JDS Pancharatna Rathayatra: ಪಂಚರತ್ನ ಜಾರಿ ಮಾಡದಿದ್ರೆ ಜೆಡಿಎಸ್‌ ವಿಸರ್ಜನೆ: ಎಚ್‌ಡಿಕೆ

By Govindaraj S  |  First Published Nov 20, 2022, 6:41 AM IST

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಪ್ರತಿ ರೈತ ಕುಟುಂಬಕ್ಕೂ ಮನೆ, ಉದ್ಯೋಗ ನೀಡಲಿದ್ದೇವೆ. ಪಂಚರತ್ನ ಕಾರ್ಯಕ್ರಮ ಜಾರಿಗೆ ತರದೇ ಹೋದರೆ ನಮ್ಮ ಪಕ್ಷವನ್ನೇ ವಿಸರ್ಜನೆ ಮಾಡಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.


ಕೋಲಾರ/ಬಂಗಾರಪೇಟೆ (ನ.20): ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಪ್ರತಿ ರೈತ ಕುಟುಂಬಕ್ಕೂ ಮನೆ, ಉದ್ಯೋಗ ನೀಡಲಿದ್ದೇವೆ. ಪಂಚರತ್ನ ಕಾರ್ಯಕ್ರಮ ಜಾರಿಗೆ ತರದೇ ಹೋದರೆ ನಮ್ಮ ಪಕ್ಷವನ್ನೇ ವಿಸರ್ಜನೆ ಮಾಡಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಪಂಚರತ್ನ ರಥಯಾತ್ರೆಯ ಭಾಗವಾಗಿ ಬಂಗಾರಪೇಟೆಯ ವಿವಿಧೆಡೆ ಸಂಚರಿಸಿದ ಅವರು ಶನಿವಾರ ಮಾತನಾಡಿ, ಪಂಚರತ್ನ ರಥಯಾತ್ರೆಗೆ ಜನರಿಂದ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಇದು ಮುಂದಿನ ಹೋರಾಟಕ್ಕೆ ಶಕ್ತಿ ತುಂಬಿದೆ. ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಕೆಲಸವಾಗಬೇಕು. ರೈತರು ಸಮಸ್ಯೆಯಲ್ಲಿದ್ದಾರೆ. ಇದೆಲ್ಲವನ್ನು ಪಂಚರತ್ನ ಯೋಜನೆಯಲ್ಲಿ ವಿವರಿಸಲಾಗಿದೆ. ನಾವು ಅಧಿಕಾರಕ್ಕೆ ಬಂದರೆ ಐದು ವರ್ಷದಲ್ಲಿ ಪಂಚರತ್ನ ಕಾರ್ಯಕ್ರಮ ಜಾರಿ ಮಾಡಲಿದ್ದೇವೆ ಎಂದರು.

ಬಿಜೆಪಿ ವಿರುದ್ಧ ಆಕ್ರೋಶ: ಬೆಂಗಳೂರಿನಲ್ಲಿ ಮತದಾರರ ಮಾಹಿತಿ ಸೋರಿಕೆ ಆರೋಪಕ್ಕೆ ಸಂಬಂಧಿಸಿ ಇದೇ ವೇಳೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪ್ರಾಬಲ್ಯ ಇರುವ ಬೂತ್‌ಗಳಲ್ಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಬಿಜೆಪಿಯವರು ರದ್ದು ಮಾಡಿಸಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಕುತಂತ್ರದ ರಾಜಕಾರಣ, ಅಧಿಕಾರದ ದುರುಪಯೋಗ ಮಾಡುತ್ತಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುತ್ತಿದೆ. ಈ ಕುರಿತು ಬಿಜೆಪಿಯವರು ನಡೆಸುವ ತನಿಖೆ ಮೇಲೆ ನಂಬಿಕೆ ಇಲ್ಲ. ಚಿಲುಮೆ ಸಂಸ್ಥೆ ಮೇಲೆ ದಾಳಿ ಮಾಡಿದಾಗ, ಸಚಿವರೊಬ್ಬರಿಗೆ ಸೇರಿದ ಚೆಕ್‌ಗಳು ಸಿಕ್ಕಿವೆ, ಹೀಗಿರುವಾಗ ಈ ಮಂತ್ರಿಯನ್ನಿಟ್ಟುಕೊಂಡು ಇವರು ಯಾವ ತನಿಖೆ ಮಾಡುತ್ತಾರೆ ಎಂದು ಪ್ರಶ್ನಿಸಿದರು.

