
ನವದೆಹಲಿ (ಸೆ.22): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ‘ದಳ’ಪತಿಗಳು ಶುಕ್ರವಾರ ಭೇಟಿಯಾಗುವ ಸಾಧ್ಯತೆ ಇದೆ. ಪೂರ್ವನಿಗದಿಯಂತೆ ಗುರುವಾರವೇ ಈ ಭೇಟಿ ನಡೆಯಬೇಕಿದ್ದರೂ ಮಹಿಳಾ ಮೀಸಲಾತಿ ವಿಧೇಯಕ ಮಂಡನೆ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನ ತಡರಾತ್ರಿ ವರೆಗೂ ಮುಂದುವರಿದ ಕಾರಣ ಅನಿವಾರ್ಯವಾಗಿ ಈ ಭೇಟಿ ಸಾಧ್ಯವಾಗಲಿಲ್ಲ.
ಈ ಮಧ್ಯೆ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ದೇವೇಗೌಡರ ಮನೆಗೆ ಭೇಟಿ ನೀಡಿ ಕೆಲಕಾಲ ಮೈತ್ರಿ ವಿಚಾರವಾಗಿ ಸಮಾಲೋಚನೆ ನಡೆಸಿದರು. ಹಾಸನ, ಮಂಡ್ಯ, ತುಮಕೂರು ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಕುರಿತು ಈ ವೇಳೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಶಾ ಅವರ ಭೇಟಿಗೂ ಮುನ್ನ ಸೀಟು ಹಂಚಿಕೆ ಕುರಿತು ಸ್ಪಷ್ಟತೆ ಪಡೆಯುವ ಉದ್ದೇಶದಿಂದ ಈ ಭೇಟಿ ನಡೆದಿದೆ ಎಂದು ಹೇಳಲಾಗಿದೆ. ಈ ಮೂರು ಕ್ಷೇತ್ರಗಳನ್ನು ಬಿಟ್ಟುಕೊಡುವ ಬಿಜೆಪಿ ಪ್ರಸ್ತಾಪಕ್ಕೆ ಬಹುತೇಕ ಜೆಡಿಎಸ್‌ನಿಂದಲೂ ಗ್ರೀನ್ ಸಿಗ್ನಲ್ ಸಿಗುವ ನಿರೀಕ್ಷೆ ಇದೆ.
ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ದುರಹಂಕಾರದ ಮಾತುಗಳನ್ನಾಡುತ್ತಿದೆ: ಅಶ್ವತ್ಥನಾರಾಯಣ
ಎಚ್‌ಡಿಡಿ ಮನೆಯಲ್ಲಿ ಸಭೆ: ಇದಕ್ಕೂ ಮುನ್ನ ಸಪ್ಧರ್‌ಗಂಜ್‌ನಲ್ಲಿರುವ ದೇವೇಗೌಡರ ನಿವಾಸದಲ್ಲಿ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ಸಾ.ರಾ.ಮಹೇಶ್, ನಿಖಿಲ್ ಕುಮಾರಸ್ವಾಮಿ ಅವರು ಕೆಲಕಾಲ ಸಮಾಲೋಚನೆ ನಡೆಸಿದರು. ಮೈತ್ರಿಯ ರೂಪುರೇಷೆ ಹೇಗಿರಬೇಕು, ಶಾ ಅವರ ಜತೆಗೆ ಮೈತ್ರಿಗೆ ಸಂಬಂಧಿಸಿ ಯಾವ ಯಾವ ವಿಚಾರ ಪ್ರಸ್ತಾಪಿಸಬೇಕು, ಯಾವ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡುವಂತೆ ಕೇಳಬೇಕು ಎಂಬ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಯಿತೆನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.