ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮಹತ್ವದ ಘೋಷಣೆ...!

By Suvarna News  |  First Published Dec 14, 2020, 3:07 PM IST

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ತಮ್ಮ ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ಮಹತ್ವದ ಕರೆಯೊಂದನ್ನು ಕೊಟ್ಟಿದ್ದಾರೆ.


ಬೆಂಗಳೂರು, (ಡಿ.16): ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಜನ್ಮದಿನ ಇದೇ ಡಿ.16ರಂದು ಇದ್ದು, ಅಂದು ಆಚರಿಸಿಕೊಳ್ಳುವುದಿಲ್ಲ ಎಂದಿದ್ದಾರೆ.

 ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಡಿ.16ರಂದು ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Tap to resize

Latest Videos

BJP ಜೊತೆ JDS ವಿಲೀನ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಕುಮಾರಸ್ವಾಮಿ

ಈ ಕುರಿತಂತೆ ಸಾಮಾಜಿಕ ಜಾಲತಾಣಗಳ ಮೂಲ ತಿಳಿಸಿರುವ ಕುಮಾರಸ್ವಾಮಿ,  ಆ ದಿನ (ಡಿಸೆಂಬರ್ 16) ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು ಎಂದು ಬರೆದುಕೊಡಿದ್ದಾರೆ.

 ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ‌ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ ಎಂದು ಹೇಳಿದ್ದಾರೆ.

ಡಿ.16 ನನ್ನ‌ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ.
ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು.
1/2

— H D Kumaraswamy (@hd_kumaraswamy)
click me!