ಬಿಜೆಪಿ-ಜೆಡಿಎಸ್ ಮೈತ್ರಿ: ಜಾತ್ಯತೀತ ಅಂದರೆ ಏನು?, ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಜಿ.ಟಿ. ದೇವೇಗೌಡ

By Kannadaprabha News  |  First Published Jan 4, 2024, 12:30 AM IST

ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಆಸೆ ತೋರಿಸಿ ಹೆಣ್ಣು ಮಕ್ಕಳು ಕಣ್ಣೀರು ಹಾಕುವಂತೆ ರಾಜ್ಯ ಸರ್ಕಾರ ಮಾಡಿದೆ. ಈಗ ಗ್ಯಾರಂಟಿ ಯೋಜನೆಗಳ ಕಥೆ ಏನಾಗಿದೆ? ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿ ಮಹಿಳೆಯರಿಗೆ 2 ಸಾವಿರ ಹಣ ತಲುಪುತ್ತಿಲ್ಲ. ಈ ಕುರಿತು ಹೋದಲ್ಲಿ ಬಂದಲ್ಲಿ ಮಹಿಳೆಯರು ಅಳಲು ತೋಡಿಕೊಳ್ಳುತ್ತಿದ್ದಾರೆ: ಶಾಸಕ ಜಿ.ಟಿ. ದೇವೇಗೌಡ 


ಮೈಸೂರು(ಜ.04):  ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಜಾತ್ಯತೀತವಾಗಿ ಉಳಿದಿಲ್ಲ ಎಂಬ ಕಾಂಗ್ರೆಸ್ ನಾಯಕರ ಟೀಕೆಗೆ ಶಾಸಕ ಜಿ.ಟಿ. ದೇವೇಗೌಡ ತಿರುಗೇಟು ನೀಡಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ಯತೀತ ಅಂದರೆ ಏನು? ಮೊದಲು ಹೇಳಿ. ಸಿದ್ದರಾಮಯ್ಯ ಜೊತೆ ಕುರುಬರು, ದೇವೇಗೌಡರ ಜೊತೆ ಒಕ್ಕಲಿಗರು, ಯಡಿಯೂರಪ್ಪ ಜೊತೆ ಲಿಂಗಾಯತರು, ಮಲ್ಲಿಕಾರ್ಜುನ ಖರ್ಗೆ ಜೊತೆ ದಲಿತರು ಮಾತ್ರ ಇರೋದು ಅಂದ್ರೇ ಜಾತ್ಯತೀತಾನ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಆಸೆ ತೋರಿಸಿ ಹೆಣ್ಣು ಮಕ್ಕಳು ಕಣ್ಣೀರು ಹಾಕುವಂತೆ ರಾಜ್ಯ ಸರ್ಕಾರ ಮಾಡಿದೆ. ಈಗ ಗ್ಯಾರಂಟಿ ಯೋಜನೆಗಳ ಕಥೆ ಏನಾಗಿದೆ? ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿ ಮಹಿಳೆಯರಿಗೆ 2 ಸಾವಿರ ಹಣ ತಲುಪುತ್ತಿಲ್ಲ. ಈ ಕುರಿತು ಹೋದಲ್ಲಿ ಬಂದಲ್ಲಿ ಮಹಿಳೆಯರು ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದು ಅವರು ದೂರಿದರು.

Latest Videos

undefined

ಡಿಕೆಶಿಯನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ: ಸಚಿವ ತಂಗಡಗಿ

ತಂತ್ರಾಂಶ ಸಮಸ್ಯೆಯಿಂದ ಹಣ ತಲುಪಿಲ್ಲ ಎನ್ನುತ್ತಿದ್ದಾರೆ. ಆಸೆ ತೋರಿಸಿ ಹೆಣ್ಣು ಮಕ್ಕಳ ಕಣ್ಣೀರು ಹಾಕಿಸುತ್ತಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದೆ. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಾಶವಾಗಿದೆ. 38 ಸಾವಿರ ಕೋಟಿ ನಷ್ಟವಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹೇಳಿದ್ದಾರೆ. ಆದರೂ ರಾಜ್ಯ ಸರ್ಕಾರದಿಂದ ಬರ ಪರಿಹಾರಕ್ಕೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ ಎಂದು ಅವರು ಆರೋಪಿಸಿದರು.

ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ದೂರುತ್ತಿರುವ ರಾಜ್ಯ ಸರ್ಕಾರ, ಮೊದಲು ತನ್ನ ಪಾಲಿನ ಪರಿಹಾರ ಬಿಡುಗಡೆಗೊಳಿಸಬೇಕು. ರಾಜ್ಯದ ಪಾಲಿನ ಬರಪರಿಹಾರ ಬಿಡುಗಡೆಯಾದ ಬಳಿಕ, ಕೇಂದ್ರ ಸರ್ಕಾರ ಕೊಡಬೇಕಿರುವ ಪರಿಹಾರವನ್ನು ನೀಡುತ್ತದೆ ಎಂದರು. ಯಾವುದೇ ಅಭಿವೃದ್ಧಿ ಕಾರ್ಯಗಳಿಗೂ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಅವರು ತಿಳಿಸಿದರು.

click me!