Karnataka Politics: ಪ್ರೀತಿಯಲ್ಲಿ ಬಾಂಧವ್ಯ ಮುಖ್ಯ, ತೊಂದರೆ ಕೊಡಬಾರದು: ಎಚ್‌.ಡಿ. ಕುಮಾರಸ್ವಾಮಿ

By Govindaraj S  |  First Published Apr 13, 2022, 2:59 PM IST

ನನಗೆ ಮಾತಲ್ಲ, ಕೆಲಸ ಮುಖ್ಯ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.


ಮೈಸೂರು (ಏ.13): ನನಗೆ ಮಾತಲ್ಲ, ಕೆಲಸ ಮುಖ್ಯ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರನ್ನು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಕಟುವಾಗಿ ಟೀಕಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ (Chamundi Hill) ಚಾಮುಂಡೇಶ್ವರಿ ದೇವಿಗೆ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಯಾವ ಕೆಲಸ ಮಾತನಾಡುತ್ತಿದೆ? ರಾಯಚೂರಿನಲ್ಲಿ ತಲವಾರ್‌ ಹಂಚಿದ್ದಾರೆ. ಯಾವ ಕಾರಣಕ್ಕೆ ಹಂಚಲಾಗಿದೆ. ಯಾರನ್ನು ಬಂಧಿಸಿದ್ದೀರಾ? ಮೌನಿ ಬಸವರಾಜ ಬೊಮ್ಮಾಯಿ ಅವರೇ ಎಂದು ಪ್ರಶ್ನಿಸಿದರು. ಪ್ರೀತಿಯಲ್ಲಿ ಬಾಂಧವ್ಯ ಮುಖ್ಯ. ಪರಸ್ಪರ ಪ್ರೀತಿಸುವವರಿಗೆ ತೊಂದರೆ ಕೊಡಬಾರದು. ಅವರು ಯಾವ ಧರ್ಮದವರೇ ಆಗಿರಲಿ. ಅವರನ್ನು ನಿಯಂತ್ರಿಸುವ ಕೆಲಸ ಮಾಡಬಾರದು ಎಂದರು.

ತಲೆ ಒಡೆದಾಗಲೂ ಅನುಕಂಪ ಇರಲಿ: ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕುಮಾರಸ್ವಾಮಿ, ಕಲ್ಲಂಗಡಿ ಒಡೆದಾಗ ತೋರಿದ ಅನುಕಂಪ, ತಲೆ ಒಡೆದಾಗಲೂ ತೋರಿಸಿ. ನಿಮ್ಮ ಮಾತಿನ ಅರ್ಥ ಏನು? ರಾಜ್ಯದಲ್ಲಿ ತಲೆ ಒಡೆಯುತ್ತಾ ಇರುತ್ತೇವೆ ಅಂತಾನಾ? ನೀವು ತಲೆ ಒಡೆಯುತ್ತಿರಿ ನಾವು ಸಾಂತ್ವನ ಹೇಳಬೇಕಾ ಅನ್ನೋದಾ ಎಂದು ಪ್ರಶ್ನಿಸಿದರು. ಹಾಸನ ಜಿಲ್ಲೆಯಲ್ಲಿ ಯಾವ ಜಾತ್ರೆಯಲ್ಲೂ ಮುಸ್ಲಿಂಮರಿಗೆ ನಿರ್ಬಂಧ ಹೇರುವುದಕ್ಕೆ ಅವಕಾಶ ಕೊಡುವುದಿಲ್ಲ. ಚೆನ್ನಕೇಶವ ಜಾತ್ರೆಯಲ್ಲಿ ಸಮಸ್ಯೆ ಆಗಿರುವುದು ಗಮನಕ್ಕೆ ಬಂದಿದೆ. ಖುದ್ದು ರೇವಣ್ಣ (HD Revanna) ಅವರಿಗೆ ಸಮಸ್ಯೆ ಬಗೆಹರಿಸುವಂತೆ ಹೇಳಿದ್ದೇನೆ. ನಿರ್ಬಂಧ ತೆರವು ಮಾಡಿಸಿ ಅವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಿಸುತ್ತೇನೆ. ಹಾಸನ ಜಿಲ್ಲೆ ಮಾತ್ರ ಅಲ್ಲ, ಎಲ್ಲಾ ಜಿಲ್ಲೆಗಳಲ್ಲೂ ನಿರ್ಬಂಧ ತೆರವಿಗೆ ನನ್ನ ಹೋರಾಟ ಇರುತ್ತದೆ ಎಂದರು.

