ರಮಗಳು ಜಾರಿ ಆಗುತ್ತವೆ. ಈ ಎಲ್ಲ ಸಂಗತಿಗಳನ್ನು ಜನರಿಗೆ ಮನದಟ್ಟು ಮಾಡಲಾಗುವುದು ಎಂದು ತಿಳಿಸಿದರು.

2023ರ ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸುತ್ತೇವೆ: ಸಿದ್ದರಾಮಯ್ಯಗೆ ಎಚ್‌ಡಿಕೆ ಪರೋಕ್ಷ ಚಾಲೆಂಜ್

ಅಲ್ಲದೆ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತರು, ಸಮಸ್ಯೆ ಪರಿಹಾರ ನೀಡುವ ಕೆಲಸ ಮಾದುತ್ತೇವೆ. ವಿಧವಾ ವೇತನಾ, ಹಿರಿಯ ನಾಗರೀಕರು, ಯುವಕ ಸಮಸ್ಯೆಗೆ ಬೇಕಾದ ಹಲವು ಯೋಜನೆ ಪ್ರಾರಂಭಿಸುತ್ತೇವೆ. ಮುಂದಿನ 17 ತಿಂಗಳು ಈ ಕಾರ್ಯಕ್ರಮಗಳನ್ನ ಜನರಿಗೆ ತಿಳಿಸುವ ಕೆಲಸ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಏನಿದು ಪಂಚರತ್ನ ಯೋಜನೆ?
1.ವಸತಿ ಇಲ್ಲದ ಪ್ರತಿ ಕುಟುಂಬಕ್ಕೆ ಸರ್ಕಾರದಿಂದ ಉಚಿತವಾಗಿ ವಸತಿ ನೀಡುವುದು ವಸತಿ ಆಸರೆ

2.ಉತ್ತಮ ಗುಣಮಟ್ಟದ ಹಾಗೂ ವ್ಯವಸ್ಥಿತ ಶಿಕ್ಷಣವನ್ನು ಉಚಿತವಾಗಿ ನೀಡುವ ಯೋಜನೆ ಶಿಕ್ಷಣವೇ ಆಧುನಿಕ ಶಕ್ತಿ

3.ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 24×7 ಕಾರ್ಯ ನಿರ್ವಹಿಸುವ ಸುಸಜ್ಜಿತ ಹೈಟೆಕ್ ಆಸ್ಪತ್ರೆ ನಿರ್ಮಾಣ ಆರೋಗ್ಯ ಸಂಪತ್ತು

4.ಆಧುನಿಕ ತಂತ್ರಜ್ಞಾನದ ಕೃಷಿ ಪದ್ದತಿ ಅಳವಡಿಕೆ, ಸರಿಯಾದ ಬೆಳೆ ಶೇಖರಣಾ ವ್ಯವಸ್ಥೆ ಹಾಗೂ ಲಾಭದಾಯಕವಾದ ಮಾರುಕಟ್ಟೆ ವ್ಯವಸ್ಥೆ ರೈತ ಚೈತನ್ಯ

5.ಯುವ ಜನತೆ ಹಾಗೂ ಮಹಿಳೆಯರಿಗೆ ಉದ್ಯೋಗ ಪಡೆಯಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ಯುವ ನವ ಮಾರ್ಗ ಹಾಗೂ ಮಹಿಳಾ ಸಬಲೀಕರಣ

 ಸಂಕ್ರಾಂತಿ ದಿನವೇ ಅಭ್ಯರ್ಥಿಗಳ ಮೊದಲ ಪಟ್ಟಿ
ಜನವರಿ ತಿಂಗಳ ಸಂಕ್ರಾಂತಿ ದಿನವೇ 2023ರ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಇಂದಿನ ಕಾರ್ಯಾಗಾರದಲ್ಲಿ ಮುಂದಿನ ಅಭ್ಯರ್ಥಿಗಳಿಗೆ 30 ಅಂಶಗಳ ಅಜೆಂಡಾ ನೀಡಿದ್ದೇವೆ. ಆ ಅಜೆಂಡಾ ಪ್ರಕಾರ ಅವರು ಕೆಲಸ ಮಾಡಿ ತೋರಿಸಬೇಕು. ಅವರೆಲ್ಲರೂ 3 ತಿಂಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನ ಮಾಡಬೇಕು‌. ಯಶಸ್ವಿಯಾಗಿ ಅನುಷ್ಠಾನ ಮಾಡುವ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲಾಗುವುದು ಎಂದರು.

click me!