ನಿಖಿಲ್ ಕುಮಾರಸ್ವಾಮಿ ವಿರುದ್ಧ ಆರೋಪ : ಉತ್ತರ ನೀಡಲು ಸಜ್ಜಾದ ಯುವರಾಜ

Kannadaprabha News   | Asianet News
Published : Oct 23, 2020, 02:00 PM ISTUpdated : Oct 23, 2020, 02:02 PM IST
ನಿಖಿಲ್ ಕುಮಾರಸ್ವಾಮಿ ವಿರುದ್ಧ  ಆರೋಪ : ಉತ್ತರ ನೀಡಲು ಸಜ್ಜಾದ ಯುವರಾಜ

ಸಾರಾಂಶ

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿರುದ್ಧ ಆರೋಪ ಕೇಳಿ ಬಂದ ಹಿನ್ನೆಲೆ ಅದಕ್ಕೆ ಉತ್ತರ ನೀಡಲು ಸಜ್ಜಾಗಿದ್ದಾರೆ

ಬೆಂಗಳೂರು (ಅ.23): ನಿಖಿಲ್ ಕುಮಾರಸ್ವಾಮಿ ಪ್ರಚಾರಕ್ಕೆ ಬರುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿಯೇ ಇದೀಗ ಪ್ರಚಾರ ಕಣಕ್ಕೆ ಇಳಿಯಲು ಸಜ್ಜಾಗಿದ್ದಾರೆ. 

ಶನಿವಾರ (ಅ.24)ರಿಂದ ಪ್ರಚಾರದ ಅಂಗಳಕ್ಕೆ ನಿಖಿಲ್ ಬರುತ್ತಿದ್ದಾರೆ.  ಆರ್‌ ಆರ್ ನಗರ ಹಾಗೂ ಶಿರಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು ಆರ್‌ ಆರ್‌ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. 

ಅತ್ತಿಗೆ ಜೊತೆ ಫೋಟೋ ಎಲ್ಲಿ?: ನಿಖಿಲ್ ಕುಮಾರಸ್ವಾಮಿ ಫ್ಯಾನ್ಸ್ .

ಆರ್‌ ಆರ್‌ ನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಕಣಕ್ಕೆ ಇಳಿದಿದ್ದು, ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ. 

ಕುತೂಹಲ ಮೂಡಿಸಿದ ಎಚ್‌ಡಿಕೆ ಪುತ್ರ ನಿಖಿಲ್ ನಡೆ

ಇನ್ನು ತುಮಕೂರು ಶಿರಾ ಕ್ಷೇತ್ರದಲ್ಲಿ ಪ್ರಜ್ವಲ್ ಕಣಕ್ಕೆ ಇಳಿಯುತ್ತಿದ್ದು, ಅಭ್ಯರ್ಥಿ ಅಮ್ಮಾಜಮ್ಮ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. 
 
ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಯುವ ಮತದಾರರನ್ನು ಗುರಿಯಾಗಿಟ್ಟುಕೊಂಡು  ಪ್ರಚಾರಕ್ಕಿಳಿಯಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!