Tap to resize

Latest Videos

JDS Pancharatna Rathayatra: ಮೈತ್ರಿ ಸರ್ಕಾರ ಬೀಳಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ

ಯಾತ್ರೆಗೆ ಅಭೂತಪೂರ್ವ ಬೆಂಬಲ: ಪಂಚರತ್ನ ರಥಯಾತ್ರೆಗೆ ಜನರಿಂದ ಅಭೂತಪೂರ್ವ ಬೆಂಬಲ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. ಮುಳಬಾಗಿಲು ತಾಲೂಕು ಊರುಕುಂಟೆ ಮಿಟ್ಟೂರಲ್ಲಿ ಮಾತನಾಡಿ, ಇದು ಮುಂದಿನ ಹೋರಾಟಕ್ಕೆ ಶಕ್ತಿ ತುಂಬಿದೆ. ಶನಿವಾರ 35 ಹಳ್ಳಿಗಳಿಗೆ ಭೇಟಿ ಕೊಟ್ಟಿದ್ದು, ಶಿಕ್ಷಣ, ಆರೋಗ್ಯ, ಕೃಷಿಯಲ್ಲಿ ಇರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಕೆಲಸವಾಗಬೇಕು. ರೈತರು ಸಮಸ್ಯೆಯಲ್ಲಿದ್ದಾರೆ. ಇದೆಲ್ಲವನ್ನು ಪಂಚರತ್ನಯೋಜನೆಯಲ್ಲಿ ವಿವರಿಸಲಾಗಿದೆ. ನಾವು ಅಧಿಕಾರಕ್ಕೆ ಬಂದು 5 ವರ್ಷದಲ್ಲಿ ಪಂಚರತ್ನ ಕಾರ್ಯಕ್ರಮ ಜಾರಿ ಮಾಡದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದರು.

ಒಳ್ಳೇ ಟೈಂ ಅಲ್ಲವೆಂದು ನಿನ್ನೆ ಜೆಡಿಎಸ್‌ ಪಟ್ಟಿ ಬಿಡುಗಡೆಗೆ ರೇವಣ್ಣ ಬ್ರೇಕ್‌: ಎಚ್‌ಡಿಕೆ

ಮಾಗೇರಿ ಗ್ರಾಮದಲ್ಲಿ ವಾಸ್ತವ್ಯ: ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಳಬಾಗಿಲಿನಲ್ಲಿ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಶನಿವಾರ ಬಂಗಾರಪೇಟೆ ತಾಲೂಕಿನ ವಿವಿಧೆಡೆ ರಥಯಾತ್ರೆ ಮೂಲಕ ಸಂಚರಿಸಿದರು. ಸುಮಾರು 35ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕುಮಾರಸ್ವಾಮಿ ನೇತೃತ್ವದ ಯಾತ್ರೆ ಸಂಚರಿಸಿ ಜನರ ಜತೆಗೆ ಸಮಾಲೋಚನೆ ನಡೆಸಿತು. ಈ ವೇಳೆ ಹಲವೆಡೆ ಕುಮಾರಸ್ವಾಮಿ ಅವರಿಗೆ ಗ್ರಾಮಸ್ಥರಿಂದ, ಪಕ್ಷದಿಂದ ಅದ್ಧೂರಿ ಸ್ವಾಗತ ನೀಡಲಾಯಿತು. ಈ ವೇಳೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮತ್ತಿತರರು ಇದ್ದರು. ಮೊದಲ ದಿನ ಮುಳಬಾಗಿಲಿನ ಮಿಟ್ಟೂರು ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಕುಮಾರಸ್ವಾಮಿ ಎರಡನೇ ದಿನ ಬಂಗಾರಪೇಟೆ ತಾಲೂಕಿನ ಮಾಗೇರಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದರು.

click me!