ಜೆಡಿಎಸ್ ಶಾಸಕರಿಗೆ ಅನುದಾನ ತಾರತಮ್ಯ: ಎಚ್‌.ಡಿ. ರೇವಣ್ಣ ಕಿಡಿ

Kannadaprabha News   | Asianet News
Published : Sep 22, 2021, 02:33 PM IST
ಜೆಡಿಎಸ್ ಶಾಸಕರಿಗೆ ಅನುದಾನ ತಾರತಮ್ಯ: ಎಚ್‌.ಡಿ. ರೇವಣ್ಣ ಕಿಡಿ

ಸಾರಾಂಶ

*   30 ಜಿಲ್ಲೆಗಳಿಗೆ 1277 ಕೋಟಿ ರು. ಅನುದಾನ ನೀಡಿದ್ದ ಮಾಜಿ ಸಿಎಂ ಯಡಿಯೂರಪ್ಪ  *   ಜೆಡಿಎಸ್ ಶಾಸಕರಿಗೆ ಬಿಡಿಗಾಸು ಅನುದಾನ ಕೊಡದ ಬಿಎಸ್‌ವೈ *   ಹಿಂದಿನ ಸರ್ಕಾರಗಳು ನೀಡಿರುವ ಅನುದಾನಕ್ಕೆ ತಡೆಯಾಜ್ಞೆ ನೀಡಿದ ಬಿಜೆಪಿ ಸರ್ಕಾರ   

ಬೆಂಗಳೂರು(ಸೆ.22): ಅನುದಾನ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ. ನಮ್ಮ ಪಕ್ಷದ ಶಾಸಕರಿಗೆ ಬಿಡಿಗಾಸು ಅನುದಾನ ಕೊಟ್ಟಿಲ್ಲ ಎಂದು ಜೆಡಿಎಸ್(JDS) ಸದಸ್ಯ ಎಚ್.ಡಿ.ರೇವಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಸದನದಲ್ಲಿ(Session)ರಾಜ್ಯದಲ್ಲಿ ಪ್ರಗತಿ ಹಂತದಲ್ಲಿರುವ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶ ಹೊರಡಿಸುವ ಬಗ್ಗೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೀರಾವರಿ ಇಲಾಖೆ ಸೇರಿದಂತೆ ಇತರೆ ಇಲಾಖೆಯಲ್ಲಿನ ಅಭಿವೃದ್ಧಿ ಯೋಜನೆಗೆ ಹಿಂದಿನ ಸರ್ಕಾರಗಳು ನೀಡಿರುವ ಅನುದಾನವನ್ನು ಬಿಜೆಪಿ(BJP) ಸರ್ಕಾರವು ತಡೆಯಾಜ್ಞೆ ನೀಡಿದೆ. ಕಾವೇರಿ ಜಲಾನಯನ ಪ್ರದೇಶಗಳ ವ್ಯಾಪ್ತಿಯಲ್ಲಿನ ಜಿಲ್ಲೆಗಳ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕಾರ್ಯಾದೇಶ ನೀಡುವ ವೇಳೆ ತಡೆಯಾಜ್ಞೆ ನೀಡಿರುವುದು ಸರಿಯಲ್ಲ ಎಂದು ಹೇಳಿದರು.

ಸಿದ್ದು ಸಿಎಂ ಆಗಿದ್ದಕ್ಕೆ ನಾನು 2 ಸಲ ಶಾಸಕನಾದೆ: ರೇವಣ್ಣಗೆ ಜೆಡಿಎಸ್‌ ನಾಯಕನಿಂದಲೇ ತಿರುಗೇಟು

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 1277 ಕೋಟಿ ರು. ಅನುದಾನ ನೀಡಿದ್ದರು. 30 ಜಿಲ್ಲೆಗಳಿಗೆ ಹಣಕಾಸು ಒದಗಿಸಲಾಗಿತ್ತು. ಆದರೆ, ಇದರಲ್ಲಿ ಜೆಡಿಎಸ್ ಶಾಸಕರಿಗೆ ಬಿಡಿಗಾಸು ಅನುದಾನ ಕೊಟ್ಟಿಲ್ಲ. ಜೆಡಿಎಸ್ ಪ್ರತಿಭಟನೆ ನಡೆಸಿದ ನಂತರ ರಾಜಕೀಯ ದ್ವೇಷ ಇಲ್ಲದಂತೆ ಅನುದಾನ ಬಿಡುಗಡೆ ಮಾಡುವ ಆಶ್ವಾಸನೆ ನೀಡಿದ್ದರು. ಅನುದಾನ ತಾರತಮ್ಯಗಳನ್ನು ನಿವಾರಣೆ ಮಾಡುವುದಾಗಿಯೂ ತಿಳಿಸಿದ್ದರು. ಆದರೆ, ಅವರ ಪಕ್ಷದಲ್ಲಿನ ಬೆಳವಣಿಗೆಯಿಂದಾಗಿ ಅವರೇ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿದರು ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