ಕುಮಾರಸ್ವಾಮಿ ವಿರುದ್ಧ ತೊಡೆತಟ್ಟಿದ್ದ ಜಿಟಿ ದೇವೇಗೌಡಗೆ ಮತ್ತೊಂದು ವಿಜಯ!

By Suvarna NewsFirst Published Apr 6, 2021, 5:48 PM IST
Highlights

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಗೆದ್ದು ಬೀಗಿದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರು, (ಏ.6): ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಮಹಾಮಂಡಲದ ಉಪಾಧ್ಯಕ್ಷರಾಗಿ ಜಗದೀಶ್.ಎಂ ಕವಟಗಿ ಮಠ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಹಾಮಂಡಳದ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಇಂದು (ಮಂಗಳವಾರ) ನಡೆದ ಚುನಾವಣೆಗೆ ಇವರಿಬ್ಬರೇ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರಿಂದ ಚುನಾವಣಾಧಿಕಾರಿ ಮನೋಜ್‍ಚಂದ್ರ ಅವರು ಅವಿರೋಧವಾಗಿ ಆಯ್ಕೆಯನ್ನು ಪ್ರಕಟಿಸಿದರು.

29 ಜಿಲ್ಲಾ ಯೂನಿಯನ್ ಗಳಿಂದ 13 ನಿರ್ದೇಶಕರನ್ನು ಚುನಾವಣೆಯಲ್ಲಿ ಆಯ್ಕೆಮಾಡಲಾಯಿತು. ಜಿ.ಟಿ.ದೇವೇಗೌಡ ಹಾಗೂ ಜಗದೀಶ್.ಎಂ ಕವಟಗಿ ಮಠ ಮುಂದಿನ 5 ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.

ಸ್ವ ಪಕ್ಷದ ಶಾಸಕ ಜಿಟಿಡಿ ಪ್ರಾಬಲ್ಯ ಅಂತ್ಯಗೊಳಿಸಲು ಹೋಗಿ ಮಕಾಡೆ ಮಲಗಿದ ಕುಮಾರಸ್ವಾಮಿ

ನೂತನ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಗೂ ಉಪಾಧ್ಯಕ್ಷ ಜಗದೀಶ್.ಎಂ ಕವಟಗಿ ಮಠ ಅವರನ್ನು ಮಾಜಿ ಸಚಿವ ಎಚ್.ಕೆ.ಪಾಟೀಲ್, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಉಪಾಧ್ಯಕ್ಷ ಜಿ.ಡಿ.ಹರೀಶ್ ಗೌಡ, ಸಹಕಾರ ಮಾರುಕಟ್ಟೆ ಮಹಾಮಂಡಳದ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರ ಮಹಮಂಡಳದ ಅಧ್ಯಕ್ಷೆ ಲಲಿತಾ ಜಿ.ಟಿ.ದೇವೇಗೌಡ, ಸಹಕಾರ ಮಹಿಳಾ ಮಂಡಳದ ಅಧ್ಯಕ್ಷೆ ಶಕುಂತಲಾ ಬೆಲದಾಳೆ ಮತ್ತಿತರರು ಅಭಿನಂದಿಸಿದರು.

 ಇನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಾಲ್ಕು ವಿಭಾಗಗಳ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಾಸಕ ಜಿ.ಟಿ.ದೇವೇಗೌಡ ನೇತೃತ್ವದ 14 ಜನರ ತಂಡ ಗೆಲುವು ಸಾಧಿಸಿತ್ತು.

ತಿಷ್ಠೆಗೆ ಕಾರಣವಾಗಿದ್ದ ಮೈಸೂರು ಹಾಲು ಒಕ್ಕೂಟ (ಮೈಮುಲ್)​ ಚುನಾವಣೆಯಲ್ಲಿ ಜಿಟಿ ದೇವೇಗೌಡ ಅವರನ್ನ ಮಣಿಸಲು ಖುದ್ದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದರು. ಆದರೂ ಎಚ್‌ಡಿಕೆ ಪ್ಲಾನ್ ವರ್ಕೌಟ್ ಆಗದೇ ಮುಖಭಂಗ ಅನುಭವಿಸಿದ್ದರು.

click me!