Latest Videos

undefined

Jaladhare: ಜೆಡಿಎಸ್‌ ಜಲಧಾರೆ ಯಾತ್ರೆಗೆ ದೇವೇಗೌಡ ನಿಶಾನೆ

ಪಕ್ಷ ಬಿಡುವವರಿಗೆ ಜ್ಞಾನೋದಯವಾಗಿದೆ: ನಮ್ಮ ಪಕ್ಚ ಬಿಟ್ಟುಹೋಗುವ ಮನಸ್ಸು ಮಾಡಿದವರಿಗೆ ಈಗ ಜ್ಞಾನೋದಯವಾಗುತ್ತಿದೆ. ಜ್ಞಾನೋದಯವಾಗಿ ಅವರು ಪಕ್ಷದಲ್ಲೇ ಉಳಿದರೆ ನನಗೇನು ಸಮಸ್ಯೆ ಇಲ್ಲ. ಪಕ್ಷ ಬಿಟ್ಟವರೂ ಕೂಡಾ ಪಕ್ಷಕ್ಕೆ ಬರುವ ಮಾತಾಡುತ್ತಿದ್ದಾರೆ. ಅವರು ಬಂದರೂ ಸಂತೋಷ. ಯಾವುದೇ ಪಕ್ಷದಿಂದ ಯಾರೇ ನಮ್ಮ ಪಕ್ಷಕ್ಕೆ ಬಂದರೂ ಸ್ವಾಗತ. ಆದರೆ ಅಧಿಕಾರಕ್ಕಾಗಿ ಪಕ್ಷಕ್ಕೆ ಬಂದರೆ ಅಂತವರಿಗೆ ನಮ್ಮಲ್ಲಿ ಅವಕಾಶ ಇಲ್ಲ. ಈ ಮಾತು ಜಿ.ಟಿ. ದೇವೇಗೌಡರಿಗೂ ಕೂಡಾ ಅನ್ವಯ ಎಂದು ಅವರು ಹೇಳಿದರು. ಈ ಬಾರಿ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ಕೊಡಬೇಕು ಎಂಬುದು ನನ್ನ ಆಸೆ. 

ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಿರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ತಮ್ಮ ಮನಸ್ಸಿನ ಮಾತನ್ನು ನೇರವಾಗಿ ಹೇಳಿದ್ದಾರೆ. ಅದು ಅವರ ಬಾಯ್ತಪ್ಪಿನಿಂದ ಬಂದ ಮಾತಲ್ಲ. ಅದು ಅವರ ಮನಸ್ಸಿನ ಮಾತು ಎಂದು ವ್ಯಂಗ್ಯವಾಡಿದರು. ಈ ಬಾರಿ ಕನ್ನಡಿಗರ ಬಹುಮತದ ಸರ್ಕಾರ ಬೇಕು. ಯಾವ ಪಕ್ಷದ ಜೊತೆಯೂ ಹೊಂದಾಣಿಕೆ ಇಲ್ಲ. 30 ಅಥವಾ 40 ಸ್ಥಾನಕ್ಕಾಗಿ ಹೋರಾಟ ಅಲ್ಲ. ಪೂರ್ಣ ಪ್ರಮಾಣದ ಸರ್ಕಾರಕ್ಕೆ ಹೋರಾಟ ನಡೆಸಲಾಗುತ್ತಿದೆ. ನಮ್ಮದು ವಿಚಾರಾಧಾರಿತವಾದ ಹೋರಾಟ. ಧರ್ಮ ಧರ್ಮಗಳ ನಡುವೆ ಬೆಂಕಿ ಇಟ್ಟು ಮತ ಕೇಳುತ್ತಿಲ್ಲ. ರಾಜ್ಯದ ಅಭಿವೃದ್ದಿಗಾಗಿ ನಮ್ಮ ಹೋರಾಟ ಎಂದು ಅವರು ತಿಳಿಸಿದರು.

