ಹಿಂದಿ ಹೇರಿಕೆ ವಿರುದ್ಧ ಗುಡುಗಿದ ಎಚ್‌ಡಿಕೆ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ

By Suvarna News  |  First Published Sep 13, 2021, 8:29 PM IST

* ಹಿಂದಿ ಹೇರಿಕೆ ವಿರುದ್ಧ ಗುಡುಗಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ
* ಕೇಂದ್ರ ಸರ್ಕಾರಕ್ಕೆ  ಕುಮಾರಸ್ವಾಮಿ ಎಚ್ಚರಿಕೆ
* ಅನ್ಯ ಭಾಷೆಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದ ಎಂದ ಎಚ್‌ಡಿಕೆ


ಬೆಂಗಳೂರು, (ಸೆ.13): ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶಗಳನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಟ್ವಿಟರ್ ಅಭಿಯಾನ ನಡೆಸಲು ಮುಂದಾಗಿದೆ.

ಇನ್ನು ಈ ವಿಚಾರವಾಗಿ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು  ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Tap to resize

Latest Videos

ಸೆ.14ಕ್ಕೆ ಕರವೇ ಧರಣಿ : ಕೇಂದ್ರ ಸರ್ಕಾರದ ಹಿಂದಿ ಹೇರಿಕೆಗೆ ವಿರೋಧ

 ಸರಣಿ ಟ್ವೀಟ್ ಗಳ ಮೂಲಕ ಹಿಂದಿ ಹೇರಿಕೆ ವಿರುದ್ಧ ಆಕ್ರೋಶ ಹೊರಹಾಕಿರುವ ಎಚ್‌ಡಿಕೆ , ಭಾರತ ಒಕ್ಕೂಟ ರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ ? ಎಂದು ಪ್ರಶ್ನಿಸಿದ್ದಾರೆ.

ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪುವುದಿಲ್ಲ. ಹಿಂದಿ ದಿವಸ ಆಚರಣೆಯನ್ನೂ ಸಹಿಸುವುದಿಲ್ಲ.‌ ಒಕ್ಕೂಟದ ಎಲ್ಲಾ ಭಾಷೆಗಳಂತೆ ಹಿಂದಿಯೂ ಒಂದು ಭಾಷೆಯಷ್ಟೇ. ಕೇಂದ್ರ ಸರಕಾರ ಹಿಂದಿಗೆ ʼಇಂದ್ರ ವೈಭೋಗʼ ನೀಡಿ ಅನ್ಯ ಭಾಷೆಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದು ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ. (3/4)

— H D Kumaraswamy (@hd_kumaraswamy)

ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃ ಸ್ವರೂಪಿಣಿ ಎಂದಿದ್ದಾರೆ.

ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ ? (1/4)

— H D Kumaraswamy (@hd_kumaraswamy)

ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

click me!