ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಪತ್ನಿ ವಿರುದ್ದ FIR ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಈ ಪ್ರಕರಣ ದಾಖಲಾಗಿದೆ.
ಬೆಂಗಳೂರು (ಏ.8): ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಪತ್ನಿ ವಿರುದ್ದ FIR ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಈ ಪ್ರಕರಣ ದಾಖಲಾಗಿದೆ. ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಈ ದೂರು ದಾಖಲು ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಿಟಿಡಿ ಪತ್ನಿ ಹಾಗೂ ಹುಣಸೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹರೀಶ್ ಗೌಡ ತಾಯಿ ಲಲಿತಾ ಗುದ್ದಲಿ ಪೂಜೆ ಮಾಡಿದ್ದಾರೆ. ಹಣಸೂರಿನ ಹನಗೋಡು ಹೋಬಳಿ ಕರ್ಣಕುಪ್ಪೆ ಗ್ರಾಮದಲ್ಲಿ ಏಪ್ರಿಲ್ 6 ರಂದು ಗುದ್ದಲಿ ಪೂಜೆ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಲು ನಿಯಮಾನುಸಾರ ಚುನಾವಣಾಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಭಾಗವಹಿಸಿದ್ದರು. ಅಲ್ಲದೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಚುನಾವಣಾ ಘೋಷಣೆ ಕೂಗಿದ್ದರು. ಇದನ್ನ ಪರಿಶೀಲಿಸಿದ ಫ್ಲೈಯಿಂಗ್ ಸ್ಕ್ವಾಡ್ ನ ಅಧಿಕಾರಿ ಸುಬ್ರಹ್ಮಣ್ಯ ರವರು ಕ್ರಮ ಕೈಗೊಳ್ಳುವಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ.
ಬಿಜೆಪಿ ಸೇರಲು ಮುಂದಾಗಿದ್ದ ಹೆಚ್ ಎಂ ರೇವಣ್ಣ- ಡಿಕೆಶಿ ಭೇಟಿ, ಕಾಂಗ್ರೆಸ್ ಟಿಕೆಟ್ ನೀಡುವ
undefined
ಆಣೆ ಪ್ರಮಾಣ ಮಾಡಿದ ಬಿಜೆಪಿ ಮುಖಂಡರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್!
ಆಣೆ ಪ್ರಮಾಣ ಮಾಡಿದ ಬಿಜೆಪಿ ಮುಖಂಡರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದಾಖಲಾಗಿದೆ. ಬಿಜೆಪಿ ಶಾಸಕ, ಎಂಎಲ್ಸಿ ಸೇರಿ ಟಿಕೆಟ್ ಆಕಾಂಕ್ಷೆಗಳ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘಸಿ ಆಕಾಂಕ್ಷಿಗಳು ಐತಿಹಾಸಿ ಸೋಮೇಶ್ವರ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿದ್ದರು. ಪಕ್ಷಕ್ಕೆ ನಿಷ್ಠರಾಗಿರುತ್ತೇವೆ ಅಂತಾ ಪ್ರಮಾಣ ಮಾಡಿದ್ದರು. ಸೋಮೇಶ್ವರ ದೇವಸ್ಥಾನದಲ್ಲಿ ಎಂಎಲ್ಸಿ ಪ್ರದೀಪ್ ಶೆಟ್ಟರ್ ನೇತೃತ್ವದಲ್ಲಿ ಆಣೆ ಪ್ರಮಾಣ ಮಾಡಲಾಗಿತ್ತು. ಗುರುವಾರ ಬೆಳಗ್ಗೆ ದೇವಸ್ಥಾನದಲ್ಲಿ ಶಿರಹಟ್ಟಿ ಕ್ಷೇತ್ರದ ಆಕಾಂಕ್ಷಿಗಳಾದ ಎಂಎಲ್ಸಿ ಪ್ರದೀಪ್ ಶೆಟ್ಟರ್, ಟಿಕೆಟ್ ಆಕಾಂಕ್ಷಿಗಳಾದ ಶಾಸಕ ರಾಮಣ್ಣ ಲಮಾಣಿ ಆಣೆ ಪ್ರಮಾಣ ಮಾಡಿದ್ದರು. ಟಿಕೆಟ್ ಆಕಾಂಕ್ಷಿಗಳಾದ ಡಾ. ಚಂದ್ರು ಲಮಾಣಿ, ಭೀಮಸಿಂಗ್ ರಾಠೋಡ, ಗುರುನಾಥ್ ದಾನಪ್ಪನವರ್. ಉಷಾ ದಾಸರ್ ವಿರುದ್ಧ ಧಾರ್ಮಿಕ ಸ್ಥಳಗಳ ದುರುಪಯೋಗ 1988 ಕಾಯ್ದೆಯಡಿ ಎಫ್ಐಆರ್ ದಾಖಲು ಮಾಡಲಾಗಿದೆ.
C R KESAVAN: ಮಾಜಿ ಕಾಂಗ್ರೆಸ್ ನಾಯಕ ಸಿಆರ್ ಕೇಶವನ್ ಬಿಜೆಪಿಗೆ ಸೇರ್ಪಡೆ!
ಏಪ್ರಿಲ್ 13 ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಅಲ್ಲದೆ, ನಾಮಪತ್ರ ಸಲ್ಲಿಕೆ ಆರಂಭವೂ ಏಪ್ರಿಲ್ 13 ರಂದೇ ಆರಂಭವಾಗಲಿದೆ. ಇನ್ನು, ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.