2019ರ ಚುನಾವಣೆಯ ಬದ್ಧ ವೈರಿ, 2024ರಲ್ಲಿ ಮೈತ್ರಿ ಸ್ನೇಹಿತರು; ಸುಮಲತಾ ಭೇಟಿಯಾದ ಕುಮಾರಸ್ವಾಮಿ

By Sathish Kumar KH  |  First Published Mar 31, 2024, 4:57 PM IST

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 2019ರಲ್ಲಿ ಬದ್ಧ ವೈರಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರನ್ನು 2024ರ ಚುನಾವಣೆಗೆ ಬೆಂಬಲಿಸುವಂತೆ ಮಾಜಿ ಸಿಎಂ ಕುಮಾರಸ್ವಾಮಿ ಚರ್ಚೆ ಮಾಡಿದ್ದಾರೆ.


ಬೆಂಗಳೂರು (ಮಾ.31): ಕಳೆದ ಲೋಕಸಭಾ ಚುನಾವಣೆಯಲ್ಲಿ ಬದ್ಧ ವೈರಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭೇಟಿಯಾಗಿ ಈ ಬಾರಿ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆಯ ಮೂಲಕ ನೀವು ನಮಗೆ ಬೆಂಬಲಿಸಬೇಕು ಎಂದು ಕೇಳಲು ಸುಮಲತಾ ಮನೆಗೆ ತೆರಳಿದ್ದಾರೆ.

ರಾಜಕಾರಣದಲ್ಲಿ ಯಾರೂಬ್ಬರೂ ಶಾಶ್ವತ ವೈರಿಗಳಲ್ಲ, ಯಾರೂ ಶಾಶ್ವತ ಸ್ನೇಹಿತರಲ್ಲ ಎಂಬ ಮಾತು ಇಲ್ಲಿ ನಿಜವಾಗುತ್ತಿದೆ. ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸಿದ್ದರು. ಈ ವೇಳೆ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಸುಮಲತಾ ಜೆಡಿಎಸ್‌ನ ಬದ್ಧ ವೈರಿಯಾಗಿದ್ದು, ಕೊನೆಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದರು. ಆದರೆ, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು,  ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿಸಿದ ಸುಮಲತಾ ಅವರನ್ನು ಮಂಡ್ಯ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬೆಂಬಲಿಸುವಂತೆ ಮನವಿ ಮಾಡಲು ಮುಂದಾಗಿದ್ದಾರೆ.

Tap to resize

Latest Videos

ಹೆಗ್ಡೆಗೆ ಟಿಕೆಟ್‌ ಖಾತರಿಯಾಗುತ್ತಿದ್ದಂತೆ ಶೋಭಾ ಕರಂದ್ಲಾಜೆ ಕ್ಷೇತ್ರ ಬಿಟ್ಟು ಪಲಾಯನ: ನಟರಾಜ್

ಮಂಡ್ಯದ ಹಾಲಿ ಸಂಸದೆ ಆಗಿದ್ದರೂ, 2024ರ ಚುನಾವಣೆಯಲ್ಲಿ ಯಾವುದಾದರೂ ಒಂದು ರಾಷ್ಟ್ರೀಯ ಪಕ್ಷದಿಂದ ಟಿಕೆಟ್‌ ಪಡೆದು ಸ್ಪರ್ಧಿಸಬೇಕು ಎಂದು ಬಿಜೆಪಿಯನ್ನು ಬೆಂಬಲಿಸಿದ್ದರು. ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಏರ್ಪಟ್ಟಿದೆ. ಇದರಿಂದಾಗಿ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಣಕ್ಕಿಳಿಯುತ್ತಿದ್ದಾರೆ. ಈಗ ಕಳೆದ ಲೋಕಸಭಾ ಚುನಾವಣೆಯ ವೈರಿ ಆಗಿದ್ದ ಸುಮಲತಾ ಅವರನ್ನು ಈ ಬಾರಿಯ ಚುನಾವಣೆಯಲ್ಲಿ ಬೆಂಬಲಿಸಿ ಎಂದು ಕೇಳುವ ಅನಿವಾರ್ಯತೆ ಎದುರಾಗಿದೆ.

ತರಾತುರಿಯಲ್ಲಿ ಸುಮಲತಾ ಮನೆಗೆ ಹೋಗಿದ್ದೇಕೆ?
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕಳೆದೊಂದು ವಾರದಲ್ಲಿ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರೂ ತರಾತುರಿಯಲ್ಲಿ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡಲು ತೆರಳಿರುವುದಕ್ಕೂ ಪ್ರಮುಖ ಕಾರಣವಿದೆ. ಅದೇನೆಂದರೆ, ಸಂಸದೆ ಸುಮಲತಾ ಅವರ ಮಂಡ್ಯದ ಅಭಿಮಾನಿಗಳು ಬೆಂಗಳೂರಿಗೆ ಬಂದು ನೀವು ಲೋಕಸಭೆಗೆ ಕಳೆದ ಬಾರಿಯಂತೆ ಸ್ವತಂತ್ರವಾಗಿ ಸ್ಪರ್ಧೆ ಮಾಡಬೇಕು ಎಂದು ಮನವಿ ಮಾಡಿದ್ದರು. ಆದರೆ, ನಾನು ಏ.3ರೊಳಗೆ ತನ್ನ ತೀರ್ಮಾನವನ್ನು ಮಂಡ್ಯಕ್ಕೆ ಬಂದು ತಿಳಿಸುತ್ತೇನೆ ಎಂದು ಹೇಳಿದ್ದರು. ಹೀಗಾಗಿ, ಈ ಬಾರಿಯೂ ಸುಮಲತಾ ತಮ್ಮ ಎದುರಾಳಿ ಆಗಬಾರದು ಎಂಬ ನಿಟ್ಟಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸುಮಲತಾ ಅವರ ಮನೆಗೆ ಬಂದು ಭೇಟಿ ಮಾಡಿದ್ದಾರೆ.

ಜೆಡಿಎಸ್‌-ಬಿಜೆಪಿ ಕಾರ್ಯಕರ್ತರಲ್ಲಿ ಅಂಡರ್‌ಕರೆಂಟ್‌ ಅಲೆ ಎದ್ದಿದೆ: ನಿಖಿಲ್ ಕುಮಾರಸ್ವಾಮಿ

ಪುತ್ರ ಅಭಿಷೇಕ್ ಅಂಬರೀಶ್ ಜೊತೆಗೆ ಬಂದ ಸುಮಲತಾ: ಹೆಚ್.ಡಿ. ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ಅವರ ಮನೆಗೆ ತೆರಳುತ್ತಿದ್ದಂತೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಸ್ವಾಗತ ಮಾಡುತ್ತಾರೆ. ನಂತರ, ಮನೆಯೊಳಗೆ ಹೋದ ನಂತರ ಸಂಸದೆ ಸುಮಲತಾ ಅವರು ಹೂಗುಚ್ಛ ನೀಡಿ ಕುಮಾರಸ್ವಾಮಿ ಅವರನ್ನು ಸ್ವಾಗತಿಸುತ್ತಾರೆ. ಈ ವೇಳೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರೂ ಕೂಡ ಹಾಜರಿದ್ದರು. ಇದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಭಿಷೇಕ್‌ ಅವರನ್ನು ಕಣಕ್ಕಿಳಿಸುವ ಸೂಚನೆ ಕೊಟ್ಟರಾ ಎಂಬಂತೆ ಕಂಡುಬರುತ್ತಿದೆ. 

click me!