ಶಾಸಕರಾದ ಸಾ.ರಾ. ಮಹೇಶ್‌, ಕೆ. ಮಹದೇವ್‌, ಎಂ. ಅಶ್ವಿನ್‌ಕುಮಾರ್‌, ವಿಧಾನ ಪರಿಷತ್‌ ಸದಸ್ಯರಾದ ಬೋಜೇಗೌಡ, ಮಂಜೇಗೌಡ, ಜೆಡಿಎಸ್‌ ನಗರಾಧ್ಯಕ್ಷ ಕೆ.ಟಿ. ಚಲುವೇಗೌಡ, ಜಿಲ್ಲಾಧ್ಯಕ್ಷ ಎನ್‌. ನರಸಿಂಹಸ್ವಾಮಿ, ಮಾಜಿ ಮೇಯರ್‌ಗಳಾದ ಆರ್‌. ಲಿಂಗಪ್ಪ, ಎಂ.ಜೆ. ರವಿಕುಮಾರ್‌, ನಗರ ಪಾಲಿಕೆ ಸದಸ್ಯ ಎಸ್‌ಬಿಎಂ ಮಂಜು, ಮಾಜಿ ಸದಸ್ಯ ಕೆ.ವಿ. ಮಲ್ಲೇಶ್‌, ಜಿಪಂ ಮಾಜಿ ಸದಸ್ಯರಾದ ಸಿ.ಜೆ. ದ್ವಾರಕೀಶ್‌, ಸಾ.ರಾ. ನಂದೀಶ್‌, ಕೆ.ಆರ್‌. ಕ್ಷೇತ್ರ ಜೆಡಿಎಸ್‌ ಅಧ್ಯಕ್ಷ ಅಮ್ಮ ಸಂತೋಷ್‌, ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷ ಗಂಗಾಧರಗೌಡ ಮೊದಲಾದವರು ಇದ್ದರು.

ಪಕ್ಷ ಬಿಡಲು ಹೊರಟವರು ಉಳಿದರೆ ಸಮಸ್ಯೆ ಇಲ್ಲ: ನಮ್ಮ ಪಕ್ಷ ಬಿಟ್ಟು ಹೋಗುವ ಮನಸ್ಸು ಮಾಡಿದವರು ಈಗ ಜ್ಞಾನೋದಯವಾಗಿ ಪಕ್ಷದಲ್ಲೇ ಉಳಿದರೆ ನನಗೇನೂ ಸಮಸ್ಯೆ ಇಲ್ಲ. ಆದರೆ ಅಧಿಕಾರಕ್ಕಾಗಿ ಪಕ್ಷಕ್ಕೆ ಬಂದರೆ ಅಂತವರಿಗೆ ನಮ್ಮಲ್ಲಿ ಅವಕಾಶ ಇಲ್ಲ. ಈ ಮಾತು ಜಿ.ಟಿ. ದೇವೇಗೌಡರಿಗೂ ಕೂಡಾ ಅನ್ವಯ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಾರ್ಮಿಕ ಹೇಳಿಕೆ ನೀಡಿದ್ದಾರೆ.

ಮುಸ್ಲಿಂ ವ್ಯಾಪಾರಿಗೆ ತೊಂದರೆ ಕೊಟ್ಟವರನ್ನು ಬಂಧಿಸಿ: ಎಚ್‌.ಡಿ.ಕುಮಾರಸ್ವಾಮಿ

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷ ಬಿಟ್ಟುಹೋಗುವ ಮನಸ್ಸು ಮಾಡಿದವರಿಗೆ ಈಗ ಜ್ಞಾನೋದಯವಾಗುತ್ತಿದೆ. ಜ್ಞಾನೋದಯವಾಗಿ ಅವರು ಪಕ್ಷದಲ್ಲೇ ಉಳಿದರೆ ನನಗೇನು ಸಮಸ್ಯೆ ಇಲ್ಲ. ಪಕ್ಷ ಬಿಟ್ಟವರೂ ಪಕ್ಷಕ್ಕೆ ಬರುವ ಮಾತಾಡುತ್ತಿದ್ದಾರೆ. ಅವರು ಬಂದರೂ ಸಂತೋಷ. ಯಾವುದೇ ಪಕ್ಷದಿಂದ ಯಾರೇ ನಮ್ಮ ಪಕ್ಷಕ್ಕೆ ಬಂದರೂ ಸ್ವಾಗತ. ಆದರೆ ಅಧಿಕಾರಕ್ಕಾಗಿ ಪಕ್ಷಕ್ಕೆ ಬಂದರೆ ಅಂತವರಿಗೆ ನಮ್ಮಲ್ಲಿ ಅವಕಾಶ ಇಲ್ಲ. ಈ ಮಾತು ಜಿ.ಟಿ. ದೇವೇಗೌಡರಿಗೂ ಕೂಡಾ ಅನ್ವಯ ಎಂದು ಅವರು ಮಾರ್ಮಿಕವಾಗಿ ಹೇಳಿದರು.

click me!