'ಅತ್ಮನಿರ್ಭರ ಭಾರತ' ಹೆಸರಲ್ಲಿ ಆತ್ಮವಂಚನೆಯ ಬಜೆಟ್‌'

By Suvarna News  |  First Published Feb 1, 2021, 6:05 PM IST

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಮದು (ಸೋಮವಾರ) 2021ನೇ ಸಾಲಿನ ಬಜೆಟ್ ಮಂಡಿಸಿದರು. ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ


ಬೆಂಗಳೂರು, (ಫೆ.01): ಎಲ್ಲವನ್ನೂ ಏರಿಸಿರುವ ಕೇಂದ್ರ ತನ್ನದು 'ಅತ್ಮನಿರ್ಭರ ಭಾರತ' ರೂಪಿಸುವ ಬಜೆಟ್‌ ಎಂದು ಆತ್ಮವಂಚನೆಯ ಮಾತುಗಳನ್ನಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. 

ಕೇಂದ್ರ ಬಜೆಟ್ 2021 ಬಗ್ಗೆ ಟ್ವೀಟ್ ಮಾಡಿರುವ ಅವರು, ಇಷ್ಟು ಏರಿಕೆಗಳನ್ನು ಕಂಡ ಭಾರತವು ಆತ್ಮನಿರ್ಭರತೆಯನ್ನು ಸಾಧಿಸಲು ಸಾಧ್ಯವೇ? ಡೀಸೆಲ್‌, ಪೆಟ್ರೋಲ್‌ ಈಗಾಗಲೇ ಏರುತ್ತಿದೆ. ಅದರ ಜೊತೆಗೆ ಈಗಿನ ಭಾರಿ ಏರಿಕೆ ಪರಿಣಾಮ ಏನಾಗಲಿದೆ ಎಂದು ಕೇಂದ್ರ ಯೋಚಿಸಿದಂತೆ ಇಲ್ಲ ಎಂದು ಕಿಡಿಕಾರಿದರು.

Latest Videos

undefined

ಕೇಂದ್ರ ಬಜೆಟ್ 2021: ಸಿದ್ದರಾಮಯ್ಯನವರ ಫಸ್ಟ್ ರಿಯಾಕ್ಷನ್..! 

ಏರಿಕೆಗಳನ್ನು ಸಮರ್ಥಿಸಿಕೊಳ್ಳುತ್ತಾ ಕೃಷಿ ಸೆಸ್‌ ಅನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ. ಒಂದೆಡೆ ರೈತರನ್ನು ದೇಶದ್ರೋಹಿಗಳೆಂದು ಬಿಂಬಿಸುವ ಸರ್ಕಾರ ತನ್ನ ರಕ್ಷಣೆಗೆ ಮಾತ್ರ ಕೃಷಿ ಕ್ಷೇತ್ರದ ನೆರವು ಪಡೆದಂತಿದೆ. ಕೃಷಿ ಸೆಸ್‌ನಿಂದ ಸಂಗ್ರಹವಾಗುವ ಹಣವನ್ನು ಕೃಷಿ ರಂಗದ ಅಭಿವೃದ್ದಿಗೆ ಬಳಸಲಾಗುತ್ತದೆಯೇ ಎಂಬುದರ ವಿವರಣೆಯೇ ಬಜೆಟ್‌ನಲ್ಲಿ ಇಲ್ಲ ಎಂದು ಆರೋಪಿಸಿದ್ದಾರೆ.

2020-21ರಲ್ಲಿ ಶೆ. 9.5 ಮತ್ತು 2022ರಲ್ಲಿ ಶೇ.6.8 ರಷ್ಟು ವಿತ್ತೀಯ ಕೊರತೆ ಇರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇದು ಒಂದು ಅರ್ಥವ್ಯವಸ್ಥೆಯಲ್ಲಿನ ಭೀಕರ ಪರಿಸ್ಥಿತಿಯೇ ಸರಿ. ಈ ಕೊರತೆಯನ್ನು ಸರ್ಕಾರ ಎಲ್ಲಿಂದ ತುಂಬಿಸಿಕೊಳ್ಳುತ್ತದೆ? ಇದರ ಪರಿಹಾರಕ್ಕಾಗಿ ನೋಟು ಪ್ರಿಂಟು ಮಾಡಲು ಆಗುವುದಿಲ್ಲ. ಕಡೆಗೆ ಅದು ಬ್ಯಾಂಕ್‌ಗಳಿಗೆ ಕೈ ಹಾಕುತ್ತದೆ ಎಂದು ಹೇಳಿದ್ದಾರೆ.

'ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಜೀರೋ'... 

ಭಾರಿ ಪ್ರಮಾಣದ ವಿತ್ತೀಯ ಕೊರತೆಯನ್ನು ನೀಗಿಸಿಕೊಳ್ಳಲು ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ಬ್ಯಾಂಕ್‌ಗಳಲ್ಲಿನ ಸಂಪನ್ಮೂಲವನ್ನು ಅಕ್ಷರಶಃ ದೋಚಲು ಆರಂಭಿಸುತ್ತದೆ. ಇದು ಮತ್ತೊಂದು ಆರ್ಥಿಕ ವಿಷಮ ಪರಿಸ್ಥಿತಿಗೆ ಕಾರಣವಾಗುತ್ತದೆ. ಅದರ ಪರಿಣಾಮ ಸಾಮಾನ್ಯ ಜನರ ಮೇಲೆ ಆಗುತ್ತದೆ. ಜನರ ಶೋಷಣೆಗೆ ಇದು ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ.

15ನೇ ಹಣಕಾಸು ಆಯೋಗದ ಪ್ರಕಾರ ರಾಜ್ಯಗಳು ಶೇ. 41ರಷ್ಟು ತೆರಿಗೆ ಪಾಲು ಹೊಂದಿರುವುದಾಗಿಯೂ, ಅದನ್ನು ಕೇಂದ್ರ ಸರ್ಕಾರ ಒಪ್ಪಿರುವುದಾಗಿಯೂ ವಿತ್ತ ಮಂತ್ರಿ ಹೇಳಿದ್ದಾರೆ. ಆದರೆ, ರಾಜ್ಯಗಳ ಪಾಲನ್ನು ಕೇಂದ್ರ ಸರ್ಕಾರ ಈ ವರೆಗೆ ಸರಿಯಾಗಿ ನೀಡಿಲ್ಲ. ಪಾಲನ್ನು ತೋರಿಸುವುದು, ಪಾಲು ನೀಡದೇ ವಂಚಿಸುವುದು ಕೇಂದ್ರ ಪಾಲಿಸಿಕೊಂಡು ಬಂದ ಪರಿಪಾಠವಾಗಿದೆ ಎಂದು ಎಂದರು.

click me!