ಜೆಡಿಎಸ್ ಮುಖಂಡ ಪುಟ್ಟಣ್ಣ ಪಕ್ಷದಿಂದ ಉಚ್ಛಾಟನೆ

Published : Nov 07, 2019, 10:30 AM IST
ಜೆಡಿಎಸ್ ಮುಖಂಡ ಪುಟ್ಟಣ್ಣ ಪಕ್ಷದಿಂದ ಉಚ್ಛಾಟನೆ

ಸಾರಾಂಶ

ಪಕ್ಷದ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಈ ಹಿಂದೆ ಆಪ್ತರಾಗಿದ್ದ ಪುಟ್ಟಣ್ಣ ಇತ್ತೀಚಿನ ದಿನಗಳಲ್ಲಿ ದೂರವಾಗಿದ್ದರು. ಇದೀಗ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. 

ರಾಮನಗರ (ನ.07):  ಕಳೆದ ಕೆಲವು ದಿನಗಳಿಂದ ವಿಧಾನಪರಿಷತ್ತಿನ ಜೆಡಿಎಸ್ ಅಸಮಾಧಾನದ ಬೆಳವಣಿಗೆಗಳು ನಡೆಯುತ್ತಿರುವ  ಬೆಳವಣಿಗೆಯಿಂದ ಹಿರಿಯ ಸದಸ್ಯ ಪುಟ್ಟಣ್ಣ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. 

ಪಕ್ಷದ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಈ ಹಿಂದೆ ಆಪ್ತರಾಗಿದ್ದ ಪುಟ್ಟಣ್ಣ ಇತ್ತೀಚಿನ ದಿನಗಳಲ್ಲಿ ದೂರವಾಗಿದ್ದರು. ಕಳೆದ ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು ಮುಂಬರುವ ಜೂನ್‌ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆ ಯಲ್ಲಿ ಪುಟ್ಟಣ್ಣ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಹೊರಬಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರ ಸ್ವಾಮಿ ಹೊರಡಿಸಿರುವ ಆದೇಶದಲ್ಲಿ ತಿಳಿಸ ಲಾಗಿದೆ. ಇತ್ತೀಚೆಗೆ ರಾಮನಗರದ ಕಾರ್ಯ ಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಪುಟ್ಟಣ್ಣ ಜೆಡಿಎಸ್‌ನಿಂದ ಮಾನಸಿಕವಾಗಿ ದೂರು ಉಳಿದಿದ್ದು, ಶೀಘ್ರದಲ್ಲೇ ಅಧಿಕೃತವಾಗಿ ಪಕ್ಷ ತೊರೆಯುವುದಾಗಿ ತಿಳಿಸಿದ್ದರು.

ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದ ದೊಡ್ಡಗೌಡ್ರು.

ಇದಕ್ಕೆ ಹಾಸನದಲ್ಲಿ ಪ್ರತಿಕ್ರಿಯಿಸಿದ್ದ ಮಾಜಿ ಸಚಿವ ಎಚ್ .ಡಿ.ರೇವಣ್ಣ, ಪುಟ್ಟಣ್ಣ ಅವರನ್ನು ನಮ್ಮ ವರಿಷ್ಠರು ಉಪಸಭಾಪತಿ ಮಾಡಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